Breaking News

Daily Archives: ಫೆಬ್ರವರಿ 26, 2026

ಬೆಳಗಾವಿ-ಮುಂಬೈ ವಿಮಾನಯಾನ ಪುನರಾರಂಭ

ಬೆಳಗಾವಿ: ಬೆಳಗಾವಿಯಿಂದ ನವಿಮುಂಬೈ ನಡುವೆ ಮಾ.29ರಿಂದ ಇಂಡಿಗೋ ಸಂಸ್ಥೆ ನೂತನ ವಿಮಾನಯಾನ ಸೇವೆ ಆರಂಭಗೊಳ್ಳಲಿದೆ ಎಂದು ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಕೆಲ ತಿಂಗಳ ಹಿಂದೆ ಸ್ಟಾರ್ ಏರ್ ಸಂಸ್ಥೆ ಬೆಳಗಾವಿ-ಮುಂಬೈ ನಡುವಿನ ವಿಮಾನಯಾನ ಸೇವೆ ರದ್ದುಗೊಳಿ ಸಿತ್ತು. ಇದರಿಂದಾಗಿ ನಾಗರಿಕರಿಗೆ ಅನಾನುಕೂಲತೆ ಎದುರಾಗಿತ್ತು. ಈ ಕುರಿತು ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಭೇಟಿ ಮಾಡಿ ಚರ್ಚಿಸಿದ ಬಳಿಕ ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಳಗಾವಿಯಿಂದ ಮುಂಬೈ, …

Read More »

ಬೆಳಗಾವಿ ಮೀಸಲು ಪಡೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸಂಗಮೇಶ ಅನಿ ‘ಐರನ್ ಮ್ಯಾನ್’ ಪ್ರಶಸ್ತಿ

ಬೆಳಗಾವಿ: ಶ್ರೀಲಂಕಾ ದೇಶದ ಕೋಲಂಬೋ ನಗರದಲ್ಲಿ ನಡೆದ ‘ಐರನ್ ಮ್ಯಾನ್ 70.3’ ಸ್ಪರ್ಧೆಯಲ್ಲಿ ಬೆಳಗಾವಿ ಮೀಸಲು ಪಡೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸಂಗಮೇಶ ಅನಿ ‘ಐರನ್ ಮ್ಯಾನ್’ ಪ್ರಶಸ್ತಿ ಪಡೆದಿದ್ದಾರೆ. ವಿಶ್ವದ ಅತ್ಯಂತ ಕಠಿಣ, ಬಹುಶಿಸ್ತೀಯ ಸಹಿಷ್ಣುತಾ ಸ್ಪರ್ಧೆಗಳಲ್ಲೊಂದಾದ ಇದು ದೈಹಿಕ ಸಾಮರ್ಥ್ಯ, ಮಾನಸಿಕ ಸ್ಥೈರ್ಯ ಹಾಗೂ ಪರಿಶ್ರಮದ ಪರೀಕ್ಷೆಯಾಗಿದೆ. ಸ್ಪರ್ಧೆಯನ್ನು ಸಂಗಮೇಶ 5.9 ಗಂಟೆಯಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮಳೆಯ ಸವಾಲು ಮೀರಿ 90 ಕಿ.ಮೀ. ಸೈಕ್ಲಿಂಗ್ 2.51 ಗಂಟೆಯಲ್ಲಿ ಪೂರ್ಣಗೊಳಿಸಿದರು. …

Read More »

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಶನಿವಾರ ಬಸವ ಜಯಂತಿ ಪೂರ್ವಭಾವಿ ಸಭೆ

ಬೆಳಗಾವಿ: ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕವು ಬಸವ ಜಯಂತಿಯ ಅಂಗವಾಗಿ  ಫೆ.28ರಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಂಡಿದೆ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ  ಜಯಂತಿಯನ್ನು ವೈಭವದಿಂದ ಆಚರಿಸುವ ಉದ್ದೇಶದಿಂದ ರೂಪರೇಷೆಗಳು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ, ಸಮಾಜಮುಖಿ ಚಟುವಟಿಕೆ ಹಾಗೂ ವಿವಿಧ ಸಮಿತಿ ರಚನೆ ಕುರಿತು ಚರ್ಚಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ …

Read More »

ಅನುದಾನ ದುಂದುವೆಚ್ಚ ಕಾನೂನು ಕ್ರಮಕ್ಕೆ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹ

ಬೆಳಗಾವಿ: ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿರುವ 50ಲಕ್ಷ ರೂ. ಅನುದಾನ ದುಂದುವೆಚ್ಚವಾಗಿದೆ. ಈ ಕುರಿತು ಪರಿಶೀಲನೆ ನಡೆಸಿ ಕಾನೂನು ಕ್ರಮವಹಿಸಬೇಕು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಪ್ರವಾಸೋದ್ಯಮ ಇಲಾಖೆ …

Read More »

ಜಿಲ್ಲಾ ದಿನಪತ್ರಿಕಾ ವಿತರಕರ ಸಂಘದಿಂದ ಪತ್ರಿಕಾ ವಿತರಕರ ಆರನೇ ರಾಜ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬೆಳಗಾವಿ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಜಿಲ್ಲಾ ದಿನಪತ್ರಿಕಾ ವಿತರಕರ ಸಂಘದಿಂದ ಪತ್ರಿಕಾ  ವಿತರಕರ ಆರನೇ ರಾಜ್ಯ ಸಮ್ಮೇಳನದ ಪೂರ್ವಭಾವಿ ಸಭೆ ಬುಧವಾರ ಜರುಗಿತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ವಿತರಕರ ಸ್ವಾಗತಕ್ಕೆ ಮಾಡಿಕೊಂಡಿರುವ ಸಿದ್ಧತೆ, ಮಾಡಿಕೊಂಡಿರುವ ಸೌಕರ್ಯಗಳು, ಸಿಗಲಿರುವ ಸೌಲಭ್ಯಗಳು ಹಾಗೂ ಸಮ್ಮೇಳನದ ಯಶಸ್ವಿಗೆ ಸ್ಥಳೀಯ ಪತ್ರಿಕಾ ವಿತರಕರು ವಹಿಸಲಿರುವ ಜವಾಬ್ದಾರಿಗಳ ಕುರಿತು ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಅಧ್ಯಕ್ಷ ಶಂಭುಲಿಂಗ ಚಿತ್ರದುರ್ಗ, ಮೊಳಕಾಲ್ಮೂರು …

Read More »

ಗೃಹರಕ್ಷಕ ದಳ ಸಿಬ್ಬಂದಿ ಹೊಳೆಪ್ಪ ನೇಸರಗಿಗೆ ಮುಖ್ಯ ಮಂತ್ರಿಗಳ ಪದಕ ಪ್ರದಾನ

ಬೆಳಗಾವಿ: ಜಿಲ್ಲೆಯ ಗೃಹರಕ್ಷಕ ದಳ ಸಿಬ್ಬಂದಿ ಹೊಳೆಪ್ಪ ನೇಸರಗಿಗೆ ಅತ್ಯುತ್ತಮ ಸಾರ್ವಜನಿಕ ಸೇವೆ ವರ್ಗದಲ್ಲಿ ಬುಧವಾರ ಬೆಂಗಳೂರಿನ ಬನ್ನೇರುಘಟ್ಟದ ಆರ್.ಎ.ಮುಂಡ್ಕೂರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯ ಮಂತ್ರಿಗಳ ಪದಕ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಪೌರ ರಕ್ಷಣೆ ಮತ್ತು ಎಸ್.ಡಿ.ಆರ್.ಎಫ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್, ಪದಕ ಪ್ರಧಾನ ಮಾಡಿದರು. ಅದರಲ್ಲಿ ಹೊಳೆಪ್ಪ …

Read More »

ತಿಂಗಳೊಳಗೆ ಗುಲ್ಬರ್ಗ ವಿವಿ ಬಿ.ಇಡಿ ಫಲಿತಾಂಶಕ್ಕೆ ಸೂಚಿಸಿ ರಾಜ್ಯಪಾಲರ ಆದೇಶ

ಬೆಂಗಳೂರು: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ 2024ರ ಡಿಸೆಂಬರ್‌ನಲ್ಲಿ ನಡೆದಿದ್ದ ಬಿ.ಇಡಿ 2 ಮತ್ತು 4ನೇ ಸೆಮಿಸ್ಟರ್‌ಗಳಿಗೆ ನಡೆಸಿದ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನ ಒಂದು ತಿಂಗಳೊಳಗೆ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಏಕವ್ಯಕ್ತಿ ಸತ್ಯಶೋಧನಾ ಸಮಿತಿಯು ಮಧ್ಯಂತರ ವರದಿ ನೀಡಿದೆ. ಎರಡೂ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸೌಲಭ್ಯಗಳನ್ನು ಬಳಸಿಕೊಂಡು ಮೌಲ್ಯಮಾಪನ ಮಾಡಿಸಿ ಫಲಿತಾಂಶ ನೀಡಲು ಸೂಚಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು …

