Breaking News

Daily Archives: ಮಾರ್ಚ್ 24, 2026

ಕುಟುಂಬ ರಾಜಕಾರಣ ಎಲ್ಲ ಪಕ್ಷದಲ್ಲೂ,  ಪಕ್ಕದ ರಾಜ್ಯದಲ್ಲೂ ಇದೆ

ಬೆಳಗಾವಿ: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಕುಟುಂಬದಲ್ಲೇ ಟಿಕೆಟ್‌ಗಾಗಿ ಸ್ಪರ್ಧೆ ಇರುವುದರಿಂದ ಆಯಾ ಕುಟುಂಬದಲ್ಲೇ ಅವಕಾಶ ನೀಡಲಾಗಿದೆ. ಕುಟುಂಬ ರಾಜಕಾರಣ ನಮ್ಮ ಪಕ್ಷದಲ್ಲಿ ಮಾತ್ರವಲ್ಲ, ಎಲ್ಲ ಪಕ್ಷದಲ್ಲೂ,  ಪಕ್ಕದ ರಾಜ್ಯದಲ್ಲೂ ಇದೆ. ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಚುನಾವಣೆಗೆ ನಿಲ್ಲಿಸಬೇಕಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಸಮರ್ಥಿಸಿಕೊಂಡರು. ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯಲ್ಲಿ ನಿರೀಕ್ಷೆಯಂತೆ ಅಭ್ಯರ್ಥಿ ಆಯ್ಕೆಯಾಗಿದೆ. ಹಂತ-ಹಂತದಲ್ಲಿ ಚುನಾವಣೆ ಮಾಡುತ್ತೇವೆ. ಪಕ್ಷದೊಳಗಿನ ಗಲಾಟೆಗಳಿಂದ ನಮ್ಮಲ್ಲಿದ್ದ ಮೂರು …

Read More »

ಸೈಬರ್ ವಂಚನೆ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 8 ಜನ ಆರೋಪಿಗಳ ವಿರುದ್ಧ ಪ್ರಕರಣ

ಬೆಳಗಾವಿ: ದೇಶದ ವಿವಿಧೆಡೆ ನಡೆದ ಸೈಬರ್ ವಂಚನೆ ಪ್ರಕರಣಗಳಲ್ಲಿ ಜಿಲ್ಲೆಯಲ್ಲಿ 1,400 ಬ್ಯಾಂಕ್ ಖಾತೆಗಳು ಕೆಲಸ ಮಾಡಿರುವ ಬಗ್ಗೆ ಸಂಶಯವಿದ್ದು, ಈ ಸಂಬಂಧಿತ ತನಿಖೆಯ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ 8 ಜನ ಆರೋಪಿಗಳ 24 ಮ್ಯೂಲ್ ಅಕೌಂಟ್‌ಗಳಿಂದ 1,02,66,928ರೂ. ವ್ಯವಹಾರ ನಡೆದಿರುವುದನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ನಗರದ ಸಿಸಿಪಿಎಸ್ ಠಾಣೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಪ್ಪಾಣಿಯ ಶುಭಂ ಲಕ್ಕನ್ನವರ, ಅಮಿತ ಶಿಂಧೆ, ರಾಹುಲ …

Read More »

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಬೆಳಗಾವಿ: ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ-2026ನ್ನು ವಿರೋಧಿಸಿ ನಗರದಲ್ಲಿ ಸೋಮವಾರ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ, ಕೆಲಹೊತ್ತು ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆ ಕೂಗಿದ ಪ್ರತಿಭಟನಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಪತ್ರ ಸಲ್ಲಿಸಿದರು. ತಿದ್ದುಪಡಿ ಮಸೂದೆ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಗಳ ಗೌರವಕ್ಕೆ ಹಾನಿ ಮಾಡುವಂತಿದೆ. ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಸ್ವಯಂ ನಿರ್ಣಯದ …

Read More »

ಸೂಕ್ತ ಸಂಗಾತಿ ಆಯ್ಕೆ ದಾಂಪತ್ಯ ಬುದಕಿಗೆ ಮುಖ್ಯ

ಬೆಳಗಾವಿ: ದಾಂಪತ್ಯ ಜೀವನ ಬುದಕಿಗೆ ಬಹುದೊಡ್ಡದು. ಧರ್ಮ, ಅರ್ಥ, ಕಾಮ, ಮೋಕ್ಷಗಳು ಚತುರ್ವಿಧ ಪುರುಷಾರ್ಥಗಳಲ್ಲಿ ಬಹು ಮುಖ್ಯವೆನಿಸಿದೆ. ಇವುಗಳನ್ನು ಈಡೇರಿಸಿಕೊಳ್ಳುವುದು ಜೀವನದ ಕರ್ತವ್ಯವೆನಿಸಿದೆ. ಹಾಗಾಗಿ  ಸೂಕ್ತ ಸಂಗಾತಿ ಆಯ್ಕೆ ಬಹು ಮುಖ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವಧು-ವರ ಅನ್ವೇಷಣಾ ಕೇಂದ್ರದ ಅಧ್ಯಕ್ಷ ಡಾ.ಎಫ್.ವಿ.ಮಾನ್ವಿ ಹೇಳಿದರು. ನಗರದ ಜೆಎನ್‌ಎಂಸಿ ಜೀರಿಗೆ ಸಭಾಂಗಣದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವಧು-ವರ ಅನ್ವೇಷಣಾ ಕೇಂದ್ರ ಹಾಗೂ ಕೆಎಲ್ಇ …

