Breaking News

Daily Archives: ಜನವರಿ 22, 2026

ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ಟೀಕಿಸಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ

ಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು‌ ಮಂಡಿಸಿ, ಅದರಲ್ಲಿನ ಅಂಶವನ್ನು ಓದದೇ ತಾವೇ ಬರೆದು ತಂದ ಪ್ಯಾರಾವನ್ನು ಓದಿ ಸದನದಿಂದ ತೆರಳಿದರು. ಬಳಿಕ ಪುನಾರಂಭಗೊಂಡ ಕಲಾಪದಲ್ಲಿ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಮಂಡನೆ ಮಾಡಿದರು. ಭಾಷಣದ 11 ಪ್ಯಾರಾ ವಿಬಿ ಜಿ ರಾಮ್ ಜಿ ವಿರುದ್ಧ …

Read More »

ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದೆ‌. ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ‌ ಸೇರಿದಂತೆ ಸರ್ಕಾರದ ಪ್ರಮುಖ ಸಾಧನೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟು 46 ಪುಟಗಳ 122 ಪ್ಯಾರಾಗಳ ಭಾಷಣದಲ್ಲಿ ಕೆಂದ್ರ ಸರ್ಕಾರದ ವಿರುದ್ಧ ಕಟು ಟೀಕೆಯ ಜೊತೆಗೆ ರಾಜ್ಯ ಸರ್ಕಾರಗಳ ಯೋಜನೆ, ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, …

Read More »

ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ

ಹುಬ್ಬಳ್ಳಿ/ಚಿಕ್ಕಮಗಳೂರು: ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಗೌಶಿಯಾ ಟೌನ್‌ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಅಹ್ಮದ್ ರಜಾಕ್ ಶಹಪೂರ್ (48) ಮೃತ ದುರ್ದೈವಿ. ಇವರು ಹಳೆ ಹುಬ್ಬಳ್ಳಿ ನಿವಾಸಿಯಾಗಿದ್ದು, ಖಾಸಗಿ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದೆ. ಈತ ಮೃತ ಅಹ್ಮದ್ ರಜಾಕ್ ಅವರ ಸಹೋದರನ ಮಗಳ …

Read More »

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ ಮಂಡಿಸಬೇಕಾದ ಭಾಷಣದಲ್ಲಿ ಕೆಲ ಆಕ್ಷೇಪಾರ್ಹ ಅಂಶಗಳ ಕೈಬಿಡಬೇಕೆಂಬ ರಾಜ್ಯಪಾಲರ ಸೂಚನೆಯನ್ನು ಸರ್ಕಾರ ತಿರಸ್ಕರಿಸಿದೆ‌. ಈ ಮಧ್ಯೆ ಅಧಿವೇಶನಕ್ಕೆ ರಾಜ್ಯಪಾಲರು ಬಾರದಿದ್ದರೆ ಕಾನೂನು ಹೋರಾಟಕ್ಕೆ ಸರ್ಕಾರ ಸಜ್ಜುಗೊಂಡಿದೆ. ರಾಜ್ಯ ಸರ್ಕಾರ ಸಿದ್ದಪಡಿಸಿದ ಭಾಷಣದಲ್ಲಿ ಕೇಂದ್ರದ ವಿರುದ್ಧ ಧೋರಣೆಗಳಿರುವ 11 ಪ್ಯಾರಾಗಳನ್ನು ಕೈ ಬಿಡಬೇಕೆಂದು ಸರ್ಕಾರಕ್ಕೆ ಸೂಚಿಸಿದ್ದರು. ಈ ಸಂಬಂಧ ಕಾನೂನು ಸಚಿವ ಹೆಚ್.ಕೆ‌.ಪಾಟೀಲ್ …

Read More »

