ಗೋಕಾಕ: ನಗರದ ಜನತೆ ಮತ್ತು ಭಕ್ತರಿಗಾಗಿ ಶ್ರೀ ಚೌಡೇಶ್ವರಿ ದೈವಿ ವನ ನಿರ್ಮಾಣ ಮಾಡಲಾಗುತ್ತಿದೆ. ಗೋಕಾಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ನಗರದ ಕಡಬಗಟ್ಟಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಸುಮಾರು ೧ಕೋಟಿ ರೂಗಳ ವೆಚ್ಚದಲ್ಲಿ ಅರಣ್ಯ ಇಲಾಖೆಯಿಂದ ಶುಕ್ರವಾರದಂದು ಚೌಡೇಶ್ವರಿ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಗೋಕಾಕ ನಗರ ಹಾಗೂ ತಾಲೂಕಿನ ಅಭಿವೃದ್ಧಿಗಾಗಿ ಅನೇಕ ಜನಪರ …
Read More »Daily Archives: ಏಪ್ರಿಲ್ 5, 2026
ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್
ಕಾರವಾರ:- ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ …
Read More »ಮುಂಡಗೋಡ ಬಿಎಸ್‌ಎನ್‌ಎಲ್ ಕಚೇರಿಗೆ ಕಳ್ಳರ ಕನ್ನ: ₹70 ಸಾವಿರ ಮೌಲ್ಯದ ತಾಮ್ರದ ಕೇಬಲ್ ಲೂಟಿ
ಮುಂಡಗೋಡ: ಮುಂಡಗೋಡ ಪಟ್ಟಣದ ಹೃದಯಭಾಗದಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿಯನ್ನು ಗುರಿಯಾಗಿಸಿಕೊಂಡ ಖದೀಮರು, ಬೆಲೆಬಾಳುವ ತಾಮ್ರದ ಕೇಬಲ್ ಕಳವು ಮಾಡಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮುಂಡಗೋಡದ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಬಿಎಸ್‌ಎನ್‌ಎಲ್ (BSNL) ಕಚೇರಿಯ ಆವರಣದಲ್ಲಿ ಈ ಕಳ್ಳತನ ನಡೆದಿದೆ. ಕಳೆದ ಮಾರ್ಚ್ 18ರ ರಾತ್ರಿ 8 ಗಂಟೆಯಿಂದ ಮಾರ್ಚ್ 19ರ ಮುಂಜಾನೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಚೇರಿಯ ದೂರವಾಣಿ ವಿನಿಮಯ ಕೇಂದ್ರದಿಂದ …
Read More »ಗೋಗಳ್ಳರ ಭಾರಿ ಹೈಡ್ರಾಮಾ; ಸಾರ್ವಜನಿಕರು ಹಾಗೂ ಪೊಲೀಸರಿಂದ ತಪ್ಪಿಸಿಕೊಳ್ಳಲು ಸರಣಿ ಎಸ್ಕೇಪ್
ಭಟ್ಕಳ: ತಾಲೂಕಿನ ತಲಗೇರಿಯ ವಿವೇಕಾನಂದ ನಗರದಲ್ಲಿ ಶನಿವಾರ ತಡರಾತ್ರಿ ಗೋಗಳ್ಳರ ಭಾರಿ ಹೈಡ್ರಾಮಾವೇ ನಡೆದಿದೆ. ಹಸು ಕದಿಯಲು ಬಂದಿದ್ದ ಖದೀಮರು ಗ್ರಾಮಸ್ಥರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 3:45 ರ ಹೊತ್ತಿಗೆ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗೋವನ್ನು ಕದ್ದೊಯ್ಯಲು ಯತ್ನಿಸುತ್ತಿದ್ದಾಗ ವಿವೇಕಾನಂದ ನಗರದ ಗ್ರಾಮಸ್ಥರು ಅವರನ್ನು ಸುತ್ತುವರೆದಿದ್ದಾರೆ. ಈ ವೇಳೆ ಸಿಕ್ಕಿಬೀಳುವ ಭಯದಿಂದ ಆರೋಪಿಗಳು …
Read More »ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು
ಬಾಗಲಕೋಟೆ: ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ನೀವು ಬಾಗಲಕೋಟೆಗೆ ಬಂದು ಐದು ದಿನ ಬಂದು ಪ್ರಚಾರ ಮಾಡುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ, ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ಕೊಟ್ಟಿದ್ದಾರೆ. ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಲು ಬಾಗಲಕೋಟೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಎರಡೂ ಚುನಾವಣಾ ಫಲಿತಾಂಶಕ್ಕಾಗಿ …