Read More »

ನಿಯಮಬಾಹಿರ ಹಸಿ ಮೆಣಸಿನಕಾಯಿ ಖರೀದಿ ವ್ಯಾಪಾರ ತಡೆಗೆ ಅಗ್ರಹ

ಬೆಳಗಾವಿ: ಜಿಲ್ಲೆಯ ಖಾನಾಪುರ, ಕಿತ್ತೂರ ಮತ್ತು ಬೈಲಹೊಂಗಲ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಕೆಲವು ಖಾಸಗಿ ವ್ಯಾಪಾರಿಗಳು ನಿಯಮಬಾಹಿರವಾಗಿ ಹಸಿ ಮೆಣಸಿನಕಾಯಿ ಖರೀದಿ ವ್ಯಾಪಾರ ಮಾಡುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಆಗ್ರಹಿಸಿದೆ. ಈ ಸಂಬಂಧ ಮಹಾಸಂಘದಿಂದ ಜಿಲ್ಲಾಧಿಕಾರಿ, ಎಪಿಎಂಸಿ ಕಾರ್ಯದರ್ಶಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಮೂರು ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಸಿ ಮೆಣಸಿನಕಾಯಿ ಬೆಳೆಯ್ತುತಾರೆ. ಮೊದಲು …

Read More »

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ ಈಚೆಗೆ ಜನಿಸಿದ ಆನೆ ಮರಿಗೆ ನಾಮಕರಣ ಮಾಡುವುದಾಗಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ತಿಳಿಸಿದರು. ಶಿವಮೊಗ್ಗ  ಮೃಗಾಲಯಕ್ಕೆ ಭೇಟಿ ನೀಡಿದ್ದ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದರ ಜೊತೆಗೆ ಡಾ.ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆಯೂ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಡಾ.ಸಮೀಕ್ಷಾ …

Read More »

ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ: ಈಜಾಡಲು  ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಡ್ಯ  ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಮೃತ ಬಾಲಕ. ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಶಾಲೆಗೆ ರಜೆ ಇದ್ದ ಕಾರಣ ತನ್ನ 4 ಮಂದಿ ಸ್ನೇಹಿತರೊಂದಿಗೆ ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ. ಭಾನುವಾರ …

Read More »

ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

ರಾಯಚೂರು: ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ, ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ  ಗೆಲುವು ಖಚಿತ ಅಂತ ಮಾಜಿ ಸಚಿವ ಬಿ.ಶ್ರೀರಾಮುಲು  ಹೇಳಿದ್ದಾರೆ. ರಾಯಚೂರಿನ ಮಸ್ಕಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಯೊಂದಕ್ಕೂ ಹೈಕಮಾಂಡ್ ಅಂತಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಡಳಿತ ವ್ಯವಸ್ಥೆ ಸರಿಯಿಲ್ಲ ಅನ್ನೋದನ್ನ ಇದು ತೋರಿಸುತ್ತೆ. ರಾಜ್ಯ ಸರ್ಕಾರದ ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹೆಚ್ಚಿಸಿರುವುದಕ್ಕೆ ಅಸಮಾಧಾನದಲ್ಲಿದ್ದಾರೆ. ಎರಡು ಉಪಚುನಾವಣೆಯಲ್ಲಿ ಬಿಜೆಪಿ …

Read More »

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

ಬೆಂಗಳೂರು: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್  ಪ್ರಕರಣ ಸಂಬಂಧ ನೋಟಿಸ್ ಬೆನ್ನಲ್ಲೇ ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ (Rikki Rai) ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ರಿಕ್ಕಿಯನ್ನು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ಮುಂದೆ ವಕೀಲರ ಜೊತೆ ರಿಕ್ಕಿ ರೈ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಪೊಲೀಸರು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಮಾಧ್ಯಮಗಳ ಕಣ್ಣುತಪ್ಪಿಸಿ ಕಬ್ಬನ್ ಪಾರ್ಕ್ ಸಂಚಾರ …

Read More »

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

ದಾವಣಗೆರೆ: ಸಮರ್ಥ್ ಶಾಮನೂರು  ಟಿಕೆಟ್‌ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್‌ ನಾಯಕರು  ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಶಾಮನೂರು ಶಿವಶಂಕರಪ್ಪಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ  ಕ್ಷೇತ್ರದ ಟಿಕೆಟ್‌ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್‌ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್‌ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ಗೆ …

Read More »