ಧಾರವಾಡ: ಧಾರವಾಡ ಹೈಕೋರ್ಟ್ಗೆ ಬಾಂಬ್ ಇಟ್ಟಿರುವುದಾಗಿ ಅಡಿಷನಲ್ ಜನರಲ್ ಅವರ ಇಮೇಲ್ಗೆ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆ ಅಲರ್ಟ್ ಆಗಿರುವ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ನೇತೃತ್ವದಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ. ಕೋರ್ಟ್ ಹಾಲ್ನಿಂದ ನ್ಯಾಯಮೂರ್ತಿಗಳು, ವಕೀಲರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಹೊರಹಾಕಿ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ನಡೆಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿದ್ದು, …
Read More »Daily Archives: ಜನವರಿ 6, 2026
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿತವಾಗಿರುವ ಘಟನೆ ನಗರದ ಕ್ಲಬ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಚಾಕು ಇರಿತಕ್ಕೆ ಒಳಗಾದವರು. ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಬಸವಂತ ಅವರ ಮೇಲೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು …
Read More »ಆರಂಭವಾದ ದಿನವೇ ಬಂದ್ ಆದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ
ಆರಂಭವಾದ ದಿನವೇ ಬಂದ್ ಆದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ ಹಾವೇರಿ : ನಗರದಲ್ಲಿರುವ ಸಾವಿರಾರು ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ಡಿಸೆಂಬರ್ 20 ರಂದು ನಗರದ ಗುತ್ತಲ ರಸ್ತೆಯಲ್ಲಿ ಎಪಿಎಂಸಿ ಯಾರ್ಡ್‌ನಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿತ್ತು. ಹಾವೇರಿ ನಗರಸಭೆ ಮತ್ತು ಪಶುಸಂಗೋಪನೆ ಇಲಾಖೆಯ ಸಹಭಾಗಿತ್ವದಲ್ಲಿ ಈ ಕೇಂದ್ರ ಆರಂಭ ಮಾಡಲಾಗಿತ್ತು. ಆದರೆ, ಕೇಂದ್ರ ಆರಂಭವಾದ ದಿನವೇ ಬಂದಾಗಿದೆ. ನಗರದ 25 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿದ ವೈದ್ಯರ ತಂಡ ಶಸ್ತ್ರಚಿಕಿತ್ಸೆಯನ್ನ …
Read More »ಸಿದ್ದರಾಮಯ್ಯ ಸಿಎಂ ಆಗಿ ದಾಖಲೆ ಮಾಡುವುದು ಮುಖ್ಯವಲ್ಲ, ಎಷ್ಟರಮಟ್ಟಿಗೆ ಜನಪರ ಆಡಳಿತ ನೀಡಿದ್ದಾರೆಂಬುದು ಮುಖ್ಯ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ದೇವರಾಜ ಅರಸು ಅವರು ಎರಡು ಅವಧಿ ಗ್ಯಾಪ್ ಇಲ್ಲದೇ ಸಿಎಂ ಆಗಿ ದಾಖಲೆ ಮಾಡಿದರು. ಆದರೆ, ಸಿದ್ದರಾಮಯ್ಯನವರು ಸತತ ಎರಡು ಅವಧಿ ಸಿಎಂ ಆಗಿಲ್ಲ, ಗ್ಯಾಪ್ ಇದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾಖಲೆ ಮಾಡುವುದು ಮುಖ್ಯವಲ್ಲ. ಜನಪರ ಆಡಳಿತ ಎಷ್ಟರಮಟ್ಟಿಗೆ ನೀಡಿದರು ಅನ್ನೋದು ಮುಖ್ಯ. ಈಗಿನ ಸಿದ್ದರಾಮಯ್ಯನವರ ಅವಧಿಯಲ್ಲಿ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಸಿದ್ದರಾಮಯ್ಯನವರು ಈಗ …
