ಬಾಗಲಕೋಟೆ: ಇಲ್ಲಿನ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಿನ್ನೆ ಕಾಲೇಜು ಕ್ಯಾಂಪಸ್ಸಿಗೆ ಹೋಗಿ ನೀವು ಬಿಜೆಪಿಗೆ ಮತ ಕೊಟ್ಟರೆ ಜೈಲಿಗೆ ಹಾಕುತ್ತೇವೆ ಎಂಬ ಮಾಹಿತಿಯುಳ್ಳ ಒಂದು ಕರಪತ್ರವನ್ನು ಹಂಚಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು. ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು …
Read More »Daily Archives: ಏಪ್ರಿಲ್ 5, 2026
ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು- ಬಿ.ವೈ.ವಿಜಯೇಂದ್ರ ಟೀಕೆ
ದಾವಣಗೆರೆ: ಬಾಗಲಕೋಟೆಯಲ್ಲಿ ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಸ್ಟೆಲ್‍ಗೆ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿಗಳನ್ನು ಬೆದರಿಸಲು ಮುಂದಾಗಿದ್ದರು. ಇದು ಕಾಂಗ್ರೆಸ್ ಪಕ್ಷದ ಸೋಲಿನ ಆತಂಕಕ್ಕೆ ಸ್ಪಷ್ಟ ಉದಾಹರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಸರಕಾರಿ ವಾಹನಗಳಲ್ಲಿ ಬಂದಿದ್ದುದಾಗಿ ತಿಳಿಸಿದರು. ದಾವಣಗೆರೆ- ಬಾಗಲಕೋಟೆಯಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತದಾರರು …
Read More »ಕಾಂಗ್ರೆಸ್ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡುತ್ತಿದೆ: ಚರಂತಿಮಠ
ಬಾಗಲಕೋಟೆ: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಎನ್.ಎಸ್.ಯುಐ ಕಾರ್ಯಕರ್ತರನ್ನ, ಹಿಂದೂ ಅಲ್ಲದ ಯುವಕರನ್ನ ಕೇಸರಿ ಶಾಲು ಹಾಕಿಸಿ ಶಿಕ್ಷಣ ಸಂಸ್ಥೆಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಗಂಭೀರ ಆರೋಪ ಮಾಡಿದ್ದಾರೆ. ಉಪಚುನಾವಣೆ ರಣಕಣವಾಗಿ ಬದಲಾಗುತ್ತಿದ್ದು ಬಿಜೆಪಿಯು ವಿದ್ಯಾಗಿರಿ, ಜ್ಯೋತಿ ಕಾಲೋನಿ, ಬಿಟಿಡಿಎ ಭಾಗದಲ್ಲಿ ಮೆನೆ ಮನೆಗೆ ತೆರಳಿ, ಮನೆ ಸದಸ್ಯರಿಗೆ ಬಿಜೆಪಿಗೆ ಓಟ್ ಮಾಡುವಂತೆ ಮನವಿ ಮಾಡಿದರು.ಕೆಲ ಮನೆಗಳಲ್ಲಿ ಶಾಲು …
Read More »ಬೆಂಗಳೂರಿನಲ್ಲಿಂದು RCB vs CSK ಹೈವೋಲ್ಟೇಜ್ ಕದನ – ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 2,300 ಪೊಲೀಸರಿಂದ ಭದ್ರತೆ
ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ. ಈ ಹಿನ್ನೆಲೆ ಭದ್ರತಾ ವ್ಯವಸ್ಥೆಗಳನ್ನ ಮತ್ತಷ್ಟು ಹೆಚ್ಚಿಸಲಾಗಿದೆ. ಎಸ್‌ಆರ್‌ಎಸ್ (SRH) ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಕಂಡುಬಂದ ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಲು ಹಾಗೂ ಕ್ರಿಕೆಟ್ ಪ್ರಿಯರ ಸುರಕ್ಷತೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ಈ ಬಾರಿ ಭದ್ರತಾ ವ್ಯವಸ್ಥೆಗಳನ್ನ ಮತ್ತಷ್ಟು ಬಿಗಿಗೊಳಿಸಲಾಗಿದೆ. …
Read More »ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿದ ವ್ಯಕ್ತಿಯ ಬರ್ಬರ ಹತ್ಯೆ.. !
