Breaking News

Daily Archives: ಮಾರ್ಚ್ 23, 2026

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ (Aನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ  ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. …

Read More »

ಕೆಲಸ ಕೊಡಿಸೋದಾಗಿ 25 ಕೋಟಿ ವಂಚನೆ – ಜಡ್ಜ್ ಸಹಿಯನ್ನೇ ನಕಲು ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು …

Read More »

ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಸಮರಕ್ಕೂ ಮುನ್ನವೇ ರಾಜಕೀಯ ವಲಯದಲ್ಲಿ ಬಿರುಗಾಳಿ ಎದ್ದಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಸಿಗದ ಹಿನ್ನೆಲೆ 20 ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು , ಯುವನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ  ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖಂಡರು ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್‌ …

Read More »

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾ.ಪಂ ಸಿಬ್ಬಂದಿ ಸಾವು

ಬಳ್ಳಾರಿ: ಕರ್ತವ್ಯನಿರತ ಗ್ರಾ.ಪಂ ಸಿಬ್ಬಂದಿ  ಹಠಾತ್ತನೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ವಿಜಯನಗರ  ಡಾದ ಗ್ರಾಮ ಪಂಚಾಯತಿ ನೀರಗಂಟಿ ಗಂಗಪ್ಪ ಎಲ್ (58) ಮೃತ ದುರ್ದೈವಿ. ನೀರಗಂಟಿ ಗಂಗಪ್ಪ ಕಳೆದ 29 ವರ್ಷಗಳಿಂದ ನೀರಗಂಟಿಯಾಗಿ ಸೀತಾರಾಮ ತಾಂಡದ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಪ್ಪ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮತ್ತೆ ಕೆಲಸಕ್ಕೆ ಹೋಗಿದ್ದರು. ಇಂದು ಕರ್ತವ್ಯದಲ್ಲಿದ್ದಾಗಲೇ ಗಂಗಪ್ಪ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು …

Read More »

ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ

ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ?ತಿಳಿಸಿದರು. ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಆದ ಬಳಿಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ಪ್ರತಿಕ್ರಿಯೆ ನೀಡಿದ ಅವರು, ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಹೆಚ್‌.ವೈ ಮೇಟಿ ಅವರ 2ನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ …

Read More »

ಬೆಳಗಾವಿ: ಕ್ರಿಕೆಟ್ ಬ್ಯಾಟ್‌ಗೆ ಜಮಾಯಿಸಿದ್ದ ಹಣದಲ್ಲಿ ಸ್ಮಶಾನಕ್ಕೆ ಸೌದೆ ದಾನ; ಬಾಲಕಿಯ ಅಪ್ರತಿಮ ಮಾನವೀಯತೆಗೆ ಸಲಾಂ!

ಸಾವಿನ ಮನೆಯಲ್ಲೂ ಮಾನವೀಯತೆಯ ಹಣತೆ ಬೆಳಗಿದ ಘಟನೆಯೊಂದು ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ನಡೆದಿದೆ. ತನ್ನ ಆಸೆಯ ಕ್ರಿಕೆಟ್ ಬ್ಯಾಟ್ ಖರೀದಿಸಲು ಕೂಡಿಟ್ಟಿದ್ದ ಹಣವನ್ನು ಸ್ಮಶಾನದ ಕಾರ್ಯಕ್ಕೆ ನೀಡಿ ಪುಟ್ಟ ಬಾಲಕಿ ನಿಧಿ ಪಾಟಿಲ್ ಎಲ್ಲರ ಕಣ್ಣಾಲಿಗಳು ತೇವವಾಗುವಂತೆ ಮಾಡಿದ್ದಾಳೆ. ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅತ್ಯಗತ್ಯವಾಗಿ ಬೇಕಾಗುವ ಬೆರಣಿಗಳನ್ನು ದಾನ ಮಾಡುವ ಮೂಲಕ ಸಮಾಜ ಸೇವಕರು ಗಮನ ಸೆಳೆದಿದ್ದಾರೆ. ಸಮಾಜ ಸೇವಕರಾದ ಗಂಗಾಧರ್ ಪಾಟಿಲ್ ಮತ್ತು ಆಲನ್ …

Read More »

ಹೊಸ ಜಾಹೀರಾತು ನೀತಿಗೆ ಸಂಪಾದಕರ ಸಂಘದ ವಿರೋಧ: ಸಚಿವ ಸತೀಶ್ ಜಾರಕಿಹೊಳಿಗೆ ಮನವಿ

ರಾಜ್ಯ ಸರ್ಕಾರದ ಹೊಸ ‘ಜಾಹೀರಾತು ನೀತಿ-2026’ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಅಸ್ತಿತ್ವಕ್ಕೆ ಮಾರಕವಾಗಿದೆ ಎಂದು ಬೆಳಗಾವಿ ಜಿಲ್ಲಾ ಸಂಪಾದಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿರುವ ಸಂಘವು, ಕಠಿಣ ನಿಯಮಗಳನ್ನು ಕೂಡಲೇ ಸರಳಗೊಳಿಸುವಂತೆ ಆಗ್ರಹಿಸಿದೆ. ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಸಂಪಾದಕರ ಸಂಘದ ನಿಯೋಗ, ಹೊಸ ನೀತಿಯಲ್ಲಿನ ಅವೈಜ್ಞಾನಿಕ ನಿಯಮಗಳ ಬಗ್ಗೆ ಸುದೀರ್ಘ ಚರ್ಚೆ …

Read More »

ಸ್ವಿಮ್ಮಿಂಗ್ ವೇಳೆ ಹೃದಯಾಘಾತ: ಸೇನಾಧಿಕಾರಿ ಸಾವು – ಬೆಳಗಾವಿಯಲ್ಲಿ ದುರ್ಘಟನೆ

ಬೆಳಗಾವಿ: ಸ್ವಿಮ್ಮಿಂಗ್ ಅಭ್ಯಾಸದ ವೇಳೆ ತೀವ್ರ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ದುರ್ಘಟನೆ ನಗರంలోని ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ನಡೆದಿದೆ. ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್ ಸಿಂಗ್ ಅವರು ಬೆಳಗಾವಿಯ ಎಂಎಲ್ಐಆರ್‌ಸಿ (MLIRC) ಕಮಾಂಡೋ ವಿಂಗ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಅಧಿಕಾರಿಯಾಗಿದ್ದರು. ಸ್ವಿಮ್ಮಿಂಗ್ ಪೂಲ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತೀವ್ರ ಹೃದಯಾಘಾತಕ್ಕೊಳಗಾದರು. ಘಟನೆಯನ್ನು ಗಮನಿಸಿದ ತಕ್ಷಣ ಲೈಫ್‌ಗಾರ್ಡ್ ಪ್ರದೀಪ್ ಕುಮಾರ್ ಅವರು ಅಮಿತ್ ಸಿಂಗ್ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ …

Read More »