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

ದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಈ ಹಿಂದೆಯೂ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಹಲವಾರು ಬಾರಿ ಅವಕಾಶಗಳು ಸಿಕ್ಕಿತು. ಇದೀಗ ಮತ್ತೊಮ್ಮೆ ಕರ್ನಾಟಕಕ್ಕೆ ಅವಕಾಶ ಸಿಕ್ಕಿದೆ. ಈ ಬಾರಿ ವಿಶೇಷ ಸ್ತಬ್ಧಚಿತ್ರಗಳನ್ನು ಕರ್ನಾಟಕ ನೀಡಿಲಿದೆ. ಇದಕ್ಕೂ ಮುನ್ನ ಇದರ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​ ನಡೆಯಲಿದೆ. ಈ ಬಾರಿ ಟ್ಯಾಬ್ಲೋ …

Read More »

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ!

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ  ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪ್ಯಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕು ಎಂದು ಪಟ್ಟು ಹಿಡಿದಿದೆ. ಈ …

Read More »

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

ಬಳ್ಳಾರಿ: ಬ್ಯಾನರ್ ಗಲಭೆ ಖಂಡಿಸಿ ಜನವರಿ 17 ರಂದು ನಡೆದ ಬೃಹತ್ ಸಮಾವೇಶದಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಸೇರಿದಂತೆ ಸಂಪೂರ್ಣ ವಿವರ ಬಹಿರಂಗಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು  ಇಂದು ವಿಷಾದ ವ್ಯಕ್ತಪಡಿಸಿ ಕ್ಷಮೆ ಕೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ಗಲಭೆ ಖಂಡಿಸಿ ನಡದ ಸಮಾವೇಶದಲ್ಲಿ ಸಾಕಷ್ಟು ವಿಚಾರಗಳನ್ನ ನಮ್ಮ ನಾಯಕರು ಮಾತನಾಡಿದ್ದಾರೆ. ನಾನೂ ಮಾತನಾಡಿದ್ದೇನೆ. ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ …

Read More »

ಕಾಂಗ್ರೆಸ್ ಸರ್ಕಾರದಿಂದ ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಆರ್.ಅಶೋಕ್‌

ಬೆಂಗಳೂರು: ಕಾಂಗ್ರೆಸ್  ಸರ್ಕಾರ ವಿಶೇಷ ಅಧಿವೇಶನ  ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌  ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ  ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ …

Read More »

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ  ನಡೆಯಲಿಲ್ಲ. ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು ಈ ಅರ್ಜಿಯ ವಿಚಾರಣೆ ನಡೆಸಲು ಕಳೆದ ವರ್ಷದ ಅಕ್ಟೊಬರ್‌ನಲ್ಲಿ ನಿಗದಿಯಾಗಿತ್ತು. ಆದರೆ ಇಬ್ಬರೂ ನ್ಯಾಯಮೂರ್ತಿಗಳು ಬೇರೆ ಬೇರೆ ಪೀಠಗಳಲ್ಲಿ ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಲು ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿಲ್ಲ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 …

Read More »

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ? ರೈತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ‘ಅಕ್ರಮ-ಸಕ್ರಮ’ ಯೋಜನೆಯನ್ನು ಪುನರಾರಂಭಿಸಿದೆ. ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಾನೂನುಬದ್ಧ ಸಂಪರ್ಕ ನೀಡಲಾಗುತ್ತಿದೆ. 500 ಮೀಟರ್ ಒಳಗೆ ಇರುವ ಪಂಪ್‌ಸೆಟ್‌ಗಳಿಗೆ ನಿಗದಿತ ಶುಲ್ಕದಲ್ಲಿ ಸಕ್ರಮಗೊಳಿಸಲಾಗುತ್ತದೆ. ದೂರವಿರುವ ಪಂಪ್‌ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯಡಿ ಸೌರಶಕ್ತಿ ಪಂಪ್‌ಸೆಟ್‌ ಅಳವಡಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ರೈತರಿಗೆ ಉಚಿತ …

Read More »