ಬೆಳಗಾವಿ: ಗರ್ಭಿಣಿ ಪತ್ನಿಗೆ ಚಾಕು ಇರಿದು ಬಳಿಕ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಎಲ್ಲರನ್ನು ಬೆಚ್ಚಿಬಿಳಿಸುವಂತೆ ಮಾಡಿದೆ. ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಉಮೇಶ ಸಾರಾಯಿ ಕುಡಿದು ಬಂದು ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದೆ. ಈ ವೇಳೆ ಜಗಳ ವಿಕೋಪಕ್ಕೆ …
Read More »Daily Archives: ಫೆಬ್ರವರಿ 25, 2026
ಕಳ್ಳಬಟ್ಟಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿಕೆ
ಬಾಗಲಕೋಟೆ: ಕಳ್ಳಬಟ್ಟಿ ಸಾರಾಯಿ ತಯಾರಿ, ಸಾಗಾಟ ಮತ್ತು ಮಾರಾಟ ಸಂಪೂರ್ಣವಾಗಿ ತಡೆಗಟ್ಟಲು ಪರಿಣಾಮಕಾರಿಯಾಗಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಎಂ.ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆಗೆ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಕಾರ್ಯಾಚರಣೆ, ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಅನುಮಾನಾಸ್ಪದ ಕಳ್ಳಬಟ್ಟಿ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ …
Read More »ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಸೀದಿಯಲ್ಲಿ ಇದ್ದರವರೆಲ್ಲರ ಮೇಲೂ ಪ್ರಕರಣ ದಾಖಲಿಸಿ
ಬಾಗಲಕೋಟೆ: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ ವೇಳೆ ಪಂಕಾ ಮಸೀದಿಯಲ್ಲಿ ಇದ್ದವರೆಲ್ಲರ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಉತ್ತರ ಪ್ರಾಂತ ಸಹ ಸಂಚಾಲಕ ಶ್ರೀಕಾಂತ ಹೊಸಕೆರೆ ಆಗ್ರಹಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಯಲ್ಲಿ ಸೇರಲು ಅಷ್ಟೊಂದು ಜನರಿಗೆ ಅವಕಾಶ ಮಾಡಿಕೊಟ್ಟ ಪಂಕಾ ಮಸೀದಿಯ ಕಮಿಟಿಯವರೆಲ್ಲರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಬೇಕು. ಆ ಮಸೀದಿಯಲ್ಲಿ ಸೇರುವವರಿಂದಲೇ ಈ ಹಿಂದೆಯೂ …
Read More »ರಸ್ತೆ ಮೇಲೆ ಕಸ ಎಸೆದಿದ್ದಕ್ಕೆ 1.50 ಲಕ್ಷ ರೂ. ದಂಡ ವಸೂಲಿ
ಬೆಳಗಾವಿ: ಮಹಾನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪಾಲಿಕೆ ಅಧಿಕಾರಿ, ಸಿಬ್ಬಂದಿ ರಸ್ತೆ ಮೇಲೆ ಕಸ ಎಸೆಯುವವರಿಗೆ, ಹಸಿ ಮತ್ತು ಒಣ ತ್ಯಾಜ್ಯ ವಿಲೇವಾರಿ ಮಾಡದವರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಪಾಲಿಕೆ 58 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕಸ ಸಂಗ್ರಹಿಸುತ್ತಿರುವ ಸಂದರ್ಭದಲ್ಲಿ ನಿವಾಸಿಗಳು, ಹೋಟೆಲ್, ಅಂಗಡಿಕಾರರು ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ ನೀಡದಿರುವ ಮತ್ತು ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ಕಸ …
Read More »ಮಹಾರಾಷ್ಟ್ರದ ಪಾಂಡುರಂಗ ಸಿಸಿ ತಂಡಕ್ಕೆ ಕ್ರಿಕೆಟ್ ಟ್ರೋಫಿ
