ಹಾವೇರಿ: ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಫಲಾನುಭವಿಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 60 …
Read More »Daily Archives: ಮಾರ್ಚ್ 7, 2026
ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ ಈ ಬಾರಿ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇಳಿದ ಎಲ್ಲವನ್ನೂ ಮುಖ್ಯಮಂತ್ರಿಯವರು ಬಜೆಟ್‌ನಲ್ಲಿ ಕೊಟ್ಟಿದ್ದಾರೆ. ಸೇತುವೆಗಳ ನಿರ್ಮಾಣಕ್ಕೆ 20 ವರ್ಷಗಳಿಂದಲೂ ಆಧ್ಯತೆ ನೀಡಿರಲಿಲ್ಲ. ಈ ಬಾರಿ 2 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣ ಸಿಕ್ಕಿದೆ. ಇದರಿಂದ ನಮಗೆ ನಿಭಾಯಿಸಲು …
Read More »ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ – ಸಾಲರಾಮಯ್ಯ ಎಂದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬೀದರ್: ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೀದರ್‌ನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಜೆಟ್ ವಿಚಾರವಾಗಿ ಸಾಲಾರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು. ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಕೇಂದ್ರ ಸರ್ಕಾರ …
Read More »ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ: ಸಿದ್ದರಾಮಯ್ಯ
ಮೈಸೂರು: ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ. ಮೈಸೂರಿನ ಜನ …
Read More »ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ರಾಯಚೂರು: 2024ರಲ್ಲಿ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಲಿಂಗಸುಗೂರು ಪೀಠ ತೀರ್ಪು ನೀಡಿದೆ. ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯರಡೋಣ ಗ್ರಾಮದ ಆರೋಪಿ ದೇವರಾಜ ವಿರುದ್ಧ ಆರೋಪಿ ಸಾಬೀತಾದ ಹಿನ್ನೆಲೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ತೀರ್ಪು ನೀಡಿ, ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. …
Read More »ಆಸ್ತಿ ತೆರಿಗೆ ಏರಿಕೆ ವಿರುದ್ಧ ಹಿರಿಯ ನಾಗರಿಕರ ಆಕ್ರೋಶ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಏರಿಕೆ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಿಯಮ ಬಾಹಿರವಾಗಿ ತೆರಿಗೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಆರೋಪಿಸಿ ಇಂದು ಹಿರಿಯ ನಾಗರಿಕರು ಹಾಗೂ ಮಾಜಿ ನಗರಸೇವಕರು ಮಹಾಪೌರರಿಗೆ ಮನವಿ ಸಲ್ಲಿಸಿದರು. ಶೇ. 3ರಷ್ಟು ತೆರಿಗೆ ಏರಿಕೆ ಜನತೆಗೆ ದೊಡ್ಡ ಹೊರೆಯಾಗಿದೆ ಎಂದರು. ಇಂದು ಬೆಳಗಾವಿ ಮಹಾಪೌರ ಮಂಗೇಶ್ ಪವಾರ್ ಅವರಿಗೆ ಹಿರಿಯ ನಾಗರೀಕರು ಮನವಿಯನ್ನು ಸಲ್ಲಿಸಿದರು. ಈ ವೇಳೆ ಮಹಾಪೌರರೊಂದಿಗೆ ಆಸ್ತಿ ತೆರಿಗೆ …
