Breaking News

Daily Archives: ಫೆಬ್ರವರಿ 25, 2026

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ  ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌  ಪ್ರತಿಭಟನೆ ನಡೆಸಿದೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ …

Read More »

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

ಬಳ್ಳಾರಿ: ಅಧಿದೇವತೆ ಕನಕ ದುರ್ಗಮ್ಮ ಸಿಡಿ ಬಂಡಿ ರಥೋತ್ಸವ  ಇಂದು ಅದ್ದೂರಿಯಾಗಿ ನೆರವೇರಿತು. ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಶೇಷ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ, ಆಂಧ್ರಪ್ರದೇಶ ತೆಲಂಗಾಣ ಸೇರಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು ಸಿಡಿ ಬಂಡಿ ರಥೋತ್ಸವದಲ್ಲಿ ಭಾಗಿಯಾಗಿ ಕಣ್ತುಂಬಿಕೊಂಡರು. ಭಕ್ತರು ಸಿಡಿ ಬಂಡಿಗೆ ಬಾಳೆ ಹಣ್ಣಿನ ಜೊತೆಗೆ ಜೀವಂತ ಕೋಳಿ ಎಸೆದರು. ಕನಕದುರ್ಗಮ್ಮ ಸಿಡಿ ಬಂಡಿ ರಥೋತ್ಸವಕ್ಕೆ ಕೋಳಿ …

Read More »

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ  ಅವಧಿಯಲ್ಲಿ ನೇಮಕ ನಡೆಯದ ಕಾರಣ ನಾವು ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಉದ್ಯೋಗ ಖಾಲಿಯಿದ್ದವು. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು  ನಡೆಸಲಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಮಾಡಿ ತಮ್ಮ ಸರ್ಕಾರವನ್ನು ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. …

Read More »

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಶಿವಮೊಗ್ಗದಲ್ಲಿನಡೆದ ಶಾಲಾ ಬಾಲಕನ  ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ …

Read More »