ಬೆಳಗಾವಿ: ಸಂಕಷ್ಟದ ಸಮಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದು ಸಂಘಟನೆ ಮೂಲಕ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪಾತ್ರ ದೊಡ್ಡದಿದೆ. ಹೀಗಾಗಿ ಅವರು ಮುಖ್ಯಮಂತ್ರಿ ಆಗಲಿ ಎಂಬುದು ಕಾರ್ಯಕರ್ತರ ಬಯಕೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರ ಶ್ರಮವಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. ಡಿ.ಕೆ.ಶಿವಕುಮಾರಗೆ ಶುಭಕಾಲ ಹತ್ತಿರ …
Read More »Monthly Archives: ಫೆಬ್ರವರಿ 2026
Belagavi: ಕಾರು ಹಾಯ್ದು ಮಗು ಸಾವು
ಖಾನಾಪುರ: ತಾಲೂಕಿನ ವಾಟರೆ ಗ್ರಾಮದ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾರು ಹಾಯ್ದು ಶ್ರೀಷಾ ಸಂತೋಷ ನಾಯ್ಕ (1.6 ವರ್ಷ) ಮೃತಪಟ್ಟ ಘಟನೆ ನಡೆದಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನಾಲ್ವರು ಕಳ್ಳರ ಬಂಧನ, 18 ಬೈಕ್ ಜಪ್ತಿ
ಬೆಳಗಾವಿ: ನಗರದ ಮಾರ್ಕೆಟ್, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವುನ ಪ್ರಕರಣದಲ್ಲಿ ಗುರುವಾರ ಪೊಲೀಸರು 6.50 ಲಕ್ಷ ರೂ. ಮೌಲ್ಯದ 18 ಬೈಕ್ ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್.ಗ್ರಾಮದ ರಜತ ಶಿವಣಗೇಕರ (29), ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ವಿಠ್ಠಲ ಆರೇರ (38), ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಉಮೇಶ ಬಾಗೇವಾಡಿ (33), ಗುಡಸ ಗ್ರಾಮದ ಮೌಲಾ ಹಲಕರ್ಣಿ (48) ಬಂಧಿತರು. ಎರಡು ವರ್ಷಗಳಿಂದ ನಗರದ …
Read More »ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. …
Read More »ಟಿಪ್ಪರ್‌ನಲ್ಲಿ ಶಾಲಾ ಮಕ್ಕಳ ಪ್ರವಾಸ – ವಾಹನ ಚಾಲಕರ ವಿರುದ್ಧ ಎಫ್‌ಐಆರ್
ಮಂಗಳೂರು: ಟಿಪ್ಪರ್‌ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಹಾಗೂ ಪಿಕಪ್ ವಾಹನ ಚಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುರುವಾರ (ಫೆ.12) ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ಜೇನು ಕೃಷಿ ಅಧ್ಯಯನ ಪ್ರವಾಸ ನೆಪದಲ್ಲಿ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಅಪಾಯಕಾರಿ ರೀತಿ ಕರೆದೊಯ್ದ ಘಟನಡೆದಿತ್ತು. ಬಳೆಂಜ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆಂದು …
Read More »ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!
ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಕುಟುಂಬಕ್ಕೆ ಸಿಯಾಟಲ್ ಸ್ಥಳೀಯಾಡಳಿತವು ಭಾರಿ ಮೊತ್ತದ ಪರಿಹಾರ ಘೋಷಿಸಿದೆ. ಸುಮಾರು 29 ಮಿಲಿಯನ್ ಡಾಲರ್ (ಅಂದಾಜು 262 ಕೋಟಿ ರೂಪಾಯಿ) ಹಣವನ್ನು ರಾಜಿ ಒಪ್ಪಂದದ ಭಾಗವಾಗಿ ನೀಡಲು ಸ್ಥಳೀಯಾಡಳಿತ ಒಪ್ಪಿಕೊಂಡಿದೆ. 2023ರಲ್ಲಿ ಸಂಭವಿಸಿದ ಈ ದುರಂತ ಪ್ರಕರಣವು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷವಾಗಿ ಭಾರತೀಯ …
Read More »ಜೈಲಿನಲ್ಲಿರೋ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡಿ: ಸಂಸದ ಈರಣ್ಣ ಕಡಾಡಿ ಮನವಿ
ನವದೆಹಲಿ: ಜೈಲಿನ ಒಳಗಿನಿಂದ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಅದೇ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 62(5) ಕ್ಕೆ ತಿದ್ದುಪಡಿ ತರುಬೇಕು ಎಂದು ಸಂಸದ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ. ರಾಜ್ಯಸಭೆಯ ಶೂನ್ಯ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ‘ಸಬ್ ಕಾ ಸಾಥ್, ಸಬ್ ಕಾ …
Read More »ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ ಖಡೆಬಜಾರ್ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಅವರು, ಮಕ್ಕಳ ನ್ಯಾಯ ಕಾಯ್ದೆ-2015ರ ಅನ್ವಯ ಪದಾಧಿಕಾರಿಗಳ ಮಾಹಿತಿ ಹಾಗೂ ಮಕ್ಕಳ ಸಹಾಯವಾಣಿ 1098ರ ಫಲಕಗಳನ್ನು ತಕ್ಷಣವೇ ಶಾಶ್ವತವಾಗಿ ಅಳವಡಿಸುವಂತೆ ಖಡಕ್ ಸೂಚನೆ ನೀಡಿದರು. ಅಲ್ಲದೆ, ಮಕ್ಕಳ ಪ್ರಕರಣಗಳ ರಿಜಿಸ್ಟ್ರಾರ್ …
Read More »ಬಿಡಿಸಿಸಿ ಬ್ಯಾಂಕ್ ಗೆ ಲಾಭವಾಗಲಿ, ನಷ್ಟವಾಗಲಿ ರೈತರಿಗೆ ಸಾಲ ನೀಡಲೇಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಬಿಡಿಸಿಸಿ ಬ್ಯಾಂಕ್ ಗೆ ಲಾಭವಾಗಲಿ, ನಷ್ಟವಾಗಿಲಿ ರೈತರಿಗೆ ಮಾತ್ರ ಆರ್ ಬಿಐ, ನಬಾರ್ಡ್ ನಿರ್ದೇಶನದಂತೆ ಸಾಲವನ್ನು ನೀಡಲೇಬೆಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಾದವರೊಂದಿಗೆ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ರೈತರ ಬ್ಯಾಂಕು. ಬ್ಯಾಂಕ್ ನಿಂದ ರೈತರಿಗೆ ಸಾಲ ನೀಡಲೇಬೇಕು. ಆದರೆ ಆರ್ …
Read More »ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್
ಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸ್ಥಳಕ್ಕೆ ತೆರಳಿ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು. ಹಿರಿಯ ನಾಗರಿಕರಿಗಾಗಿ ವಿವಿಧ ಮೋಜಿನ ಆಟಗಳು, ಸಂವಾದ, ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಸುಮಾರು 15 ಸಾವಿರ ಹಿರಿಯ ನಾಗರಿಕರು ಸೇರಿದಂತೆ 20 …
Read More »
Laxmi News 24×7