ಬೆಳಗಾವಿ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದುಕೊಂಡು ಮರಳಿ ಬರುವ ವೇಳೆ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಚಿಕ್ಕೋಡಿ ಮೂಲದ ಮೂವರು ಮೃತಪಟ್ಟ ಘಟನೆ ಆಂದ್ರಪ್ರದೇಶದ ಮಾರ್ಕಪುರಂ ಜಿಲ್ಲೆಯ ತಿಪ್ಪಾಯಪಾಲೆಂ ಬಳಿ ಸೋಮವಾರ ಸಂಭವಿಸಿದೆ. ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದ ಅಜಿತ್ ಸಾತವಾರ ( 28), ಗೌರವ್ (40) ಹಾಗೂ ಅಲಕಾ ಶಿಂಧೆ (60) ಮೃತಪಟ್ಟ ದುರ್ದೈವಿಗಳು. ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ …
Read More »Daily Archives: ಮಾರ್ಚ್ 17, 2026
ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!
ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯ ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಕಮ್ಯೂನಿಟಿ ಶಿಕ್ಷೆ ನೀಡಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬವನು ಸಾಕಷ್ಟು ಸಲ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದ. ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಕರೆದೊಯ್ದಿದ್ದರು. ಈ ವೇಳೆ ನ್ಯಾಯಾಲಯದಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಕೋರ್ಟ್ ಈ ರೀತಿಯ …
Read More »ಬೆಳಗಾವಿಯ ನಾಗಸುಧಾ ಸಂಗೀತ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ
ಬೆಳಗಾವಿ: ಸಂಗೀತ ಮನಃಶಾಂತಿ ನೀಡುವ ಜಗತ್ತಿನ ಏಕೈಕ ಶಾಶ್ವತ ಕಲಾ ಮಾಧ್ಯಮವಾಗಿದೆ. ಇದಕ್ಕೆ ಎಂದಿಗೂ ಸಾವಿಲ್ಲ. ಆದರೆ ಇಂದು ಎಐ ಪ್ರವೇಶದಿಂದ ಈ ಕ್ಷೇತ್ರಕ್ಕೂ ಭಯ ಆವರಿಸಿಕೊಂಡಿದ್ದು, ಉಳಿಸಿ ಬೆಳೆಸುವ ಕಾರ್ಯವಾಗಬೇಕಿದೆ ಎಂದು ಲೇಖಕಿ ಆಶಾ ಯಮಕನಮರಡಿ ಹೇಳಿದರು. ಟಿಳಕವಾಡಿಯ ನಾದಸುಧಾ ಸುಗಮ ಸಂಗೀತ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ದೇಶಭಕ್ತಿ ಗೀತೆ, ಭಕ್ತಿ ಗೀತೆ, ಭಾವಗೀತೆ ಮುಂತಾದ ಎಲ್ಲಾ ಪ್ರಕಾರದ ಗೀತೆಗಳನ್ನು …
Read More »ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಜಿ.ಪಂ ಸಿಇಒ
ಬೆಳಗಾವಿ: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕಗಳನ್ನು ಗಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಶುಭಹಾರೈಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ವರ್ಷಾನುಪೂರ್ತಿ ಎಲ್ಲ ವಿಷಯಗಳನ್ನು ತರಗತಿಗಳಲ್ಲಿ ಕಲಿತು, ಸಾಕಷ್ಟು ಅಧ್ಯಯನ ಮಾಡಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದೀರಿ. ಹೀಗಾಗಿ, ಯಾವುದೇ ಭಯ ಹಾಗೂ ಒತ್ತಡಕ್ಕೆ ಒಳಗಾಗದೇ ಧೈರ್ಯವಾಗಿ ಪರೀಕ್ಷೆ ಎದುರಿಸಿ. ಶಾಂತ …
Read More »ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ
ಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು ಬಂಧಿಸಿ, 29 ಲಕ್ಷ ರೂ. ಮೌಲ್ಯದ 267ಗ್ರಾಂ. ಚಿನ್ನಾಭರಣ ಸೇರಿದಂತೆ ಒಟ್ಟು 36.11 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಡಲಾಗಿದೆ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಫೆ.7ರಂದು ರಾಯಬಾಗ ತಾಲೂಕಿನ ಹಾರೂಗೇರಿಯ ಅಭಿಷೇಕ ಪಾಂಡೆ ಎಂಬುವವರು …
Read More »ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ
ಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ ಮಾಡುತ್ತಿರುವ ಛತ್ರಪತಿ ಶಿವಾಜಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು, ಭಾರತದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಸೋಮವಾರ ಅಳವಡಿಸಿದೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಈ ಬ್ಯಾನರ್‌ಗಳನ್ನು ಅಳವಡಿಸಿದರು. ಇದರಲ್ಲಿ ಯುಗಾದಿಯ ಶುಭಾಶಯವನ್ನೂ ಕೋರಲಾಗಿದೆ. ಇದೇ …
Read More »ಏ.14ರ ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಭಾವಿ ಸಭೆ
ಬೆಳಗಾವಿ: ಪ್ರತಿ ವರ್ಷದಂತೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಬೇಡ್ಕರ್ ಉದ್ಯಾನವನದಲ್ಲಿ ಏಪ್ರಿಲ್ 14 ರಂದು ಅರ್ಥಪೂರ್ಣ, ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾನರ್ ಅಳವಡಿಕೆ ಸೇರಿದಂತೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಕುಡಿಯುವ ನೀರು, ಅಲ್ಪೋಪಹಾರ ಒದಗಿಸಬೇಕು. ಕಾರ್ಯಕ್ರಮದ ಕುರಿತು ಶಿಷ್ಟಾಚಾರದನ್ವಯ ಆಂಮತ್ರಣ …
Read More »ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ
ಬೆಂಗಳೂರು: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ …
Read More »ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ
ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2,31,683 ಮತದಾರರಿದ್ದು ಇದರಲ್ಲಿ 1,13,654 ಪುರುಷರು, 1,17,986 ಮಹಿಳೆಯರು ,43 ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರವೂ 284 ಮತಗಟ್ಟೆಗಳನ್ನು ಹೊಂದಿದೆ. ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. …
Read More »ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಆರತಿರಾವ್ ಪ್ರಶ್ನೆ ಕೇಳಿದ್ರು. ಇದಕ್ಕೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಮೈಸೂರು, ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಆಗ್ತಿದೆ. ಕಟ್ಟಡ ಸಂಪೂರ್ಣ ಆಗಿ, ಉದ್ಘಾಟನೆ ಆಗಿದೆ. ಎಕ್ಯುಪ್‌ಮೆಂಟ್ ಟೆಂಡರ್ ಕರೆಯಲಾಗಿದೆ. ಹುದ್ದೆಯ ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿದೆ. …
Read More »
Laxmi News 24×7