Breaking News

Monthly Archives: ಜನವರಿ 2026

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಹಾಸಭಾದ ಕಚೇರಿಯಲ್ಲಿ ಇಂದು ನಡೆದ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಆಯ್ಕೆ ಮಾಡಲು ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಡಿಜಿಪಿ ಶಂಕರ …

Read More »

ಎಸ್​ಎಸ್​ಎಲ್​ಸಿ ಪರೀಕ್ಷೆ ಓದಿಗಾಗಿ ನಿರಂತರ ವಿದ್ಯುತ್ ಒದಗಿಸಿ: ಸಿಎಂಗೆ ಪತ್ರ ಬರೆದ ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ ವಿದ್ಯಾರ್ಥಿ

ಉಡುಪಿ: ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ, ಉಡುಪಿಯ ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಎಸ್​ಎಸ್​ಎಲ್​ಸಿ ಪರೀಕ್ಷೆ ಸಂದರ್ಭ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದೀಪೇಶ್ ದೀಪಕ್ ಶೆಣೈ, ಉಡುಪಿಯ ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್​ನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವರ್ಷ ಈತನ ಧೈರ್ಯ ಮತ್ತು ಸಮಯಪ್ರಜ್ಞೆಗೆ ಕರ್ನಾಟಕ ಸರ್ಕಾರದಿಂದ ಅತ್ಯುನ್ನತ ಹೊಯ್ಸಳ ಶೌರ್ಯ ಪ್ರಶಸ್ತಿ ದೊರೆತಿದೆ. ಸದ್ಯ ತಮ್ಮ ಪ್ರದೇಶದಲ್ಲಿ …

Read More »

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ಕಾಯ್ದಿರಿಸಿದ ಹೈಕೋರ್ಟ್​

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್​ಐಆರ್​ ಪ್ರಶ್ನಿಸಿ, ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​, ತೀರ್ಪು ಕಾಯ್ದಿರಿಸಿದೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಶಿಡ್ಲಘಟ್ಟ ನಗರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ ರದ್ದುಪಡಿಸಬೇಕು ಎಂದು ಕೋರಿ ಆರೋಪಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿದೆ. …

Read More »

ದಂಪತಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು; ಮನೆ, ಮೈಮೇಲಿದ್ದ ಚಿನ್ನಾಭರಣ ಕಳವು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ(80) ಹಾಗೂ ಪತ್ನಿ ಜಯಮ್ಮ(70) ದಂಪತಿಗಳಿಬ್ಬರು ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚಂದ್ರಪ್ಪ‌ ಮನೆಯ ಬೆಡ್ ರೂಂನಲ್ಲಿ ಮಂಚದ ಮೇಲೆ ಹಾಗೂ ಜಯಮ್ಮ ಅವರು ಹಾಲ್​ನ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದವರು. ಈ ದಂಪತಿ ಅನ್ಯೋನ್ಯವಾಗಿದ್ದರು, ಇಬ್ಬರು ಒಟ್ಟಿಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ಭದ್ರಾವತಿಯ ಹಳೇನಗರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೃದ್ಧ ದಂಪತಿಗೆ ಮೂವರು …

Read More »

ಯಾವ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ: ಗೃಹ ಸಚಿವ ಪರಮೇಶ್ವರ್​

ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಕೆ.ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದೆ. ಯಾವುದೇ ಇಲಾಖೆಯಲ್ಲಿಯೂ ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಗೃಹ ಸಚಿವರು ಪ್ರತಿಕ್ರಿಯಿಸಿದರು. ಈ ರೀತಿ ವಿಡಿಯೋ ವೈರಲ್ ಆಗುತ್ತಿರುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಇಂಥದ್ದೆಲ್ಲ ಯಾವುದೇ ಇಲಾಖೆಯಲ್ಲಿಯೂ ಆಗಬಾರದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ ಹಿನ್ನೆಲೆಯಲ್ಲಿ …

Read More »

