Breaking News

Daily Archives: ಜನವರಿ 30, 2026

ಹಾಸನ | ರಸ್ತೆ ಬದಿ ಕಸ ಹಾಕ್ತಿದ್ದವರ ಮನೆ ಅಂಗಳಕ್ಕೆ ಒಂದು ಲೋಡ್‌ ತ್ಯಾಜ್ಯ ಸುರಿದ ಪಾಲಿಕೆ ಸಿಬ್ಬಂದಿ

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ  ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ. ಹಾಸನ  ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರ. ಆದರೂ ರಸ್ತೆ ಬದಿ ಕಸ ಎಸೆಯುತ್ತಿದ್ದರು. ಬೆಳಿಗ್ಗೆ ಪೌರಕಾರ್ಮಿಕರು ಒಂದು ಲೋಡ್ ಕಸವನ್ನು …

Read More »

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ  ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತ  ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್‌ಗೆ ಒಳಗಾದವರು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್‌ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ …

Read More »

ಕ್ಯೂಬಾಗೆ ತೈಲ ಪೂರೈಸುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ; ಮೆಕ್ಸಿಕೊ ಮೇಲೆ ಒತ್ತಡ ಹೆಚ್ಚಿಸಿದ ಟ್ರಂಪ್

ವಾಷಿಂಗ್ಟನ್: ಕ್ಯೂಬಾಗೆ  ತೈಲ ಮಾರಾಟ ಮಾಡುವ ಅಥವಾ ಸರಬರಾಜು ಮಾಡುವ ಯಾವುದೇ ದೇಶದ ಸರಕುಗಳ ಮೇಲೆ ಸುಂಕ  ವಿಧಿಸುವ ಪ್ರಸ್ತಾಪವನ್ನು ಹೊಂದಿರುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಸಹಿ ಹಾಕಿದ್ದಾರೆ. ದ್ವೀಪ ರಾಷ್ಟ್ರಕ್ಕೆ ದೀರ್ಘಕಾಲದಿಂದ ಕಚ್ಚಾ ತೈಲದ ಪ್ರಮುಖ ಪೂರೈಕೆದಾರನಾಗಿರುವ ಮೆಕ್ಸಿಕೊದ ಮೇಲಿನ ಹಿಡಿತವನ್ನು ಬಿಗಿಗೊಳಿಸುವ ಪ್ರಯತ್ನ ಇದಾಗಿದೆ. ಮೆಕ್ಸಿಕೊ ಅಧ್ಯಕ್ಷ ಕ್ಲೌಡಿಯಾ ಷೈನ್‌ಬಾಮ್ ಅವರು ಇತ್ತೀಚೆಗೆ ತಮ್ಮ ಸರ್ಕಾರ ಕ್ಯೂಬಾಗೆ ತೈಲ ರವಾನೆಯನ್ನು ತಾತ್ಕಾಲಿಕವಾಗಿ ನಿಲುಗಡೆ …

Read More »

ಮಂಡ್ಯದ ಗ್ರಾಮ ಪಂಚಾಯ್ತಿ ಇ-ಖಾತೆಗಳಲ್ಲಿ ಅಕ್ರಮ

ಮಂಡ್ಯ: ಸಕ್ಕರೆ ನಾಡು ಮಂಡ್ಯ  ಜಿಲ್ಲೆಯಲ್ಲಿ ಭೂ ಅಕ್ರಮಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ನಾಗಮಂಗಲದಲ್ಲಿ ಬಗರ್ ಹುಕುಂನಲ್ಲಿ ಕೋಟ್ಯಂತ್ಯರ ರೂಪಾಯಿ ಅಕ್ರಮವಾದ ಬೆನ್ನಲ್ಲೇ ಇದೀಗ ಮಂಡ್ಯದ ಗ್ರಾಮ ಪಂಚಾಯತಿಯಲ್ಲಿ  ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಸರ್ಕಾರ ಮನೆ ಕಟ್ಟುವವರಿಗೆ ಎಲ್ಲಾ ಸವಲತ್ತುಗಳನ್ನ ನೀಡಬೇಕೆಂದು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳ ಮೂಲಕ ಇ-ಖಾತೆಯನ್ನ  ನೀಡುತ್ತಿದೆ. ಈ ಇ-ಖಾತೆಯನ್ನ ಮಂಡ್ಯದ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. …

