ಯರಗಟ್ಟಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಆಯೋಜಿಸಿದ್ದ ಪವಿತ್ರ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಸೌಹಾರ್ದತೆಯ ಕ್ಷಣಗಳನ್ನು ಹಂಚಿಕೊಳ್ಳಲಾಯಿತು. ಈ ಪವಿತ್ರ ರಂಜಾನ್ ಮಾಸವು ಎಲ್ಲರ ಬಾಳಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಸಮಾಜದಲ್ಲಿ ಸಹೋದರತ್ವದ ಭಾವನೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತಾ, ಸಮಸ್ತ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಸಮುದಾಯದ ಪ್ರಮುಖರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.
Read More »Daily Archives: ಮಾರ್ಚ್ 16, 2026
ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ: ಹಿರಿಯ ಮುಖಂಡರ ಸೇರ್ಪಡೆ
ಮುನವಳ್ಳಿ ಭಾಗದ ಹಿರಿಯ ರಾಜಕಾರಣಿಗಳು, ಪುರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ದುಂಡಪ್ಪ ಬುರ್ಜಿ ಅವರು ಇಂದು ಬಿಜೆಪಿ ತೊರೆದು ಅಧಿಕೃತವಾಗಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಜನಸೇವೆಯ ಮನೋಭಾವವು ಮುನವಳ್ಳಿ ಭಾಗದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿದೆ. ಶ್ರೀ ದುಂಡಪ್ಪ ಬುರ್ಜಿ ಅವರಿಗೆ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಾ, ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ನಾವೆಲ್ಲರೂ …
Read More »ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರನ್ನು ಇಷ್ಟು ವರ್ಷ ಗೆಲ್ಲಿಸಿಕೊಂಡು ಬಂದಿದ್ದೇವೆ. ಈ ಉಪಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. ಇದರ ನಡುವೆ ಕೆಲವು ಮುಸ್ಲಿಂ ಮುಖಂಡರು ಸಮರ್ಥ್ ಶಾಮನೂರು ಅವರಿಗೆ ಟಿಕೇಟ್ ನೀಡುವಂತೆ ಸಿಎಂ ಹಾಗೂ ಡಿಸಿಎಂಗೆ ಒತ್ತಾಯಿಸಿದ್ದಾರೆ. ಸಮರ್ಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದ ಮುಸ್ಲಿಂ ಮುಖಂಡರ ವಿರುದ್ಧ ಅದೇ ಸಮುದಾಯದ ಯುವಕರು ಆಕ್ರೋಶ ಹೊರಹಾಕಿದ್ದಾರೆ. ಸಚಿವ ಎಸ್.ಎಸ್ …
Read More »ಬೆಳಗಾವಿಯಲ್ಲಿ ಸಾರಿಗೆ ಬಸ್ ಅಪಘಾತ: 11 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು
ಬೆಳಗಾವಿ :ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾನಾಪುರ ತಾಲೂಕಿನ ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹನ್ನೊಂದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾನಾಪುರ ಘಟಕಕ್ಕೆ ಸೇರಿದ ಕೆಎ-೨೨ ಎಫ್-೨೧೦೩ ಸಂಖ್ಯೆಯ ಬಸ್ಸು ಖಾನಾಪುರದಿಂದ ಬೀಡಿಗೆ ತೆರಳುತ್ತಿತ್ತು. ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ ಬರುತ್ತಿದ್ದಾಗ, ಏಕಾಏಕಿ ರಸ್ತೆಗೆ ಅಡ್ಡ …
Read More »ಗೊಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅದ್ದೂರಿಯಾಗಿ ನಡೆದ ಸಾಂಸ್ಕೃತಿಕ-ತಾಂತ್ರಿಕ ಉತ್ಸವ
ಬೆಳಗಾವಿ: ಬೆಳಗಾವಿಯ KLS Gogte Institute of Technology ನಲ್ಲಿ ಮಾರ್ಚ್ 11 ರಿಂದ 14ರವರೆಗೆ ನಡೆದ AURA 2K26 ಸಾಂಸ್ಕೃತಿಕ ಹಾಗೂ ತಾಂತ್ರಿಕ ಉತ್ಸವ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ನವೀನತೆಗೆ ವೇದಿಕೆಯಾಗಿ ಭರ್ಜರಿಯಾಗಿ ನೆರವೇರಿತು. ನಾಲ್ಕು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತಂಡಭಾವ, ನಾಯಕತ್ವ ಹಾಗೂ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡಿದವು. ಉತ್ಸವದ ಅಂಗವಾಗಿ ನೃತ್ಯ, ನಾಟಕ, ಸಂಗೀತ, …
Read More »ಮಾರ್ಕೆಟ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
