Breaking News

Daily Archives: ಮಾರ್ಚ್ 17, 2026

ಅಂತರರಾಜ್ಯ ವಂಚಕರ ಜಾಲವನ್ನು ಭೇದಿಸಿದ ಗೋಕಾಕ ಪೊಲೀಸರು

ಬೆಳಗಾವಿ: ಜಿಲ್ಲೆಯ ಗೋಕಾಕದಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಮಂದಿ ಬಂಧಿಸಲಾಗಿದೆ ಎಂದು ಎಸ್ಪಿ. ಕೆ. ರಾಮರಾಜನ್ ಹೇಳಿದರು. ಗೋಕಾಕದ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲದ ಮೇಲೆ ಗೋಕಾಕ ಶಹರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದವರನ್ನು ಪರಶುರಾಮ …

Read More »

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಕೊಡಗು  ಜಿಲ್ಲೆಯ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದು, ಗುಡುಗು ಸಹಿತ ವರುಣ ಅಬ್ಬರಿಸಿದ್ದಾರೆ. ಇತ್ತ ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಹಾಸನ  ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಯಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ವಾಹನ …

Read More »