ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೂ ಕೂಡ ದ್ವಿಚಕ್ರ ವಾಹನದಲ್ಲಿ ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ …
Read More »Monthly Archives: ಫೆಬ್ರವರಿ 2026
ಫೆ.22ರಂದು ಯುವ ಜೆಡಿಎಸ್ ಸಮಾವೇಶ
ಬೆಳಗಾವಿ : ಜೆಡಿಎಸ್ ವತಿಯಿಂದ ಫೆ.22ರಂದು ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ಯುವ ಜನತಾದಳದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಭಾಗದಲ್ಲಿ ಪಕ್ಷದ ಪ್ರಾಬಲ್ಯ ಕಡಿಮೆ ಇದೆ ಎಂದು ಹಲವರು ಹೇಳುತ್ತಿದ್ದಾರೆ. ಇದನ್ನೇ ಸವಾಲಾಗಿ ಸ್ವೀಕರಿಸಿ, ಪಕ್ಷ ಸಂಘಟನೆ ಮತ್ತು ಪಕ್ಷವನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, …
Read More »Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ
ಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭವಾಗಿದೆ. ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್ಸ್‌ಮನ್ 10ನೇ ತರಗತಿ ಪಾಸ್, ಅಗ್ನಿವೀರ ಟ್ರೇಡ್ಸ್‌ಮನ್ 8ನೇ ತರಗತಿ ಪಾಸ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ದಾಖಲಾತಿಗೆ ನೋಂದಣಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ …
Read More »ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣ ಬಂಧಿತರು ಪುನಃ ಪೊಲೀಸ್ ವಶಕ್ಕೆ
ಬೆಳಗಾವಿ: ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯ ಸೆರೆಹಿಡಿದು, ವೈರಲ್ ಮಾಡುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಮೂವರು ಯುಟ್ಯೂಬರ್‌ಗಳನ್ನು ಪುನಃ ವಶಕ್ಕೆ ಪಡೆದಿರುವ ಮಾಳಮಾರುತಿ ಠಾಣೆ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ದುಲ್ ರಶೀದ್ ಮಕಾನದಾರ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಇವರಿಂದ ಮಾಹಿತಿ ಪಡೆದು ಕಳೆದ ವಾರ …
Read More »ಛತ್ರಪತಿ ಶಿವಾಜಿ ದೇಶಪ್ರೇಮದ ಪ್ರತೀಕ
ಬೆಳಗಾವಿ:ಛತ್ರಪತಿ ಶಿವಾಜಿ ಮಹಾರಾಜರು ಧೈರ್ಯ, ಶಿಸ್ತು ಮತ್ತು ದೇಶಪ್ರೇಮದ ಪ್ರತೀಕ. ಅವರ ಜೀವನ ನಮ್ಮಲ್ಲಿ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಹಿರಿಯ ಸಾಹಿತಿ ಸಿ.ಕೆ.ಜೋರಾಪುರ ತಿಳಿಸಿದರು . ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಾಜಿ ಉದ್ಯಾನದಲ್ಲಿ ಗುರುವಾರ ಏರ್ಪಡಿಸಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲೇ ಸ್ವರಾಜ್ಯದ ಮಹಾನ ಕನಸು ಕಂಡ ಶಿವಾಜಿ ತಮ್ಮ ಬುದ್ಧಿವಂತಿಕೆ ಮತ್ತು …
Read More »ಶಾಹುನಗರದ ಸ್ಮಶಾನ ಭೂಮಿ ಇದನ್ನು ಉಳಿಸಿಕೊಡುವಂತೆ ಡೊಂಬರ ಸಮುದಾಯದ ಆಗ್ರಹ
ಬೆಳಗಾವಿ: ಖಾನಾಪುರ ತಾಲೂಕಿನ ಶಾಹುನಗರದಲ್ಲಿ ಡೊಂಬರ ಸಮುದಾಯದ ಸ್ಮಶಾನ ಭೂಮಿ ಕಬಳಿಸುವ ಹುನ್ನಾರ ನಡೆದಿದ್ದು, ಇದನ್ನು ಉಳಿಸಿಕೊಡುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿಯಲ್ಲಿ ಆಗಮಿಸಿದ ನಿವಾಸಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ರಿಗೆ ಮನವಿ ಸಲ್ಲಿಸಿದರು. ಖಾನಾಪುರ ತಾಲೂಕಿನ ಶಾಹುನಗರದ ಸರ್ವೆ ನಂ 39/ಎ1 ರಲ್ಲಿ ಬರುವ …
Read More »ಮಲ್ಲಮ್ಮ ಉತ್ಸವ ಹಿನ್ನೆಲೆ ಬೆಳವಡಿಯಲ್ಲಿ ಮದ್ಯ ಮಾರಾಟ ನಿಷೇಧ
ಬೆಳಗಾವಿ: ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಫೆ.28ರಿಂದ ಬೆಳವಡಿ ಮಲ್ಲಮ್ಮ ಉತ್ಸವ ಹಮ್ಮಿಕೊಂಡಿರುವ ಹಿನ್ನೆಲೆ ಫೆ.27ರ ಸಂಜೆ 6ರಿಂದ ಮಾ.2ರ ಬೆಳಗ್ಗೆ 6ರವರೆಗೆ ಬೆಳವಡಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ, ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
Read More »ಟ್ರಂಪ್ ಟ್ಯಾರಿಫ್ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್ ಸುಪ್ರೀಂ ಕೋರ್ಟ್ ಚಾಟಿ
ವಾಷಿಂಗ್ಟನ್: ತನ್ನ ವಿರುದ್ಧ ತಿರುಗಿಬಿದ್ದವರ ಮೇಲೆ ಸುಂಕದ ಅಸ್ತ್ರ ಪ್ರಯೋಗಿಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ ಬಹುದೊಡ್ಡ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿರುವ ವ್ಯಾಪಕ ಜಾಗತಿಕ ಸುಂಕಗಳನ್ನ ಅಮೆರಿಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಕಪಾಳಮೋಕ್ಷ ಮಾಡಿದಂತಾಗಿದೆ. ಹೌದು. ಪ್ರಪಂಚದಾದ್ಯಂತ ದೇಶಗಳ ಮೇಲೆ ವಿಧಿಸಿರುವ ಸುಂಕಗಳು ಕಾನೂನು ಬಾಹಿರವಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ ಸುಂಕ ವಿಧಿಸಲು ಕಾನೂನುಬದ್ಧ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರಿದ್ದ ಪೀಠ …
Read More »ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ
ಕೊಪ್ಪಳ: ನರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು …
Read More »ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ
ಬಾಗಲಕೋಟೆ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಿದ್ದಾರೆ. ಕಿಲ್ಲಾ ಓಣಿಯಲ್ಲಿದ್ದ ಮಸೀದಿಯಿಂದಲೇ ಕಲ್ಲು-ಚಪ್ಪಲಿ ತೂರಿ ಬಂದಿದ್ದು, ಭದ್ರತೆಗೆ ನಿಂತಿದ್ದ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಅವರ ಮೇಲೆ ಬಿದ್ದಿದೆ. ಅಲ್ಲದೆ, ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬಾತನ ತಲೆಗೆ ಕಲ್ಲುಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಸ್ಲಿಂ ಯುವಕರ ಪುಂಡಾಟದ ಮಧ್ಯೆ ತರಕಾರಿ ಮಾರುಕಟ್ಟೆ ಬಳಿ ತಳ್ಳೋಗಾಡಿಗಳಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ರು. …
Read More »
Laxmi News 24×7