ವಾಷಿಂಗ್ಟನ್: ತನ್ನ ವಿರುದ್ಧ ತಿರುಗಿಬಿದ್ದವರ ಮೇಲೆ ಸುಂಕದ ಅಸ್ತ್ರ ಪ್ರಯೋಗಿಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ ಬಹುದೊಡ್ಡ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿರುವ ವ್ಯಾಪಕ ಜಾಗತಿಕ ಸುಂಕಗಳನ್ನ ಅಮೆರಿಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಕಪಾಳಮೋಕ್ಷ ಮಾಡಿದಂತಾಗಿದೆ. ಹೌದು. ಪ್ರಪಂಚದಾದ್ಯಂತ ದೇಶಗಳ ಮೇಲೆ ವಿಧಿಸಿರುವ ಸುಂಕಗಳು ಕಾನೂನು ಬಾಹಿರವಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ ಸುಂಕ ವಿಧಿಸಲು ಕಾನೂನುಬದ್ಧ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರಿದ್ದ ಪೀಠ …
Read More »Daily Archives: ಫೆಬ್ರವರಿ 21, 2026
ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ
ಕೊಪ್ಪಳ: ನರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು …
Read More »ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ
ಬಾಗಲಕೋಟೆ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಿದ್ದಾರೆ. ಕಿಲ್ಲಾ ಓಣಿಯಲ್ಲಿದ್ದ ಮಸೀದಿಯಿಂದಲೇ ಕಲ್ಲು-ಚಪ್ಪಲಿ ತೂರಿ ಬಂದಿದ್ದು, ಭದ್ರತೆಗೆ ನಿಂತಿದ್ದ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಅವರ ಮೇಲೆ ಬಿದ್ದಿದೆ. ಅಲ್ಲದೆ, ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬಾತನ ತಲೆಗೆ ಕಲ್ಲುಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಸ್ಲಿಂ ಯುವಕರ ಪುಂಡಾಟದ ಮಧ್ಯೆ ತರಕಾರಿ ಮಾರುಕಟ್ಟೆ ಬಳಿ ತಳ್ಳೋಗಾಡಿಗಳಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ರು. …
Read More »ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ
ರಾಯಚೂರು: ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದರು. ಈ ವೇಳೆ, ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ …
Read More »
Laxmi News 24×7