Breaking News

Daily Archives: ಏಪ್ರಿಲ್ 8, 2026

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ  ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. …

Read More »

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

ದಿಸ್ಪುರ್: ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ. ಇನ್ನು, ಅಸ್ಸಾಂ ಸಿಎಂ ಹಿಮಂತ್ …

Read More »

ನರ್ಸ್​​​​ ಆಗುತ್ತಿದ್ದಂತೆಯೇ ಬದಲಾಯ್ತು ಲೈಫ್ ಸ್ಟೈಲ್: ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನೇಟು, ಪತಿ ದುರಂತ ಸಾವು

ತುಮಕೂರು: ವಿಚ್ಛೇದನ ಬಯಸಿದ ಪತ್ನಿಗೆ ಪತಿ ಮಚ್ಚಿನೇಟು ಕೊಟ್ಟು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು  ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಟೆಯಲ್ಲಿ ನಡೆದಿದೆ. ದಂಪತಿ ನಡುವೆ ನಿನ್ನೆ (ಏಪ್ರಿಲ್ 06) ಗಲಾಟೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತಿಯ ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಪತಿ ಮಾರುತಿ, ಇಂದು (ಏಪ್ರಿಲ್ 07) ಬೆಳಗ್ಗೆ ಕೊರಟಗೆರೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

Read More »

ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ  ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಇದಕ್ಕೆ ರಾಜ್ಯ ಸರ್ಕಾರ ಅಲ್ಲಗಳೆದಿದೆ. ಈ …

Read More »

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು  ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ  ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ …

Read More »

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1  ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. ಏಪ್ರಿಲ್‌ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಫಲಿತಾಂಶ  ಪ್ರಕಟವಾಗಬೇಕಿತ್ತು‌‌‌ ಕಾರಣವೇ ಇಲ್ಲದೇ ಬೋರ್ಡ್ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಿಸಲು ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ. ಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತ್ರ …

Read More »

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್  ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದು ಗ್ರಾಮದ ಜನರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ. ಆಂಬುಲೆನ್ಸ್ ಮೂಲಕ …

Read More »

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

ಧಾರವಾಡ: ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್‌ನ್ನು ಪೊಲೀಸರು ಬಂಧಿಸಿದ್ದಾರೆ. ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್‌ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ. ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್‌ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್‌ಗೆ …

Read More »

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

ಬೆಳಗಾವಿ: ಬಸನಗೌಡ ಪಾಟೀಲ್‌ ಯತ್ನಾಳ್‌ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ  ಬರುತ್ತಾರೆ ಎಂದು ಅಥಣಿಯಲ್ಲಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮರಳಿ ಬಿಜೆಪಿಗೆ (BJP) ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದು ಭವಿಷ್ಯ ನುಡಿದರು. …

Read More »

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ  ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ  ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಎರಡೂ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಇಂದು ಬಹಿರಂಗ ಪ್ರಚಾರ ಅಂತ್ಯಕ್ಕೂ ಮುನ್ನ ಕೊನೆಯ ದಿನದ ಕಸರತ್ತು ನಡೆಸಿದ್ರು. ನಾಳೆ ಸಂಜೆಯವರೆಗೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎರಡೂ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಭರ್ಜರಿ ಮತಯಾಚನೆ …

Read More »