ಬೆಳಗಾವಿ: ಬೆಳಗಾವಿಯ ಶೆಟ್ಟಿ ಗಲ್ಲಿಯಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸ ಓಡಾಡುತ್ತಿದ್ದ ವ್ಯಕ್ತಿ ವಿರುದ್ಧ ಮಾರ್ಕೆಟ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸುಜಲ್ ಕೃಷ್ಣಾನಾಥ ಪಾಟೀಲ (19) ಬಂಧಿತ ಆರೋಪಿ. ಆರೋಪಿಯನ್ನು ಹಿಡಿದುಕೊಂಡು ವಿಚಾರಣೆ ಮಾಡಿದಾಗ ಮಾದಕ ಪದಾರ್ಥ ಸೇವನೆ ಮಾಡಿರುವುದು ಕಂಡು ಬಂದಿದೆ. ಮಾರ್ಕೆಟ್ ಪೊಲೀಸ್ ಪಿಎಸ್ಐ ವಿಠಲ ಹಾವನ್ನವರ ಹಾಗೂ ಸಿಬ್ಬಂದಿಯವರು ಆರೋಪಿತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವನ ವಿರುದ್ಧ ಮಾರ್ಕೆಟ್ ಪೋಲೀಸ್ ಠಾಣೆ ಪ್ರಕರಣ ಸಂಖ್ಯೆ.51/2026 ಕಲಂ.27(b) …
Read More »ಸರಸ್ವತಿ, ಜಾವೇದ್ ಯೂನಿವರ್ಸಿಟಿ ಬ್ಲೂ
ಸವದತ್ತಿ: ನಗರದ ಕೆಎಲ್ಇ ಸಂಸ್ಥೆಯ ಎಸ್ವಿಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರವಾಗಿ ಏರ್ಪಡಿಸಿದ್ದ ಹ್ಯಾಂಡ್ಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. ಬಿಎ ತೃತೀಯ ವರ್ಷದ ವಿದ್ಯಾರ್ಥಿನಿ ಸರಸ್ವತಿ ಮಾದರ ಮಹಿಳಾ ಹ್ಯಾಂಡ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು, ಮಾ.22ರಿಂದ 26ರವರೆಗೆ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಣ ಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳಾ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ತಂಡದಿವನ್ನು ಪ್ರತಿನಿಧಿಸಲಿದ್ದಾರೆ. ಬಿಕಾಂ …
Read More »ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ
ನಿಪ್ಪಾಣಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಭಿವದ್ಧಿ ಹಾಗೂ ನಿಪ್ಪಾಣಿ ಕ್ಷೇತ್ರದ ವಿಕಾಸವನ್ನು ಮೆಚ್ಚಿ ಭೀಮಾಪುರವಾಡಿ ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು. ನಗರದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ ಸಭಾಭವನದಲ್ಲಿ ಗುರುವಾರ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆಯಿಂದ ಬಿಜೆಪಿ ಶಕ್ತಿ ಮತ್ತಷ್ಟು ಹೆಚ್ಚಿದೆ. ಕಾರ್ಯಕರ್ತರ ಆಶಯದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು …
Read More »ಗಡಿ ಗ್ರಾಮಗಳಲ್ಲಿ ಜಲ ಸಮಸ್ಯೆ
ಸಂಬರಗಿ: ಶಿರೂರು, ಪಾಂಡೇಗಾಂವ್, ಜಂಬಗಿ, ಸಂಬರಗಿ, ಜಕಾರಟಿ ಸೇರಿದಂತೆ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಗ್ರಾಮಸ್ಥರು ನೀರಿಗಾಗಿ ಪರದಾಡುವಂತಾಗಿದೆ. ಕೃಷಿ ಜಮೀನಿಗೂ ನೀರಿನ ಕೊರತೆ ಕಾಡುತ್ತಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ರೈತರು ಅಗ್ರಹಿಸಿದ್ದಾರೆ. ಜಲ ಜೀವನ ಯೋಜನೆಯಡಿ ನಿರಂತರ ನೀರು ಸರಬರಾಜು ಸ್ಥಗಿತಗೊಂಡಿದೆ. ಜಿಲ್ಲಾಡಳಿತ ನೀರಿನ ಸಮಸ್ಯೆ ಪರಿಹರಿಸುವಂತೆ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದೆ. ಆದರೆ, ಅಧಿಕಾರಿಗಳು ಸೂಚನೆ ಪಾಲಿಸುತ್ತಿಲ್ಲ. ಇದರಿಂದ ನೀರಿನ ಸಮಸ್ಯೆ ದಿನೇದಿನೆ …
Read More »ಐಶ್ವರ್ಯಾಗೆ ಮಿಸೆಸ್, ಲಬ್ಧಿಗೆ ಮಿಸ್ ಪಟ್ಟ
ನಿಪ್ಪಾಣಿ: ಜೊಲ್ಲೆ ಗ್ರೂಪ್, ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಮತ್ತು ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ವತಿಯಿಂದ ಕೃಷಿ ಉತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ‘ಮಿಸೆಸ್’ ನಿಪ್ಪಾಣಿ ಸ್ಪರ್ಧೆಯಲ್ಲಿ ನಗರದ ಐಶ್ವರ್ಯಾ ಖಾಂಡಕೆ ಪ್ರಥಮ, ಅನುರಾಧಾ ಮೇಸ್ತ್ರೀ ಮತ್ತು ರಾಜಶ್ರೀ ಪಾಟೀಲ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು. ‘ಮಿಸ್’ ನಿಪ್ಪಾಣಿ ಸ್ಪರ್ಧೆಯಲ್ಲಿ ಲಬ್ಧಿ ಶಾ. ಪ್ರಥಮ, ರೋಹಿಣಿ ಪಾಟೀಲ ಮತ್ತು ಮಾನಸಿ ಸದಾವರ್ತೆ ಕ್ರಮವಾಗಿ ದ್ವಿತೀಯ ಮತ್ತು ತೃತೀಯ …
Read More »
Laxmi News 24×7