Breaking News

Daily Archives: ಜನವರಿ 10, 2026

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

ಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ ಮಠದ ಪರಮಪೂಜ್ಯ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿ ಮಠದ ಪರಮ ಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು,ಸವತ್ತಿ ಮೂಲಿಮಠದ ಪರಮಪೂಜ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸುಳ್ಳದ ಉಮಾಚಂದ್ರ ಮಂಗಲ ಕಾರ್ಯಾಲಯ, ಸವದತ್ತಿಯಲ್ಲಿ ಜರುಗಿದ ಶ್ರೀ ಲಿಂಗರಾಜ ದೇಸಾಯಿ ಅವರ 165ನೇ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ತ್ಯಾಗ, ಸೇವೆ, …

Read More »

ಕ್ಷೇತ್ರದ ಸರ್ವಾಂಗೀಣ ಪ್ರಗತಿಯೇ ನಮ್ಮ ಮೊದಲ ಆದ್ಯತೆ. ₹2.15 ಕೋಟಿ ವೆಚ್ಚದಲ್ಲಿ ಸವದತ್ತಿಯ ಪ್ರಮುಖ ಜಂಕ್ಷನ್ ಅಭಿವೃದ್ಧಿಗೆ ಭೂಮಿ ಪೂಜೆ!!

ಸುಗಮ ಸಂಚಾರಕ್ಕೆ ನಮ್ಮ ಆದ್ಯತೆ – ₹2.15 ಕೋಟಿ ವೆಚ್ಚದಲ್ಲಿ ಸವದತ್ತಿಯ ಪ್ರಮುಖ ಜಂಕ್ಷನ್ ಅಭಿವೃದ್ಧಿಗೆ ಭೂಮಿ ಪೂಜೆ!! ನಮ್ಮ ಸವದತ್ತಿ ಪಟ್ಟಣದ ಪ್ರಮುಖ ಸಂಚಾರ ಕೇಂದ್ರವಾದ ಶ್ರೀ ಬಸವೇಶ್ವರ ವೃತ್ತದಲ್ಲಿ (ಕರೀಕಟ್ಟಿ ಕ್ರಾಸ್) ವಾಹನ ಸವಾರರು ಎದುರಿಸುತ್ತಿದ್ದ ಟ್ರಾಫಿಕ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಇಂದು ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಕೆಶಿಪ್-ಎಡಿಬಿ (KSHIP-ADB) ಯೋಜನೆಯಡಿ, ಅಂದಾಜು ₹2.15 ಕೋಟಿ ವೆಚ್ಚದಲ್ಲಿ ಈ ವೃತ್ತವನ್ನು ಅತ್ಯಾಧುನಿಕ ‘ಟ್ರಾಫಿಕ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಮುಳ್ಳೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಮಹಿಳೆ ವಿವಸ್ತ್ರ ಪ್ರಕರಣ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ; ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ

ಹುಬ್ಬಳ್ಳಿ: ಮಹಿಳೆ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ಸರ್ಕಲ್​​ನಿಂದ ತಹಶೀಲ್ದಾರ್​​ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ, ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ಸಂಗೊಳ್ಳಿ ರಾಯಣ್ಣ ಸರ್ಕಲ್​ನಲ್ಲಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ , ‘ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಪೊಲೀಸರಿಗಿಂತ …

Read More »

ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆ ನೀಡಿದ್ದಾರೆ. ದೆಹಲಿಯ ದಾನಿಯೊಬ್ಬರು ನೀಡಿರುವ 2 ಕೋಟಿ ರೂ ವೆಚ್ಚದ ಚಿನ್ನದ ಭಗವದ್ಗೀತೆಯನ್ನು ಅವರು ಕೃಷ್ಣನಿಗೆ ಸಮರ್ಪಿಸಿದ್ದಾರೆ. ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಎಸ್.ಲಕ್ಷ್ಮಿ ನಾರಾಯಣನ್ ಎಂಬವರು ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ವಿಶಿಷ್ಟ …

Read More »

ಪೊಲೀಸರೇ ದುಶ್ಯಾಸನರಾಗಿದ್ದಾರೆ: ಸಿಐಡಿ ತನಿಖೆಯಿಂದ ನ್ಯಾಯ ಸಿಗೋಲ್ಲ, ನ್ಯಾಯಾಂಗ ತನಿಖೆಯಾಗಬೇಕು; ಅಶೋಕ್, ಜೋಶಿ ಒತ್ತಾಯ