ಬೆಳಗಾವಿ: ನಗರದಲ್ಲಿ ಎರಡು ವಾರಗಳಿಂದ ನಡೆದಿದ್ದ ಮುರುಘೇಂದ್ರಗೌಡ ಪಾಟೀಲ ಅಖಿಲ ಭಾರತೀಯ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನಲ್ಲಿ ಭಾನುವಾರ ಅಂತಿಮ ಹಣಾಹಣಿಯಲ್ಲಿ ಮಹಾರಾಷ್ಟ್ರದ ಪಾಂಡುರಂಗ ಸಿಸಿ ತಂಡ ಬೆಳಗಾವಿಯ ಸಾಯಿರಾಜ ವಾರಿಯರ್ಸ್ ತಂಡವನ್ನು ಸೋಲಿಸುವ ಮೂಲಕ ಟ್ರೋಫಿ ಮತ್ತು 5 ಲಕ್ಷ ರೂ. ನಗದು ಗೆದ್ದುಕೊಂಡಿದೆ. ನಗರದ ಸರ್ದಾರ್ಸ್ ಮೈದಾನದಲ್ಲಿ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ ಆಯೋಜಿಸಿದ್ದ ಈ ಪಂದ್ಯಾವಳಿಯಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಒಟ್ಟು 40 ತಂಡ ಭಾಗವಹಿಸಿದ್ದವು. ಸಾಯಿರಾಜ ತಂಡ …
Read More »ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು:ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ 24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ. ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ …
Read More »ಬಾಕಿ ಬಿಲ್ಗೆ ಆಗ್ರಹಿಸಿ ಮಾ.6ರಂದು ಗುತ್ತಿಗೆದಾರರ ಪ್ರತಿಭಟನೆಗೆ ಕರೆ
ತುಮಕೂರು: ಬಾಕಿ ಬಿಲ್ ವಿಚಾರವಾಗಿ ರಾಜ್ಯ ಸರ್ಕಾರ ದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಈ ಸರ್ಕಾರದ …
Read More »ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು
ಬೆಂಗಳೂರು: ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ ಬೆಳೆದು, ಹೂವು ಮಾರುತ್ತಲೇ ಓದಿ, ಇಂದು ನ್ಯಾಯದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಮಾದರಿಯಾಗಿದ್ದಾರೆ. ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ …
Read More »ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ
ಧಾರವಾಡ: ಖಾಲಿ ಇರುವ 2.84 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಇಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಅಭ್ಯರ್ಥಿಗಳು ಆಗ್ರಹಿಸಿದರು. ಉದ್ಯೋಗ ಬೇಕು ಎಂದು ಭಿತ್ತಿಪತ್ರ ಹಿಡಿದು ಸಾವಿರಾರು ಯವಕರು ಆಗಮಿಸಿದರು. ಈ ವೇಳೆ ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ತಳ್ಳಾಟ-ನೂಕಾಟ ನಡೆಯಿತು. ಪ್ರತಿಭಟನೆಗೆ ಅನುಮತಿ ನಿಡಲು ಪೊಲೀಸ್ (Police) ಇಲಾಖೆಯಿಂದ …
Read More »ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್
ಕಾರವಾರ: ಮುರುಡೇಶ್ವರದಲ್ಲಿ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬಂಧಿತ ಏಳು ಬಾಲಕರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಮುರುಡೇಶ್ವರಪೊಲೀಸ್ ಠಾಣೆಯಲ್ಲಿ ಅಪ್ರಾಪ್ತರ ಜೊತೆ ಬೈಕ್ ನೀಡಿದ ಪೋಷಕರ ವಿರುದ್ಧವೂ ಕೇಸ್ ದಾಖಲು ಮಾಡಲಾಗಿದೆ. ಈಗ ಪೊಲೀಸರು ಉದ್ದೇಶಪೂರ್ವಕವಾಗಿ ಹಿಂದೂಗಳ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ್ದು ಯಾಕೆ ಎನ್ನುವುದರ …
Read More »
Laxmi News 24×7