Breaking News

Monthly Archives: ಫೆಬ್ರವರಿ 2026

ಗೂಡಂಗಡಿಗಳ ಸ್ವಚ್ಛತೆಗೆ ಮಹಾಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಖಡಕ್ ಸೂಚನೆ

ಬೆಳಗಾವಿ: ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಪಾಲಿಕೆಯ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಸೂಚನೆ ನೀಡಿದರು‌. ಸೋಮವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಕ್ರಮ‌ ಕೈಗೊಳ್ಳಬೇಕು. ಖೋಕಾ ಅಂಗಡಿಯಲ್ಲಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆಯಿಂದ ಮಾಡಬೇಕು ಎಂದರು. ನಗರದಲ್ಲಿರುವ ಬಡಾವಣೆಗಳಲ್ಲಿ …

Read More »

ಪರೋಕ್ಷವಾಗಿ ಶಾಸಕ ಯತ್ನಾಳರಿಗೆ ತಿವಿದ ಸಚಿವ ಎಂ.ಬಿ.ಪಾಟೀಲ

ವಿಜಯಪುರ: ರಾಜ್ಯಪಾಲರು ಬಿಜೆಪಿಯವರು ಏನ್ ಹೇಳ್ತಾರೆ ಅದನ್ನ ಮಾಡ್ತಾರೆ. ಈ ರೀತಿ ಮಾಡ್ತಾರೆ ಎಂದು ನಮಗೆ ಗೊತ್ತಿತ್ತು.. ರಾಜ್ಯಪಾಲರಿಂದ ಇನ್ನೇನೂ ನಿರೀಕ್ಷೆ ಮಾಡಲಾಗಲ್ಲಾ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ‌.ಬಿ.ಪಾಟೀಲ ಕಿಡಿ ಕಾರಿದರು. ದ್ವೇಷ ಭಾಷಣ ವಿಧೇಯಕ ಗೌವರ್ನರ್ ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು. ದ್ವೇಷ ಭಾಷಣ ವಿಧೇಯಕ ಹಿಂದೆ ಒಂದು ಧರ್ಮದ ಟಾರ್ಗೆಟ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ಕ್ಯಾಂಪ್ ಪ್ರದೇಶದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್

ಬೆಳಗಾವಿ ಕ್ಯಾಂಪ್ ಪ್ರದೇಶದ ಜನರ ದಶಕಗಳ ಕನಸು ನನಸಾಗುವ ಕಾಲ ಹತ್ತಿರವಾಗಿದ್ದು, ಶಾಸಕ ಆಸೀಫ್ ಸೇಠ್ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು, ಗುಣಮಟ್ಟದ ಕೆಲಸಕ್ಕೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡುವ ಮೂಲಕ ನಿವಾಸಿಗಳಲ್ಲಿ ಭರವಸೆ ಮೂಡಿಸಿದ್ದಾರೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕ್ಯಾಂಪ್ ಪ್ರದೇಶದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. …

Read More »

ಕೋಣದ ಬರ್ತ್‌ಡೇಗೆ 300 ಜನಕ್ಕೆ ಊಟ, 10 ಕೇಜಿ ಕೇಕ್,ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಅಪರೂಪದ ಆಚರಣೆ

ಮನೆ ಮಗನಂತೆ ಬೆಳೆಸಿದ ಕೋಣದ ಒಂದು ವರ್ಷದ ಜನ್ಮದಿನ ಆಚರಿಸುವ ಮೂಲಕ ಚಿಕ್ಕಲವಾಳ ಗ್ರಾಮದ ಯುವಕ ಮಾದರಿಯಾಗಿದ್ದಾನೆ. ಗ್ರಾಮದ ಕೂಲಿಕಾರ ಸಂಜಯ ರಾಮಚಂದ್ರ ಸಠಾಲೆ(30) ಮನೆಯಲ್ಲಿ ಐದು ಎಮ್ಮೆಗಳನ್ನು ಸಾಕಿದ್ದಾರೆ. ಕಬ್ಬು ಕಟಾವು ಹಂಗಾಮಿನಲ್ಲಿ ಕೂಲಿ ಕಾರ್ಮಿಕನಾಗಿ ಕಾರ್ಯ ಮಾಡುವ ಇವರಿಗೆ ಇರುವುದು ಕೇವಲ 10 ಗುಂಟೆ ಜಮೀನು ಮಾತ್ರ. ಬೇರೆಯವರ ಜಮೀನಿನಿಂದ ಎಮ್ಮೆಗಳಿಗೆ ಮೇವು ತಂದು ಸಲಹುತ್ತಾರೆ. ಗುಜರಾತಿನ ಮುರ್ರಾ ಜಾತಿ ಎಮ್ಮೆಗಳನ್ನು ಸಾಕಿರುವ ಇವರು ಒಂದು ಎಮ್ಮೆಗೆ …

Read More »

ರಂಕಾರಿ ಸತ್ಸಂಗ ಮನೆ ಮನೆಗೆ ತಲುಪಿಸಿ – ಜ್ಞಾನ ಪ್ರಚಾರಕ ಮಾರುತಿ ಮೊರೆ.