ಹುಬ್ಬಳ್ಳಿ: ರಾಜ್ಯದಲ್ಲಿ ಮಹಿಳೆಯರು ಗೌರವದಿಂದ ಬದುಕುವ ಹಕ್ಕು ಕಸಿದುಕೊಳ್ಳಲಾಗಿದೆ. ಪೊಲೀಸರೇ ದುಶ್ಯಾಸನರಾಗಿದ್ದಾರೆ. ಜಯನಗರ ಪ್ರಕರಣದಲ್ಲಿ ಕಳ್ಳರಾಗಿದ್ದರು. ಈ ಪ್ರಕರಣದ ಸಿಪಿಐ ಹಾಗೂ ಪಿಎಸ್ ಐ ಅಮಾನತು ಆಗಬೇಕು. ನ್ಯಾಯಂಗ ತನಿಖೆಗೆ ಒಪ್ಪಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ‌ಅಶೋಕ್​ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಛಲವಾದಿ ನಾರಾಯಣ ಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಇಡೀ ಪೊಲೀಸ್​ ಠಾಣೆ ಕಾಂಗ್ರೆಸ್ …

Read More »

ಪತ್ನಿಯನ್ನು ಹೊತ್ತು ಅಂಜನಾದ್ರಿಯ 575 ಮೆಟ್ಟಿಲು ಏರಿದ ಭೂಪ

ಗಂಗಾವತಿ(ಕೊಪ್ಪಳ): ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರಾಕೃತಿಕ ತಾಣವಾಗಿರುವ ಚಿಕ್ಕರಾಂಪೂರದ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದ ನಾನಾ ಭಾಗದಿಂದ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಒಬ್ಬೊಬ್ಬರು ಒಂದೊಂದು ಹರಕೆ ಹೊತ್ತು ಬರುವುದು ಸರ್ವೇ ಸಾಮಾನ್ಯ. ಭಾರವಾದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಏರಿ ಹರಕೆ ತೀರಿಸಿರುವ ಭಕ್ತರ ಬಗ್ಗೆ ಕೇಳಿರುತ್ತೀರಿ, ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಪತ್ನಿಯನ್ನೇ ಎತ್ತಿಕೊಂಡು 575 ಮೆಟ್ಟಿಲು ಹತ್ತಿ ಗಮನ ಸೆಳೆದಿದ್ದಾನೆ. ಯಲಬುರ್ಗಾ ಮೂಲದ ಶರಣು …

Read More »

ಲಂಚ ಪ್ರಕರಣದಲ್ಲಿ ಬೆಂಗಳೂರಿನ ಸಿಪಿಆರ್‌ಐ ಜಂಟಿ ನಿರ್ದೇಶಕ ಸೇರಿ ಇಬ್ಬರನ್ನ ಬಂಧಿಸಿದ ಸಿಬಿಐ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಪಿಆರ್​ಐ) ನ ಜಂಟಿ ನಿರ್ದೇಶಕ ರಾಜಾರಾಮ್ ಮೋಹನರಾವ್ ಚೆನ್ನು ಮತ್ತು ಸುಧೀರ್ ಗ್ರೂಪ್ ಆಫ್ ಕಂಪನಿಗಳ ನಿರ್ದೇಶಕ ಅತುಲ್ ಖನ್ನಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ದಾಳಿ ವೇಳೆ 3.59 ಕೋಟಿ ರೂ. ನಗದು, 4 ಲಕ್ಷ ರೂ.ಗೂ ಅಧಿಕ ಮೌಲ್ಯದ ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ಸುಧೀರ್ ಗ್ರೂಪ್ ಆಫ್ ಕಂಪನಿಗಳು ಉತ್ಪಾದಿಸುವ ವಿದ್ಯುತ್ ಉಪಕರಣಗಳಿಗೆ ಅನುಕೂಲಕರ …

Read More »

ಭಾಷಾ ಮಸೂದೆ ಮರುಪರಿಶೀಲಿಸಿ: ಕೇರಳ ಸಿಎಂಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕೇರಳ ಸರ್ಕಾರ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್​ಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ? ಆತ್ಮೀಯ ಪಿಣರಾಯಿ ವಿಜಯನ್ ಅವರೇ ಪರಸ್ಪರ ಗೌರವ, ಒಕ್ಕೂಟ ವ್ಯವಸ್ಥೆಯೊಳಗಿನ ಸಹಕಾರ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಭಾವನೆಯಿಂದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಮೌಲ್ಯಗಳು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಬಂಧವನ್ನು ದೀರ್ಘಕಾಲದಿಂದ …

Read More »