ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆ ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 2026- …
Read More »Monthly Archives: ಜನವರಿ 2026
ಹುಬ್ಬಳ್ಳಿಯ ಮಾಲ್ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ
ಹುಬ್ಬಳ್ಳಿ3: ಅದು ನಗರದ ಪ್ರಮುಖ ವ್ಯಾಪಾರ ಏರಿಯಾ. ಆದರೆ ರಾತ್ರಿ ಸಮಯದಲ್ಲಿ ನಾಲ್ಕು ಅಂತಸ್ತಿನ ಮಾಲ್ನಲ್ಲಿ ಹೊತ್ತಿಕೊಂಡ ಬೆಂಕಿ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣ ಮಾಡಿತ್ತು. ಮಾಲ್ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಮತ್ತೊಂದೆಡೆ ಸುತ್ತಮುತ್ತಲಿನ ವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಲು ಆರಂಭಿಸಿತ್ತು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಮರಾಠ ಗಲ್ಲಿಯಲ್ಲಿರುವ ಸುಪ್ರಸಿದ್ಧ ಸುಖಸಾಗರ ಮಾಲ್ನಲ್ಲಿ ಕಳೆದ ರಾತ್ರಿ 12 ಗಂಟೆ ಸಮಯಕ್ಕೆ ಅಗ್ನಿ ಅವಘಡ …
Read More »SSLC ಟಾಪರ್‌ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ
ಬೆಂಗಳೂರು: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಲ್ಯಾಪ್‌ಟಾಪ್ ಬದಲಿಗೆ ನಗದು ಬಹುಮಾನ ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ …
Read More »ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ
ಹಾಸನ: ಜೆಡಿಎಸ್ ಭದ್ರಕೋಟೆಯಲ್ಲಿ ಪಕ್ಷವನ್ನ ಮತ್ತಷ್ಟು ಭದ್ರಗೊಳಿಸಲು ದಳಪತಿಗಳು ಸಜ್ಜಾಗಿದ್ದಾರೆ. ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಖುದ್ದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರೇ ಅಖಾಡಕ್ಕೆ ಇಳಿದಿದ್ದು, ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ (Congress) ಹಿಡಿತ ಸಾಧಿಸುತ್ತಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಯ್ಕೆಯಾದ ನಂತರ ನಡೆದ ಕೆಲವು ಘಟನೆಗಳಿಂದ ಜೆಡಿಎಸ್ ಕೊಂಚ ಸೊರಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಬೃಹತ್ ಸಮಾವೇಶಗಳನ್ನ ನಡೆಸಿದೆ. …
Read More »ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!
ಚಿಕ್ಕಮಗಳೂರು: ಪ್ರೇಮದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ ಎಂದು …
Read More »ಗೋ ಬ್ಯಾಕ್ ಗವರ್ನರ್ ಅನ್ನೋದು ರಾಜಕೀಯ ನಾಟಕ – ಹೆಚ್‌ಡಿಕೆ ಕಿಡಿ
ಮಂಡ್ಯ: ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್, ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ …
Read More »ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳು, ರಾಷ್ಟ್ರೀಯ ಹಬ್ಬಗಳ ಆಚರಣೆ, ಶಾಲಾ-ಕಾಲೇಜುಗಳ ಇತರೇ ಸಾಂಸ್ಕೃತಿಕ, ಆಡಳಿತಾತ್ಮಕ ಕಾರ್ಯಕ್ರಮ ಆಯೋಜನೆ ವೇಳೆ ವಿದ್ಯಾರ್ಥಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕಾ ಶಿಕ್ಷಣ ಇಲಾಖೆ 13 ಅಂಶಗಳ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಈ ಮಾರ್ಗಸೂಚಿಯನ್ನು ಎಲ್ಲಾ ಶಾಲಾ-ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಮಾರ್ಗಸೂಚಿಯಲ್ಲಿ ಏನಿದೆ? 1. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಧ್ವಜಾರೋಹಣ ಕಂಬದ ಬಳಿ ವಿದ್ಯುತ್ ತಂತಿಗಳು ಹಾದುಹೋಗದಂತೆ ಮತ್ತು ಕಂಬವು ವಿದ್ಯುತ್ ತಂತಿಗಳನ್ನು ಸಂಪರ್ಕಿಸದಂತೆ …
Read More »77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದು ಕೇವಲ ಆಚರಣೆ ಅಲ್ಲ. ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸುವ ಅಭೂತಪೂರ್ವ ದಿನ. 1950 ಜನವರಿ 26ರಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಆಚರಿಸುವ ದಿನ. ರಾಜಪ್ರಭುತ್ವವನ್ನ ತ್ಯಜಿಸಿ ಪ್ರಜಾಪ್ರಭುತ್ವಕ್ಕೆ ಬದಲಾದ ದಿನ. ಹೀಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಈ ದಿನ ಅತ್ಯಂತ ಮಹತ್ವದ ದಿನ. ಈ ಬಾರಿ ಜನವರಿ 26ರಂದು ಭಾರತೀಯರೆಲ್ಲರೂ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಿದ್ದಾರೆ. …
Read More »ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR
ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ …
Read More »ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮೆರಾ …
Read More »
Laxmi News 24×7