ನಿರಂಕಾರಿ ಮಂಡಳಿಯ ಸತ್ಸಂಗ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹುಕ್ಕೇರಿ ಸಂತ ನಿರಂಕಾರಿ ಸತ್ಸಂಗ ಮಂಡಳಿ ಜ್ಞಾನ ಪ್ರಚಾರಕ ಮತ್ತು ಸಂಯೋಜಕ ಮಾರುತಿ ಮೊರೆ ಹೇಳಿದರು. ಹುಕ್ಕೇರಿ ನಗರದ ಸಂತ ನಿರಂಕಾರಿ ಮಂಡಳಿಯ ವತಿಯಿಂದ ಮಾತಾ ಸುನಿತಾ ಮೊರೆ ಇವರ ಶ್ರದ್ದಾಂಜಲಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಕರ್ನಾಟಕ ಜೋನಲ್ ಇನ್ ಚಾರ್ಜ ಸುನೀಲ್ ಕುಮಾರ ರಾತ್ರಾಜಿ ಮಾತನಾಡಿ ಮನುಷ್ಯನ ಜಿವಿತಾವಧಿಯಲ್ಲಿ ಇನ್ನೊಬ್ಬರಿಗೆ ಸಹಾಯ ಸಹಕಾರ ಮತ್ತು ಸತ್ಸಂಗ …

Read More »

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು  ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ  ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ  ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ (Forest) ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ …

Read More »

ರಾಷ್ಟ್ರೀಯ ಮಟ್ಟದ ಲೆಗ್​ ಬಾಲ್​ ಕ್ರಿಕೆಟ್​ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ

ರಾಷ್ಟ್ರೀಯ ಮಟ್ಟದ ಲೆಗ್​ ಬಾಲ್​ ಕ್ರಿಕೆಟ್​ ಟೂರ್ನಿಗೆ ಚಿಕ್ಕಮಗಳೂರಿನ 18 ಬಾಲಕರು ಆಯ್ಕೆಯಾಗಿದ್ದಾರೆ ಚಿಕ್ಕಮಗಳೂರು: ರೆಡ್​ ಬಾಲ್​, ವೈಟ್​ ಬಾಲ್​ ಕ್ರಿಕೆಟ್​ ಬಗ್ಗೆ ಕೇಳಿದ್ದೇವೆ. ಇದರ ನಡುವೆ, ಲೆಗ್​ ಬಾಲ್​ ಕ್ರಿಕೆಟ್​ ಕೂಡಾ ಜನಪ್ರಿಯತೆ ಪಡೆಯುತ್ತಿದೆ. ಈ ಕ್ರೀಡೆಯಲ್ಲಿ ಚಿಕ್ಕಮಗಳೂರಿನ 18 ಮಕ್ಕಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಜ್ಜಾಗಿದ್ದಾರೆ. ಲೆಗ್ ಬಾಲ್ ಕ್ರಿಕೆಟ್ ದಕ್ಷಿಣ ಏಷ್ಯಾ ದೇಶಗಳಾದ ಭಾರತ, ನೇಪಾಳ, ಭೂತನ್‌ನಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಪ್ರತಿ ತಂಡದಲ್ಲಿ 11 ಜನರು ಆಟಗಾರರಿರುತ್ತಾರೆ. …

Read More »

ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದೆ

ಬೆಳಗಾವಿ: ಅರಣ್ಯ ಇಲಾಖೆಯ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳನ್ನು ನಾಶಪಡಿಸಲಾಗಿದೆ ಎಂದು ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಮರಗಳನ್ನು ಕತ್ತರಿಸಲಾಗಿದೆ. ಕಂದಾಯ ಇಲಾಖೆಗೆ ಸೇರಿದ 50 ಎಕರೆ ಜಾಗವನ್ನು ಇಂಧನ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಸೋಲಾರ್ ಪ್ಲ್ಯಾಂಟ್ ನಿರ್ಮಿಸಲು ಲೀಸ್ ಮೂಲಕ ಜಮೀನು ನೀಡಲು ಅನುಮೋದನೆ ನೀಡಲಾಗಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಸಲು ಸಾವಿರಾರು ಮರಗಳನ್ನು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ …

Read More »

ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

ಹುಬ್ಬಳ್ಳಿ: ಕ್ಯಾನ್ಸರ್ ಪೀಡಿತ 75 ವರ್ಷದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ಹುಬ್ಬಳ್ಳಿಯ  ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಕೊಲೇಟ್ ಕೊಡುವುದಾಗಿ ಹೇಳಿ ಪಕ್ಕದ ಮನೆಯ ಬಾಲಕಿಯನ್ನ ಮನೆಗೆ ಕರೆಸಿಕೊಂಡು ವೃದ್ಧ ಕೃತ್ಯವೆಸಗಿದ್ದಾನೆ. ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್  ದಾಖಲಾಗಿದ್ದು, ಸದ್ಯ ಆರೋಪಿ ವೃದ್ಧನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆಗೈದಿರುವಂತಹ …

Read More »

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು

ಬೆಂಗಳೂರು: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ಭಾರತಿನಗರದ  ಫ್ರೂಟ್ಸ್ ಮಾರ್ಕೆಟ್ ಬಳಿ ನಡೆದಿದೆ. ಇರ್ಫಾನ್ ಮುಲ್ಲಾನಿ (26) ಮೃತ ವ್ಯಕ್ತಿ. ಜನವರಿ 30ರಂದು ಘಟನೆ ನಡೆದಿದೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಯಾರಾದರು ಮೇಲಿಂದ ತಳ್ಳಿದ್ರಾ ಅನ್ನೋ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾರತಿನಗರ ಪೊಲೀಸರು …

Read More »