Breaking News

Daily Archives: ಜನವರಿ 25, 2026

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ  ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡ  ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನು ಅರ್ಜಿಯನ್ನು ಚಿಕ್ಕಬಳ್ಳಾಪುರ ಅಪರ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಜ.14 ರಂದು ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಹತ್ತು ದಿನಗಳಿಂದಲೂ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಈ ಬೆನ್ನಲ್ಲೇ ಕೆಪಿಸಿಸಿ ವತಿಯಿಂದ ರಾಜೀವ್ ಗೌಡ ಅಮಾನತು ಸಹ ಮಾಡಲಾಗಿತ್ತು. ಪೊಲೀಸರಿಗೆ ಸವಾಲಾದ ರಾಜೀವ್ ಗೌಡ …

Read More »

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ ಲಡ್ಡು ತುಪ್ಪ ಕಲಬೆರಕೆ  ಪ್ರಕರಣದಲ್ಲಿ ಕೇಂದ್ರ ತನಿಖಾ ದಳ  ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಪವಿತ್ರ ಪ್ರಸಾದವನ್ನು ಕಳಂಕಗೊಳಿಸುವ ಭ್ರಷ್ಟಾಚಾರದ ಜಾಲವನ್ನು ಬಹಿರಂಗಪಡಿಸಿದೆ. ನೆಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಲ್ಲಿಸಲಾದ ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 36 ಮಂದಿ ಪ್ರಮುಖ ಆರೋಪಿಗಳನ್ನು ಹೆಸರು ನಮೂದಿಸಲಾಗಿದೆ. ಇವರಲ್ಲಿ ಡೈರಿ ಮಾಲೀಕರು, ಮಾಜಿ ಟಿಟಿಡಿ ಅಧಿಕಾರಿಗಳು ಸೇರಿದ್ದಾರೆ. 15 ತಿಂಗಳುಗಳ ಕಾಲ 12 …

Read More »

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

ನವದೆಹಲಿ: 18ನೇ ರೋಜಗಾರ್ ಮೇಳ  ಹಿನ್ನೆಲೆ ಇಂದು ದೇಶಾದ್ಯಂತದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ  ಅವರು ವಿತರಿಸಿದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿತ್ತು. ದೇಶದ 45 ವಿವಿಧ ಸ್ಥಳಗಳಲ್ಲಿ ಯುವಕರು ಭಾಗವಹಿಸಿದ್ದರು. ಈ ರೋಜಗಾರ್ ಮೇಳದ ಮೂಲಕ ಆರಂಭದಿಂದ ಇಲ್ಲಿಯವರೆಗೆ ಒಟ್ಟು 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ …

Read More »

ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ

ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಂಘದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಖಾಸಗಿ ಗಾರ್ಡ್ ನಲ್ಲಿ ಆಯೋಜಿಸಲಾದ ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗುತ್ತಿಗೆದಾರರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವುದು ಸರ್ಕಾರದ …

Read More »