Read More »

ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

ಚಾಮರಾಜನಗರ: ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ಆದರೂ ಧೈರ್ಯದಿಂದ ಪ್ರತಿರೋಧ ತೋರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ …

Read More »

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ …

Read More »

65 ಎಕರೆ ಅರಣ್ಯ ಭೂಮಿಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ

ಅಗರ್ತಲ: ತ್ರಿಪುರದ  ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು  ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು ಬಿಜೋಯ್ ನಗರಗಳ ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ವೇಳೆ 1.80 ಲಕ್ಷ ಪ್ರೌಢ ವ್ಯವಸ್ಥೆ ಗಾಂಜಾ ಸಸಿಗಳು ಪತ್ತೆಯಾಗಿದ್ದು ಅವುಗಳನ್ನು ನಾಶಪಡಿಸಲಾಗಿದೆ. ನಾಶಪಡಿಸಲಾದ ಗಾಂಜಾದ ಮೌಲ್ಯ 27 ಕೋಟಿ ರೂ. ಮೌಲ್ಯದ್ದು …

Read More »

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ  ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತ  ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್‌ಗೆ ಒಳಗಾದವರು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್‌ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ …

Read More »

ಧರ್ಮ ಯಾವುದಾದರೂ ತತ್ವ ಒಂದೇ, ದೇವನೊಬ್ಬ‌ ನಾಮ‌ ಹಲವು: ಡಿ.ಕೆ.ಶಿವಕುಮಾರ್

ಶಿವಮೊಗ್ಗ: ಧರ್ಮ ಯಾವುದಾದರೂ ತತ್ವ ಒಂದೇ, ದೇವನೊಬ್ಬ‌ ನಾಮ‌ ಹಲವು. ಇಂತಹ ಪವಿತ್ರ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಿದ್ದೇವೆ ಎನ್ನುವುದೇ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ – 2026 ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಿ ಮಾತನಾಡಿದ ಅವರು, ನಾನು ಇಂದು ಬರುವಂತೆಯೇ ಇರಲಿಲ್ಲ. ಆದರೆ ಐತಿಹಾಸಿಕ‌ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕರೆದಿದ್ದರು.‌ ಆದರೆ ಬರಲು ಆಗಿರಲಿಲ್ಲ. ಇಂದು ಸರ್ವಧರ್ಮ ಸಭೆಗೆ ಸಂತೋಷದಿಂದ ಬಂದಿದ್ದೇನೆ ಎಂದರು. ಶ್ರಮಪಟ್ಟಾಗ ಮಾತ್ರ …

Read More »

ಎತ್ತಿನ‌ಹೊಳೆ ಯೋಜನೆ ಮೇಲಿನ ಸಿಎಜಿ ವರದಿ ಮಂಡನೆ ಮಾಡಲಾಗಿದ್ದು, ಹಣಕಾಸು ಅನಿಶ್ಚಿತತೆ, ವಿಳಂಬ ಹಾಗೂ ನ್ಯೂನತೆಗಳ ಬಗ್ಗೆ ತಿಳಿಸಲಾಗಿದೆ.

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು 12 ವರ್ಷಗಳಲ್ಲಿ 15.297 ಕೋಟಿ ರೂ.ಗಳಷ್ಟು ದೊಡ್ಡ ವೆಚ್ಚದ ಹೊರತಾಗಿಯೂ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಉದ್ದೇಶವು ಈಡೇರಿಲ್ಲ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ. ವಿಧಾನಸಭೆಯಲ್ಲಿ ಮಂಡಿಸಲಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಕುರಿತ ಸಿಎಜಿ ವರದಿಯು ಹಲವು ನ್ಯೂನತೆ, ದೋಷಗಳನ್ನು ಉಲ್ಲೇಖಿಸಿದೆ. ಸಮತೋಲನ ಜಲಾಶಯದ ಸ್ಥಳ ಮತ್ತು ಸಾಮರ್ಥ್ಯವನ್ನು ಅಂತಿಮಗೊಳಿಸುವಲ್ಲಿ ಅತಿಯಾದ ವಿಳಂಬ, …

Read More »