ಬೆಂಗಳೂರು: ವಿಧಾನ ಸಭೆ ಕಲಾಪದಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಭಾರೀ ಗದ್ದಲಗಳು ನಡೆಯುತ್ತಿದೆ, ವಿಶೇಷ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ತಿರಸ್ಕರಿಸಿದ ಅವರು, …
Read More »Monthly Archives: ಫೆಬ್ರವರಿ 2026
ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ
ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು …
Read More »ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ
ಹಾಸನ: ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತನನ್ನು ಯೋಗೇಶ್ (50) ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣದ ಫೈನಾನ್ಸ್ ಒಂದರಲ್ಲಿ 7 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದ ಅವರು, ವೈಯಕ್ತಿಕ ಸಮಸ್ಯೆಯಿಂದ ಕಳೆದ 2 ತಿಂಗಳ ಕಂತನ್ನು ಬಾಕಿ …
Read More »ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ
ರಾಯಚೂರು: ಎರಡು ದಶಕಗಳ ಬಳಿಕ ರಾಯಚೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 5, 6 ಮತ್ತು 7 ಮೂರು ದಿನಗಳ ಕಾಲ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಉತ್ಸವ ಹಿನ್ನೆಲೆ ಇಡೀ ರಾಯಚೂರು ನಗರ ಮದುವಣಗಿತ್ತಿಯಂತೆ …
Read More »ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
ಬೆಂಗಳೂರು: ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆದೆ. ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಹೆಚ್.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು …
Read More »ಭಾರತದ ವಿರುದ್ಧ ಪಾಕ್ ಪಂದ್ಯವಾಡಲ್ಲ: ಶೆಹಾಬಾಜ್ ಷರೀಫ್
ಇಸ್ಲಾಮಾಬಾದ್: ಭಾರತದ ವಿರುದ್ಧ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಾಬಾಜ್ ಷರೀಫ್ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು; ಇದು ನಮ್ಮ ಸ್ಪಷ್ಟ ನಿಲುವು. ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಈ ನಿಲುವನ್ನು ತೆಗೆದುಕೊಂಡಿದ್ದೇವೆ. ನಾವು ಬಾಂಗ್ಲಾದೇಶದೊಂದಿಗೆ …
Read More »ಕೇರಳದ ಮೆಡಿಕಲ್ ಕಾಲೇಜು ಬಳಿ ಸ್ಫೋಟಕ ತುಂಬಿದ 100 ಕ್ಕೂ ಹೆಚ್ಚು ಬಾಕ್ಸ್ ವಶಕ್ಕೆ – ಬೆಚ್ಚಿಬಿದ್ದ ಜನ
ತಿರುವನಂತಪುರಂ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯಕೀಯ ಕಾಲೇಜು ಬಳಿಯ ವ್ಯಾನ್‌ನಿಂದ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್‌ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಸ್ಫೋಟಕ ತಿಂಬಿದ ಪೆಟ್ಟಿಗೆಗಳನ್ನ ಪಿಕಪ್ ವಾಹನದಲ್ಲಿ ರಹಸ್ಯವಾಗಿ ಸಾಗಿಸಲಾಗುತ್ತಿತ್ತು. ಆದ್ರೆ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಸಿಕ್ಕಿಬಿದ್ದಿದ್ದು, ಇಡೀ ಕೇರಳದಾದ್ಯಂತ ಕಳವಳಕ್ಕೆ ಕಾರಣವಾಗಿದೆ. ಪಾಲಕ್ಕಾಡ್ ಟೌನ್ ಸೌತ್ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಪಾಲಕ್ಕಾಡ್ ವೈದ್ಯಕೀಯ ಕಾಲೇಜು …
Read More »ಸೈನಿಕರ ಅನುಕೂಲಕ್ಕೆ ಘಟಪ್ರಭಾದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ, ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳಿಗೆ ಸೇರಿದ ನೂರಾರು ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೈನಿಕರು ರಜೆ ಸಂದರ್ಭಗಳಲ್ಲಿ ತಮ್ಮ ಸ್ವಗ್ರಾಮಗಳಿಗೆ ಆಗಮಿಸಲು ಹಾಗೂ ಸೇವಾ ಸ್ಥಳಗಳಿಗೆ ಮರಳಲು ರೈಲು ಪ್ರಯಾಣವೇ ಪ್ರಮುಖ ಅವಲಂಬನೆಯಾಗಿದೆ. ಆದರೆ, ಈ ಭಾಗದ ಸೈನಿಕರಿಗೆ ಅನುಕೂಲವಾಗುವಂತೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಇಲ್ಲದಿರುವುದು ದೀರ್ಘಕಾಲದ ಸಮಸ್ಯೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯಸಭಾ …
Read More »2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಕಾತಿ ಮೂಲಕ ಭರ್ತಿ
ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲನ ಬಜೆಟ್‌ನಲ್ಲಿ ಘೋಷಿಸಿರುವಂತೆ …
Read More »ಕರ್ನಾಟಕ ರಾಜ್ಯಪಾಲರ ಸಹಿ ದುರ್ಬಳಕೆ, ಸುಳ್ಳು ನೇಮಕಾತಿ ಆದೇಶ!
ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಸಹಿ ನಕಲು ಮಾಡಿ ಖೊಟ್ಟಿ ಲೆಟರ್‌ಹೆಡ್ ಬಳಸುತ್ತಿದ್ದ ನಕಲಿ ಐಪಿಎಸ್, ಐಎಎಸ್ ಅಧಿಕಾರಿ ಎಚ್.ಎನ್. ಸುಜಯೇಂದ್ರ (45) ಎಂಬಾತನ ವಿರುದ್ಧ ವಿಜಯನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ನೀಡಿದ ದೂರಿನನ್ವಯ ಸುಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಜ್ಯಪಾಲರ ಹೆಸರಿನ ಲೆಟರ್‌ಹೆಡ್ ಬಳಸಿರುವ ಸುಜಯೇಂದ್ರ, ರಾಜ್ಯಪಾಲರ ಸಹಿ ನಕಲು ಮಾಡಿ ವೆಲ್ಲೂರ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ …
Read More »
Laxmi News 24×7