Breaking News

Daily Archives: ಫೆಬ್ರವರಿ 25, 2026

ಯುವ ವಿದ್ಯಾವಂತರ ಆಕ್ರೋಶಕ್ಕೆ ಗುರಿಯಾದರೆ ‘ಗ್ಯಾರಂಟಿ’ಗಳ ಸರ್ಕಾರ ಪತನವಾಗುವುದು ಗ್ಯಾರಂಟಿ: ಸಂಸದ ಈರಣ್ಣ ಕಡಾಡಿ ಎಚ್ಚರಿಕೆ

ಮೂಡಲಗಿ: ರಾಜ್ಯ ಸರ್ಕಾರದಿಂದ ಯಾವುದೇ ಹೊಸ ನೇಮಕಾತಿ ನಡೆಯದ ಕಾರಣ ಯುವಜನತೆಯ ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ದಂಗೆ ಎದ್ದಿದ್ದಾರೆ. ರಾಜ್ಯದಲ್ಲಿ ಸುಮಾರು 2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಕೂಡ ಸರ್ಕಾರ ನೇಮಕಾತಿ ಮಾಡುವಲ್ಲಿ ನಿರಾಸಕ್ತಿ ವಹಿಸಿದೆ. ಕೇವಲ ಮುಖ್ಯಮಂತ್ರಿ ಕುರ್ಚಿ ಕಾಳಗ ನಡೆದಿದೆ ಹೊರತು ಬೇರೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ರಾಜ್ಯದ ಯುವಜನತೆ ಆಕ್ರೋಶಗೊಂಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕಿಡಿಕಾರಿದರು. ಬುಧವಾರ …

Read More »

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

ಬೆಂಗಳೂರು: ಜಿಬಿಎ , ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡುಕೊಳ್ಳುವ ಆಕಾಂಕ್ಷೆ ನಮಗೆ ಇದೆ. ಬಿಜೆಪಿ ಯಾವ ನಿಲುವು ತೆಗೆದುಕೊಳ್ಳುತ್ತೋ ಅದರ ಮೇಲೆ ನಾವು ತೀರ್ಮಾನ ಮಾಡ್ತೀವಿ ಅಂತ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡ ತಿಳಿಸಿದ್ದಾರೆ. ಮೈತ್ರಿ ಬಗ್ಗೆ ಜೆಪಿ ಭವನದಲ್ಲಿ ಮಾತಾಡಿದ ಅವರು, ನಾವು ಎನ್‌ಡಿಎ ಭಾಗವಾಗಿದ್ದೇವೆ. ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕು ಅನ್ನೋದು ನಮ್ಮ ಆಕಾಂಕ್ಷೆ. ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. …

Read More »

ಗೋಹತ್ಯೆ ತಡೆಗೆ ಬೆಳಗಾವಿಯಲ್ಲಿ ಸಂಕಲ್ಪ: ಗಣಪತಿ ಪಾದಕ್ಕೆ ಪತ್ರವನ್ನಿಟ್ಟು ವಿಶೇಷ ಪೂಜೆ

ಭಾರತದಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧವಾಗಬೇಕು ಮತ್ತು ಗೋಮಾತೆಯನ್ನು ‘ರಾಷ್ಟ್ರಮಾತೆ’ ಎಂದು ಘೋಷಿಸಬೇಕು ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಬೆಳಗಾವಿಯಲ್ಲಿ ಚಾಲನೆ ಸಿಕ್ಕಿದೆ. ಗಣಪತ್ ಗಲ್ಲಿಯ ಶ್ರೀ ಗಣೇಶನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗೋಭಕ್ತರು ಅಭಿಯಾನಕ್ಕೆ ನಾಂದಿ ಹಾಡಿದ್ದಾರೆ. ಭಾರತ ಭೂಮಿಯಿಂದ ಗೋಹತ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಮತ್ತು ಗೋಮಾಳ ಭೂಮಿಯನ್ನು ಸಂರಕ್ಷಿಸಲು ಆಗ್ರಹಿಸಿ ದೇಶಾದ್ಯಂತ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಇಂದು ಬೆಳಗಾವಿಯ ಪ್ರಸಿದ್ಧ ಗಣಪತ್ ಗಲ್ಲಿಯ ಶ್ರೀ ಗಣೇಶನ …