Read More »ಮುಂದಿನ ಬಜೆಟ್ ಅನ್ನೂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ಮುಂದಿನ ಬಜೆಟ್ ಅನ್ನೂ ಸಿದ್ದರಾಮಯ್ಯನವರೇ ಮಂಡಿಸುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೆ ಅಂತ ಭಾವಿಸಿದ್ದೇವೆ. ಈಗಾಗಲೇ ಎರಡೂವರೆ ವರ್ಷ ಮುಗಿಸಿದ್ದಾರೆ. ಸಿಎಂ ಆಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ ಎಂದು ಸ್ವತಃ ಅವರೇ ಹೇಳಿದ್ದಾರೆ ಎಂದರು. ದೇವರಾಜ ಅರಸು ಅವರ ಸುದೀರ್ಘ ಸೇವೆಯ ನಂತರ ಸಿಎಂ ಸಿದ್ದರಾಮಯ್ಯ ಸೇವೆ ಮುಂದುವರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ, ನಮಗೆ …
Read More »ದೇವರಾಜ ಅರಸು ಅವರ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದಿಗೆ 2,792 ದಿನಗಳಾಗುತ್ತಿದ್ದು, ಈ ಮೂಲಕ ರಾಜ್ಯದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದ ದಿ.ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ನಾಳೆ ಅರಸು ಅವರ ದಾಖಲೆಯನ್ನೂ ಮುರಿದು, ರಾಜ್ಯದಲ್ಲಿ ಸುದೀರ್ಘ ಅವಧಿಗೆ ಸಿಎಂ ಆದ ಹೊಸ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ದೇವರಾಜ ಅರಸು 2,792 ದಿನಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿದ್ದದ್ದು ಈವರೆಗಿನ ದಾಖಲೆಯಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ಸಿಎಂ …
Read More »ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ, ದೇವರಾಜ ಅರಸು ಹಾಗೂ ನಾನು ಮೈಸೂರಿನವರೇ. ಇಬ್ಬರೂ ದೀರ್ಘಾವಧಿ ಮುಖ್ಯಮಂತ್ರಿಗಳಾಗಿದ್ದು, ಕಾಲಘಟ್ಟ ಬೇರೆ …
Read More »ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ಜರುಗಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ.
ಹುಕ್ಕೇರಿ : ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ಜರುಗಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ. ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸ ಲಾಗುವದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರು ಮಾತನಾಡಿ ತಾಲೂಕಿನ ಜೆ ಜೆ ಎಂ ಕಾಮಗಾರಿ ಯನ್ನು ರಸ್ತೆ ಪಕ್ಕದಲ್ಲೇ ತಗ್ಗು ಗುಂಡಿ ತಗೆದು ಹಾಗೆ ಬಿಟ್ಟಿದ್ದಾರೆ ಅಲ್ಕದೆ ಕೆಲ ಗ್ರಾಮಗಳಲ್ಲಿ …
Read More »ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಸಿಸಿಎಸ್ಆರ್ ನೀತಿ ರೂಪಿಸಿಕೊಂಡ ಸರ್ಕಾರ: ಪ್ರಸ್ತಾಪಿತ ನೀತಿ ಹೀಗಿದೆ
ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಈ ಸಂಬಂಧ ರಾಜ್ಯದ ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಸಿಎಸ್ಆರ್ ಹೂಡಿಕೆ ಉತ್ತೇಜಿಸಲು ಸಿಸಿಎಸ್ಆರ್ ನೀತಿ ರೂಪಿಸಿದೆ. ಕರ್ನಾಟಕದಲಿನ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೊರೆ ಹೋಗಿದೆ. ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿಯನ್ನು ಬಹುವಾಗಿ ಸರ್ಕಾರಿ ಶಾಲೆಗಳ ಮೇಲೆ ಹೂಡಿಕೆ ಮಾಡಲು ರಾಜ್ಯ ಸರ್ಕಾರ …
Read More »
Laxmi News 24×7