Read More »RCB vs CSK ಐಪಿಎಲ್ ಟಿಕೆಟ್ ನೀಡುವುದಾಗಿ ವಂಚನೆ – 1.46 ಲಕ್ಷ ಕಳೆದುಕೊಂಡ ಟೆಕ್ಕಿ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್ ಪಡೆಯಲು ಹೋಗಿ ವಂಚನೆಗೊಳಗಾಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ. ಟೆಕ್ಕಿ ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ಅನ್ನು ನೋಡಿದ್ದಾರೆ. ಆ ಪೋಸ್ಟ್ ನೋಡಿ ಆಮಿಷಕ್ಕೆ ಒಳಗಾದ ಅವರು, ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್‌ಗಳು, ಊಟದ ಕೂಪನ್‌ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ …
Read More »ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು
ತುಮಕೂರು: ಇಲ್ಲಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ (PSI) ಮಂಗಳಮ್ಮ ಕಾಣೆಯಾಗಿದ್ದಾರೆ. ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಮಗಳು, ಪತ್ತೆಯಾಗದಿದ್ದಾಗ ಹೊಸ ಬಡಾವಣೆ ಠಾಣೆಗೆ ತೆರಳಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಏ.3 ರಂದು ಡಿವೈಎಸ್‌ಪಿ ಕಚೇರಿಯಲ್ಲಿ ಸಭೆಗೆ ಮಂಗಳಮ್ಮ ಬಂದಿದ್ದರು. ಈ ವೇಳೆ ಮನೆಯಿಂದ ಕರೆ ಬಂದಿತ್ತು. ಬಳಿಕ ಅಲ್ಲಿಂದ ಠಾಣೆಗೆ ತೆರಳಿ, ಸಮವಸ್ತ್ರ ಬದಲಿಸಿ, ಸಿವಿಲ್ ಡ್ರೆಸ್‌ನಲ್ಲಿ ಹೊರಗೆ ತೆರಲಿದ್ದರು. ನಿನ್ನೆ (ಏ.3) ಯಾರ ಸಂಪರ್ಕಕ್ಕೂ …
Read More »ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ
ರಾಮನಗರ: ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಮಟೆ ಚಳುವಳಿ ನಡೆಸಿದ್ದಾರೆ. ಗ್ಯಾಸ್ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳು ಉಪಚುನಾವಣೆಯಲ್ಲಿ ಮುಳುಗಿವೆ. ಆಟೋ ಚಾಲಕರು, ಹೋಟೆಲ್ ಮಾಲೀಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ನಿತ್ಯ ಬಂಕ್ ಮುಂದೆ ಆಟೋ …
Read More »ಗ್ಯಾಸ್ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ (LPG), ಆಟೋ ಗ್ಯಾಸ್ ಸಮಸ್ಯೆಯಾಗಿದ್ದು, ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಆಟೋ ಚಾಲಕರಿಗೆ ತೊಂದರೆ ಆಗುತ್ತಿದೆ. ಹೋಟೆಲ್‌ನವರಿಗೆ ತೊಂದರೆಯಾಗಿದೆ. ಮನೆಯಲ್ಲಿ ಹೇಗೋ ಸ್ಟೌವ್‌ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್‌ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಗ್ಯಾಸ್ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು. …
Read More »50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ, ಡಿವೈಎಸ್‌ಪಿ ಕಲಾವತಿ ನೇತ್ರತ್ವದಲ್ಲಿ ಇನ್ಸ್‌ಪೆಕ್ಟರ್ ಗುರುಬಸವರಾಜ್ ಪ್ರಭು …
Read More »
Laxmi News 24×7