Read More »

ಬಾಗಲಕೋಟೆ ಕಲ್ಲು ತೂರಾಟದ ಕಿಚ್ಚು: ಮುಧೋಳದಲ್ಲಿ ಬೃಹತ್ ಪ್ರತಿಭಟನೆ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ

ಬಾಗಲಕೋಟೆಯಲ್ಲಿ ಶಿವಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಈಗ ಜಿಲ್ಲೆಯಾದ್ಯಂತ ಕಿಚ್ಚು ಹಚ್ಚಿದೆ. ಈ ಕೃತ್ಯವನ್ನು ಖಂಡಿಸಿ ಮುಧೋಳ ನಗರದಲ್ಲಿ ಇಂದು ವಿವಿಧ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿ ಮುಧೋಳ ನಗರದಲ್ಲಿಂದು ಪ್ರತಿಭಟನೆಯ ಬಿಸಿ ಏರಿತ್ತು. ನಗರದ ಪ್ರಮುಖ ವೃತ್ತವಾದ …

Read More »

ಪ್ರಚೋದನಕಾರಿ ಭಾಷಣ; ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

  ಯಾದಗಿರಿಯ ಗುರುಮಠಕಲ್‌ನಲ್ಲಿ ನಡೆದ ಶಿವಾಜಿ ಜಯಂತಿ ಸಭೆಯಲ್ಲಿ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಪೊಲೀಸರು ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಒಂದು ಕೋಮಿನ ವಿರುದ್ಧ ಟೀಕೆ, “ಗಾಂಧೀಜಿ ಪಾಕಿಸ್ತಾನದ ಪಿತಾಮಹ’ ಎಂಬ ವಿವಾದಿತ ಹೇಳಿಕೆ ಹಾಗೂ ಪ್ರಚೋದನಾತ್ಮಕ ಮಾತುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಗುರುಮಠಕಲ್ ಪೊಲೀಸ್‌ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196, …

Read More »

ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿದ ದರ್ಶನ

ಬೆಂಗಳೂರು: ತಲೆ ದಿಂಬು, ಟಿವಿ ಆಯ್ತು ಈಗ ವಿಚಾರಣೆ ವೇಳೆ ನೇರ ಕೋರ್ಟ್ ಹಾಜರಾತಿಗೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ತ್ವರಿತಗತಿಯಲ್ಲಿ ನಡೆಸುವಂತೆ, ಪ್ರತಿನಿತ್ಯ ವಿಚಾರಣೆ ನಡೆಸುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ, ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ನ್ಯಾಯಾಧೀಶರಿಗೆ ದರ್ಶನ್ ಧನ್ಯವಾದ ಹೇಳಿದರು. ಥ್ಯಾಂಕ್ಸ್ ಹೇಳಬಾರದು ನಮ್ಮ ಕೆಲಸ ಮಾತ್ರ ಮಾಡಿದ್ದೇವೆ, ಥ್ಯಾಂಕ್ಸ್ ಹೇಳುವ ಅಗತ್ಯವಿಲ್ಲ ಅಂತಾ ನ್ಯಾಯಾಧೀಶರು ತಿಳಿಸಿದರು. …

Read More »

ಆಸ್ತಿಗಾಗಿ ಮಗುವಿನ ಹಂತಕ ದೊಡ್ಡಪ್ಪನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ಕೋರ್ಟ್

ಆಸ್ತಿಗಾಗಿ ಕಂದಮ್ಮನನ್ನೇ ಬಲಿಪಡೆದ ಕ್ರೂರದೊಡ್ಡಪ್ಪನಿಗೆ ಬೆಳಗಾವಿ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಪುಟ್ಟ ಮಕ್ಕಳ ಸಾಕ್ಷ್ಯವನ್ನೇ ಪ್ರಮುಖವಾಗಿ ಪರಿಗಣಿಸಿದ ನ್ಯಾಯಾಧೀಶರು, ಹಂತಕನಿಗೆ ಸಾಯುವವರೆಗೂ ಕಂಬಿ ಎಣಿಸುವಂತೆ ಆದೇಶ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ 2021ರಲ್ಲಿ ನಡೆದಿದ್ದ ಸಿದ್ಧಾರ್ಥ್ ಸಂಕನ್ನವರ ಎಂಬ ಆರು ವರ್ಷದ ಮಗುವಿನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ತನ್ನ ತಮ್ಮ …