ಪೊಲೀಸರು ಕಾರ್ಯಾಚರಣೆ ನಡೆಸಿ 106 ಕೆ.ಜಿ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಪುತ್ತೂರು(ದಕ್ಷಿಣ ಕನ್ನಡ): ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕೆ.ಜಿ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ(37), ಅಬ್ದುಲ್ ಸಾದಿಕ್ (37) ಬಂಧಿತರು. ಜ.19ರ ಸಂಜೆ ಕಾರು ಮತ್ತು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್‌ ಉಪ ನಿರೀಕ್ಷಕರು, ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ …

Read More »

5.15 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ; ನೈಜೀರಿಯಾ ಮೂಲದ ಆರೋಪಿ ಬಂಧನ

ಬೆಂಗಳೂರು: ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯನ್ನ ಸಿಸಿಬಿಯ ಪೊಲೀಸರು ಬಂಧಿಸಿದ್ದಾರೆ. ಅರ್ನೆಸ್ಟ್ ಯುಗಾಹ್ಸ್ (45) ಬಂಧಿತ ಆರೋಪಿ. ಆತನಿಂದ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳ ಸಹಿತ ಒಟ್ಟು 5.15 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಕಾಡುಗೋಡಿ, ಹೆಣ್ಣೂರು ಠಾಣೆಗಳಲ್ಲಿ ಅರ್ನೆಸ್ಟ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚಿಗೆ ಜೈಲಿನಿಂದ‌ ಬಿಡುಗಡೆಯಾಗಿದ್ದ ಆರೋಪಿ ಪುನಃ ಮಾದಕ ದಂಧೆ‌ …

Read More »

ಜನವರಿ 22ರಿಂದ ಜನವರಿ 31ರವರೆಗೆ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ

ಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ನವದೆಹಲಿಗೆ ಭೇಟಿ ನೀಡುವ ಬಗ್ಗೆ …

Read More »

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

ಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ ಮಾಡಿದ್ದು, ಅವರ ಮೇಲೆ ₹ 20ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಾಗಿ ಸಾಹುಕಾರ ಅಭಿಮಾನಿಗಳ ಒಕ್ಕೂಟದ ಕಾನೂನು ಸಲಹೆಗಾರ್ತಿ ರಂಜಿತಾ ರೆಡ್ಡಿ ತಿಳಿಸಿದರು. ವೈಯಕ್ತಿಕವಾಗಿ ತೆಜೋವಧೆ ನಗರದ ಪ್ರವಾಸಿ ಮಂದಿರದಲ್ಲಿ ಸಾಹುಕಾರ ಅಭಿಮಾನಿಗಳ ಒಕ್ಕೂಟದಿಂದ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯದಲ್ಲಿ ಮಾಧ್ಯಮಗಳ ಮುಂದೆ ಕೆಸರೆರಚಾಟ ಮಾಡುವುದು ಸಾಮಾನ್ಯ. ವೈಯಕ್ತಿಕವಾಗಿ ತೆಜೋವಧೆ ಮಾಡುತ್ತಿರುವುದು …

Read More »

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ ಭಾರತದ ಆಹಾರ ಸಂಸ್ಕರಣಾ ವಲಯಕ್ಕೆ ಕೋಕಾ-ಕೋಲಾ ಸಂಸ್ಥೆ ₹25,760 ಕೋಟಿ ಹೂಡಿಕೆ ಯೋಜನೆಯನ್ನು ಪ್ರಕಟಿಸಿದ್ದು, ಈ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಅವರ ಕಾರ್ಯಾಚರಣೆಗಳನ್ನು ವಿಸ್ತರಿಸುವ ಕುರಿತು ಕಂಪೆನಿಯ ಹಿರಿಯ ಉಪಾಧ್ಯಕ್ಷರೊಂದಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ಪಾನೀಯ ಉತ್ಪಾದನೆಗೆ ಅತ್ಯವಶ್ಯಕವಾದ ಸಮೃದ್ಧ ಹಾಗೂ ಸ್ಥಿರ ಜಲ ಲಭ್ಯತೆಯನ್ನು ಉಲ್ಲೇಖಿಸಿ, ವಿಜಯಪುರವನ್ನು ಪ್ರಮುಖ ಕೈಗಾರಿಕಾ …

Read More »