Read More »

ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ

ಗದಗ: ಲೋಕಾಯುಕ್ತ  ಅಧಿಕಾರಿಗಳ ದಾಳಿ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ  ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ. ಇದರ ಬೆನ್ನಲ್ಲೇ ಇದೀಗ ಗದಗ  ಶಹರ ಠಾಣೆ ASI ಚನ್ನಬಸಪ್ಪ ಇಂಗಳಳ್ಳಿ ಸಹ ಲೋಕಾಯುಕ್ತ ಬಲೆಬಿದ್ದಿದ್ದಾರೆ. ಪಿಟಿಷನ್ ಅರ್ಜಿ ವಿಚಾರಣೆಗೆ ಲಂಚ 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್​​ ಹ್ಯಾಂಡ್ ಆಗಿ …

Read More »

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

ಬೆಂಗಳೂರು: ಉದ್ಯೋಗಾಂಕ್ಷಿಗಳು  ಬಿಜೆಪಿ ಅವರ ಮಾತು ಕೇಳಿ ಎಫ್‌ಐಆರ್  ಹಾಕಿಸಿಕೊಂಡು ಕೋರ್ಟ್‌ಗೆ ಅಲೆದಾಟ ಮಾಡಬೇಡಿ ಎಂದು ಉದ್ಯೋಗಾಂಕ್ಷಿಗಳಿಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್  ಕಿವಿಮಾತು ಹೇಳಿದ್ದಾರೆ. ಧಾರವಾಡದಲ್ಲಿ ಮಂಗಳವಾರ ಉದ್ಯೋಗಾಂಕ್ಷಿಗಳ ಪ್ರತಿಭಟನೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಯುವಕರು ಉದ್ಯೋಗಕ್ಕಾಗಿ ಪ್ರತಿಭಟನೆ ಮಾಡಿದ್ರು. ಕರ್ನಾಟಕದ ಯುವಕರಿಗೆ ವಿನಂತಿ ಮಾಡುತ್ತೇನೆ. ನಿಮ್ಮ ಪರವಾಗಿ ನಮ್ಮ ಸರ್ಕಾರ ಇದೆ. ನಿಮ್ಮ ಭವಿಷ್ಯ ನಮಗೆ ಮುಖ್ಯ. ಇದಕ್ಕಾಗಿಯೇ ವಯಸ್ಸಿನ ಮಿತಿ ಜಾಸ್ತಿ …

Read More »

ರಷ್ಯಾದ ಇಬ್ಬರು ಮಹಿಳೆಯರ ಜೊತೆ ಸಂಬಂಧವಿದೆ: ಎಪಿಸ್ಟೀನ್‌ ಜೊತೆಗಿನ ಸ್ನೇಹಕ್ಕೆ ಕ್ಷಮೆಯಾಚಿದ ಬಿಲ್‌ ಗೇಟ್ಸ್‌

ವಾಷಿಂಗ್ಟನ್‌: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌  ಜೊತೆಗಿನ ಸಂಬಂಧಕ್ಕಾಗಿ ಕ್ಷಮೆಯಾಚಿಸಿದ ಮೈಕ್ರೋಸಾಫ್ಟ್  ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ರಷ್ಯಾದ ಮಹಿಳೆಯರೊಂದಿಗೆ ತನಗೆ ಎರಡು ಸಂಬಂಧಗಳಿವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಗೇಟ್ಸ್‌ ಫೌಂಡೇಶನ್‌ ಸಿಬ್ಬಂದಿಗಳ ಜೊತೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಅವರು ತಾನು ಎಪ್‌ಸ್ಟೀನ್ ಅಪರಾಧಗಳಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ. ಗೆಟ್ಸ್‌ ಫೌಂಡೇಶನ್ ವಕ್ತಾರರು ಮಾಧ್ಯಮಗಳ ಜೊತೆ ಹಂಚಿಕೊಂಡ ಹೇಳಿಕೆಯ ಪ್ರಕಾರ ಇತ್ತೀಚಿಗೆ ಟೌನ್‌ ಹಾಲ್‌ ಸಭೆಯಲ್ಲಿ ಬಿಲ್‌ ಗೇಟ್ಸ್‌( (Bill Gates) ತನ್ನ ಕೆಲಸದ …

Read More »