Read More »

ಶಾಲೆಗಳ ಮೂಲಸೌಕರ್ಯಕ್ಕೆ ಶಾಸಕ ಆಸೀಫ್ ಸೇಠ್ ಕಾಯಕಲ್ಪ: ಮಾಲಿ ಗಲ್ಲಿಯ ಸರ್ಕಾರಿ ಶಾಲೆಗಳಿಗೆ ಭೇಟಿ

ಬೆಳಗಾವಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್ ಅವರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಇಂದು ಮಾಲಿ ಗಲ್ಲಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಶಿಕ್ಷಣದ ಗುಣಮಟ್ಟಕ್ಕೆ ಪೂರಕವಾದ ಪರಿಸರ ನಿರ್ಮಿಸುವ ಭರವಸೆ ನೀಡಿದರು. ಬೆಳಗಾವಿಯ ಮಾಳಿ ಗಲ್ಲಿಯಲ್ಲಿರುವ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 4, ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ. 2 ಮತ್ತು ಸರ್ಕಾರಿ ಕನ್ನಡ …

Read More »

ಮಾರ್ಚ 1 ರಿಂದ ಯಡೂರಿನಲ್ಲಿ ಮಹಾಕುಂಭಾಭಿಷೇಕ

ಚಿಕ್ಕೋಡಿ :ಯಡೂರು ಗ್ರಾಮದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆಯು ಮಾರ್ಚ 1ರಿಂದ 6 ರವರೆಗೆ ನಡೆಯಲಿದೆ ಯಡೂರ ಶ್ರೀವೀರಭದ್ರ ದೇವಸ್ಥಾನದ ಹಾಗೂ ಧರ್ಮಾಧಿಕಾರಿಗಳು ಶ್ರೀಶೈಲ್ ಜಗದ್ಗುರು ಡಾ! ಚನ್ನಸಿಧ್ದರಾಮ ಪಂಡಿತಾರಾಧ್ಯ ಮಹಾಸ್ವಾಮೀಜೀಯವರು ಹೇಳಿದರು. ಯಡೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ 1 ರಂದು ಸಂಜೆ 6 ಗಂಟೆಗೆ ಶ್ರೀ ಸಿದ್ಧಲಿಂಗ ಶಿವಾಚಾರ್ಯ ವೇದಾಗಮ ಸಂಸ್ಕೃತ ಪಾಠ ಶಾಲೆಯ 12 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜರುಗುವುದು. ಶ್ರೀಶೈಲ ಮತ್ತು ಕಾಶೀ …

Read More »

ಮ್ಯೂಸಿಕ್ ಮೈಲಾರಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

“ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಜೈಲು ಪಾಲಾಗಿದ್ದ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಗೆ ನ್ಯಾಯಾಲಯದಿಂದ ಕೊನೆಗೂ ರಿಲೀಫ್ ಸಿಕ್ಕಿದೆ. ನ್ಯಾಯಾಧೀಶರಾದ ಪ್ರೀತಿ ಜೋಶಿ ಅವರು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದ್ದು, ಗಾಯಕನ ಬಿಡುಗಡೆಗೆ ಹಾದಿ ಸುಗಮವಾಗಿದೆ.” ಕಳೆದ ಕೆಲವು ದಿನಗಳಿಂದ ಅತ್ಯಾಚಾರ ಪ್ರಕರಣದಡಿಯಲ್ಲಿ ಜೈಲು ಕಂಬಿ ಎಣಿಸುತ್ತಿದ್ದ ಮ್ಯೂಸಿಕ್ ಮೈಲಾರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯದ ಆರೋಪದ ವಿಚಾರಣೆ …

Read More »