Breaking News

Monthly Archives: ಜನವರಿ 2026

ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳಿಂದ ಡಾ. ಪ್ರಭಾಕರ್ ಕೋರೆ ಅವರಿಗೆ ಅಭಿನಂದನಾ ಸನ್ಮಾನ

ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ‘ಪದ್ಮಶ್ರೀ’ ಪುರಸ್ಕಾರ ಲಭಿಸಿದ ಹಿನ್ನೆಲೆಯಲ್ಲಿ, ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಅವರಿಗೆ ಆತ್ಮೀಯ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಮುಖಂಡರು ಕೋರೆ ಅವರ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದರು. ಸಾಹಿತ್ಯ, ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಸಾಧನೆ ಮಾಡಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ, ಯಳ್ಳೂರ …

Read More »

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ …

Read More »

ಜಲಜೀವನ್ ಮಿಷನ್‌ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ

ನವದೆಹಲಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್  ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್‌ನಲ್ಲಿ ಕರ್ನಾಟಕದಲ್ಲಿ ಈವರೆಗೂ 169 ದೂರುಗಳು ಬಂದಿವೆ. ಈ ಸಂಬಂಧ ಮನವಿ ಮಾಡಿದರೂ ಅಕ್ರಮ ದೂರುಗಳ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕ್ರಮ …

Read More »

ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ, ಒಂದು ವಾರ ಕೆಲಸ ನಿಲ್ಲಿಸಿ ಪ್ರತಿಭಟನೆ: ಮಂಜುನಾಥ್ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ  38 ಸಾವಿರ ಕೋಟಿ ಬಾಕಿ ಇದೆ. ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಮಾ.5 ರಂದು ಬೃಹತ್ ಪ್ರತಿಭಟನೆ ಮಾಡ್ತಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ಚಾಮರಾಜಪೇಟೆ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿದ್ದಾರೆ. ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸಿಎಂಗೆ ಹಲವು ಬಾರಿ ಮನವಿ ಮಾಡಿದ್ರೂ …

Read More »

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ‌ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ‌ಇಲಾಖೆ ಆಯುಕ್ತರಿಂದ ರಜೆ ನೀಡಲು ಆದೇಶ ಹೊರಡಿಸಿದ್ದು, ಋತುಚಕ್ರ ರಜೆಗೆ ಷರತ್ತು ವಿಧಿಸಲಾಗಿದೆ. ಷರತ್ತುಗಳೇನು? 1.ಮಹಿಳಾ ನೌಕರರು ಆಯಾ ತಿಂಗಳ ‘ಋತುಚಕ್ರ ರಜೆ’ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ‘ಋತುಚಕ್ರ ರಜೆ’ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ( ಅವಕಾಶವಿರುವುದಿಲ್ಲ. …

Read More »

ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ

ನವದೆಹಲಿ: ಭಾರತ-ಯುರೋಪಿಯನ್ ಯೂನಿಯನ್  ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಜಾರಿಗೆ ಬಂದಿದ್ದು, ಇದು ‘ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು’ ಎಂದು ಪ್ರಧಾನಿ ನರೇಂದ್ರ ಮೋದಿ  ವರ್ಣಿಸಿದರು. ಭಾರತೀಯ ಉದ್ಯಮಗಳು ಈ ಅವಕಾಶವನ್ನು ಬಳಸಿಕೊಂಡು ಗುಣಮಟ್ಟದ ಉತ್ಪನ್ನಗಳನ್ನು ಯುರೋಪಿಯನ್ ಒಕ್ಕೂಟದ 27 ದೇಶಗಳಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು. ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ದಿನದಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೊಸ ಮಾರುಕಟ್ಟೆ ತೆರೆದಿದ್ದು, ಭಾರತೀಯ ಉತ್ಪನ್ನಗಳ ಗುಣಮಟ್ಟ ಮತ್ತು ‘ಬ್ರ್ಯಾಂಡ್ ಇಂಡಿಯಾ’ವನ್ನು …

Read More »

ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು

ನವದೆಹಲಿ: 2027 ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 6.8%-7.2% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಆರ್ಥಿಕ ಸಮೀಕ್ಷೆ  ಹೇಳಿದೆ. ಫೆ.1 ರಂದು ಬಜೆಟ್‌ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಇಂದು ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? – ಜಾಗತಿಕ ವ್ಯಾಪಾರ ಅನಿಶ್ಚಿತತೆಯ ಹಿನ್ನೆಲೆಯಲ್ಲಿ, ಭಾರತದ ಒಟ್ಟು ರಫ್ತುಗಳು (ಸರಕು ಮತ್ತು ಸೇವೆಗಳು) 2025ರ ಹಣಕಾಸು ವರ್ಷದಲ್ಲಿ ದಾಖಲೆಯ 825.3 ಬಿಲಿಯನ್‌ ಡಾಲರ್‌ಗೆ …

Read More »

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

ಬೀದರ್: ಜಿಲ್ಲೆಯಲ್ಲಿ ಕಳೆದ 6 ವರ್ಷಗಳಲ್ಲಿ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿ ಅತೀ ಹೆಚ್ಚು ಸಂಚಾರ ನಿಮಯ ಉಲ್ಲಂಘಿಸಿದ್ದಾರೆ. ಈ ಮೂಲಕ ಬೀದರ್ ಸಂಚಾರಿ ಪೊಲೀಸರು  ಬರೋಬ್ಬರಿ 9.73 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ. ಸಂಚಾರಿ ಪೊಲೀಸರು ರಸ್ತೆ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದರೂ ಕೂಡ ವಾಹನ ಸವಾರರು ಮಾತ್ರ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ದಂಡದ ಮೊತ್ತ ಸಾವಿರ ದಾಟಿದರೂ ಸವಾರರ ಬೇಜವಾಬ್ದಾರಿ ಮಾತ್ರ ಕಡಿಮೆಯಾಗಿಲ್ಲ, ಹೆಲ್ಮೆಟ್ …

Read More »

ತುಂಬಾ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು – ಜಾತಿ ಆಧಾರಿತ ತಾರತಮ್ಯದ ಯುಜಿಸಿ ನಿಯಮಗಳಿಗೆ ಸುಪ್ರೀಂ ತಡೆ

ನವದೆಹಲಿ: ತುಂಬಾ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟು  ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ   ಹೊರಡಿಸಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್‌  ತಾತ್ಕಾಲಿಕ ತಡೆ ನೀಡಿದೆ. ಈ ನಿಯಮಾವಳಿಗಳ ದೂರು ಪರಿಹಾರ ವ್ಯವಸ್ಥೆಯಿಂದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳನ್ನು ಹೊರಗಿಟ್ಟಿರುವುದು ತಾರತಮ್ಯ ಉಂಟು ಮಾಡುವಂತಿದೆ. ನಿಯಮಾವಳಿಗಳು ಮುಖ್ಯವಾಗಿ ಎಸ್‌ಸಿ/ಎಸ್‌ಟಿ, ಒಬಿಸಿ, ಆರ್ಥಿಕವಾಗಿ ಹಿಂದುಳಿದವರು ಮತ್ತು ಅಂಗವೈಕಲ್ಯ ಹೊಂದಿರುವವರ ರಕ್ಷಣೆಗೆ ನಿಂತಿದ್ದು ಉಳಿದ ವರ್ಗಗಳಿಗೆ ಸಾಂಸ್ಥಿಕ ರಕ್ಷಣೆ ನೀಡುತ್ತಿಲ್ಲ ಎಂದು …

Read More »

ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯ; ಚುನಾವಣೆ ಮೀಸಲು ನಿಗದಿ: ಸರ್ಕಾರಕ್ಕೆ ಕೊನೆಯ ಅವಕಾಶ ಕೊಟ್ಟ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಈ ತಿಂಗಳಾಂತ್ಯಕ್ಕೆ ಅವಧಿ ಮುಗಿಯಲಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಮೀಸಲು ನಿಗದಿ ಸಂಬಂಧ ಉತ್ತರಿಸಲು ಕರ್ನಾಟಕ ಹೈಕೋರ್ಟ್‌ನಿಂದ ರಾಜ್ಯ ಸರಕಾರಕ್ಕೆ ಕೊನೆ ಅವಕಾಶ ನೀಡಲಾಗಿದೆ. ಚುನಾವಣೆಗೆ ಮೀಸಲು ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. …

Read More »