ಬೆಳಗಾವಿ-ಬೆಳಗಾವಿಯಲ್ಲಿ ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಘಟನೆ. ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ. ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯ. ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ ಸಂಗನಗೌಡ. ಕುಣಿಬೇಡಾ ಮುಂದೆ ಹೋಗು ಎಂದು ಹೇಳಿದ್ದ ಆರೋಪಿಗಳು. ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ನಡೆಯಿತು ಕೊಲೆ. ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ …
Read More »ಶಾಸಕ ರಮೇಶ ಜಾರಕಿಹೊಳಿ ಅವರಿಂದ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ
ಗೋಕಾಕ: ನಗರದ ಜನತೆ ಮತ್ತು ಭಕ್ತರಿಗಾಗಿ ಶ್ರೀ ಚೌಡೇಶ್ವರಿ ದೈವಿ ವನ ನಿರ್ಮಾಣ ಮಾಡಲಾಗುತ್ತಿದೆ. ಗೋಕಾಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ನಗರದ ಕಡಬಗಟ್ಟಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಸುಮಾರು ೧ಕೋಟಿ ರೂಗಳ ವೆಚ್ಚದಲ್ಲಿ ಅರಣ್ಯ ಇಲಾಖೆಯಿಂದ ಶುಕ್ರವಾರದಂದು ಚೌಡೇಶ್ವರಿ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಗೋಕಾಕ ನಗರ ಹಾಗೂ ತಾಲೂಕಿನ ಅಭಿವೃದ್ಧಿಗಾಗಿ ಅನೇಕ ಜನಪರ …
Read More »ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್
ಕಾರವಾರ:- ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ …
Read More »ಮುಂಡಗೋಡ ಬಿಎಸ್‌ಎನ್‌ಎಲ್ ಕಚೇರಿಗೆ ಕಳ್ಳರ ಕನ್ನ: ₹70 ಸಾವಿರ ಮೌಲ್ಯದ ತಾಮ್ರದ ಕೇಬಲ್ ಲೂಟಿ
ಮುಂಡಗೋಡ: ಮುಂಡಗೋಡ ಪಟ್ಟಣದ ಹೃದಯಭಾಗದಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿಯನ್ನು ಗುರಿಯಾಗಿಸಿಕೊಂಡ ಖದೀಮರು, ಬೆಲೆಬಾಳುವ ತಾಮ್ರದ ಕೇಬಲ್ ಕಳವು ಮಾಡಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮುಂಡಗೋಡದ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಬಿಎಸ್‌ಎನ್‌ಎಲ್ (BSNL) ಕಚೇರಿಯ ಆವರಣದಲ್ಲಿ ಈ ಕಳ್ಳತನ ನಡೆದಿದೆ. ಕಳೆದ ಮಾರ್ಚ್ 18ರ ರಾತ್ರಿ 8 ಗಂಟೆಯಿಂದ ಮಾರ್ಚ್ 19ರ ಮುಂಜಾನೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಚೇರಿಯ ದೂರವಾಣಿ ವಿನಿಮಯ ಕೇಂದ್ರದಿಂದ …
Read More »ಗೋಗಳ್ಳರ ಭಾರಿ ಹೈಡ್ರಾಮಾ; ಸಾರ್ವಜನಿಕರು ಹಾಗೂ ಪೊಲೀಸರಿಂದ ತಪ್ಪಿಸಿಕೊಳ್ಳಲು ಸರಣಿ ಎಸ್ಕೇಪ್
ಭಟ್ಕಳ: ತಾಲೂಕಿನ ತಲಗೇರಿಯ ವಿವೇಕಾನಂದ ನಗರದಲ್ಲಿ ಶನಿವಾರ ತಡರಾತ್ರಿ ಗೋಗಳ್ಳರ ಭಾರಿ ಹೈಡ್ರಾಮಾವೇ ನಡೆದಿದೆ. ಹಸು ಕದಿಯಲು ಬಂದಿದ್ದ ಖದೀಮರು ಗ್ರಾಮಸ್ಥರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 3:45 ರ ಹೊತ್ತಿಗೆ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗೋವನ್ನು ಕದ್ದೊಯ್ಯಲು ಯತ್ನಿಸುತ್ತಿದ್ದಾಗ ವಿವೇಕಾನಂದ ನಗರದ ಗ್ರಾಮಸ್ಥರು ಅವರನ್ನು ಸುತ್ತುವರೆದಿದ್ದಾರೆ. ಈ ವೇಳೆ ಸಿಕ್ಕಿಬೀಳುವ ಭಯದಿಂದ ಆರೋಪಿಗಳು …
Read More »ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು
ಬಾಗಲಕೋಟೆ: ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ನೀವು ಬಾಗಲಕೋಟೆಗೆ ಬಂದು ಐದು ದಿನ ಬಂದು ಪ್ರಚಾರ ಮಾಡುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ, ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ಕೊಟ್ಟಿದ್ದಾರೆ. ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಲು ಬಾಗಲಕೋಟೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಎರಡೂ ಚುನಾವಣಾ ಫಲಿತಾಂಶಕ್ಕಾಗಿ …
Read More »
Laxmi News 24×7