Read More »ಸಾಲ ಮಾಡಿ ಬಜೆಟ್ ಮಂಡಿಸಿದ್ದು ಇದೇ ಮೊದಲ ಬಾರಿಯಲ್ಲ: ಸಚಿವ ಸತೀಶ್ ಜಾರಕಿಹೊಳಿ
ಕಳೆದ ಐವತ್ತು ವರ್ಷದಿಂದ ಸಾಲ ಮಾಡಿಯೇ ಬಜೆಟ್ ಮಂಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಷ್ಟೇ ಸಾಲ ಮಾಡಿ ಬಜಟ್ ಮಂಡನೆ ಮಾಡಿಲ್ಲ. ಬಿಜೆಪಿಯವರು ಸಾಲ ಮಾಡಿಯೇ ಬಜೆಟ್ ಮಂಡಿಸಿದ್ದು, ಈಗ ಟೀಕೆ ಮಾಡಿದರೆ ಪ್ರಯೋಜನವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಲೋಕೋಪಯೋಗಿ ಇಲಾಖೆ ಬಜೆಟ್’ನಲ್ಲಿ ಸೇತುವೆಗಳಿಗೆ ಬೇಡಿಕೆಯಿಟ್ಟಿತ್ತು. ಅದಕ್ಕೆ ಅನುದಾನವನ್ನು ನೀಡಿದ್ದಾರೆ. ಕಳೆದ …
Read More »ಬೆಳಗಾವಿ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲಾ ಮಕ್ಕಳಲ್ಲಿ ಆತ್ಮರಕ್ಷಣೆಯ ಕಲೆ: 150 ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಣೆ
ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲೆಯಲ್ಲಿ ಮಕ್ಕಳಿಗೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ಪೂರೈಸಿದ ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಿಸಲಾಯಿತು. ಕಾಂಗ್ರೆಸ್ …
Read More »ದರೋಡೆ ಪ್ರಕರಣ: ಕಾಗವಾಡ ಪೊಲೀಸರಿಂದ ಆರೋಪಿ ಬಂಧನ
ಕಾಗವಾಡ ತಾಲೂಕಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಕೇವಲ ನಾಲ್ಕೇ ಗಂಟೆಯಲ್ಲಿ ಭೇದಿಸುವ ಮೂಲಕ ಪೊಲೀಸರು ಖಾಕಿ ಖದರ್ ತೋರಿಸಿದ್ದಾರೆ. ಮಾರಕಾಸ್ತ್ರ ತೋರಿಸಿ ಲಕ್ಷಾಂತರ ರೂಪಾಯಿ ದೋಚಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಉಗಾರ ಬಿ.ಕೆ. ಗ್ರಾಮದ ನಿವಾಸಿ ಶಾಂತು ಅವಳೆಕರ ಎಂಬಾತನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾಗವಾಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಾಗರ …
Read More »ಯುಗಾದಿ ಸಂಭ್ರಮಕ್ಕೆ ‘ಕಾಯಕ ಕಟ್ಟೆ’ ಸಾಥ್: ಬೆಳಗಾವಿಯಲ್ಲಿ ಮಹಿಳಾ ಉದ್ಯಮಿಗಳ ಕರಕುಶಲ ವಸ್ತುಗಳ ಬೃಹತ್ ಪ್ರದರ್ಶನ
ಬೆಳಗಾವಿಯ ಲಿಂಗಾಯತ ಭವನದಲ್ಲಿ ಇಂದು ಮಹಿಳಾ ಶಕ್ತಿಯ ದರ್ಶನವಾಯಿತು. ಯುಗಾದಿ ಹಬ್ಬದ ನಿಮಿತ್ತ ‘ಕಾಯಕ ಕಟ್ಟೆ’ ಮಹಿಳಾ ಉದ್ಯಮಿಗಳ ಬಳಗ ಹಮ್ಮಿಕೊಂಡಿರುವ 5ನೇ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಸ್ಥಳೀಯ ಮಹಿಳಾ ಸಾಧಕಿಯರು ಸಿದ್ಧಪಡಿಸಿದ ವೈವಿಧ್ಯಮಯ ಉತ್ಪನ್ನಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಿಳಾ ಜಿಲ್ಲಾ ಘಟಕದ ಸಹಯೋಗದಲ್ಲಿ ಬೆಳಗಾವಿಯ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಈ ವಿಶೇಷ ಮೇಳವನ್ನು ಆಯೋಜಿಸಲಾಗಿದೆ. …
Read More »
Laxmi News 24×7