Breaking News

Daily Archives: ಏಪ್ರಿಲ್ 11, 2026

ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ …

Read More »

ಡಾಕ್ಟರ್ ಪತಿಯನ್ನು ಹತ್ಯೆ ಮಾಡಿ ನಾಟಕ: ಪತ್ನಿ ಆ್ಯಂಡ್ ಲವರ್‌ನನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಪತಿಯನ್ನು ಹತ್ಯೆ ಮಾಡಿ, ಅಸಹಜ ಸಾವು ಎಂದು ಬಿಂಬಿಸಲು ಸಂಚು ರೂಪಿಸಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಅನಗೋಳದ ಬಾಬಲೇ ಗಲ್ಲಿಯ ನಿವಾಸಿಯಾಗಿದ್ದ 40 ವರ್ಷದ ಅವಿನಾಶ ಅಶೋಕ ಸುಪ್ಪನ್ನವರ ಹತ್ಯೆಗೀಡಾದ ವ್ಯಕ್ತಿ. ವೃತ್ತಿಯಲ್ಲಿ ಆಯುರ್ವೇದ ಥೆರಪಿಸ್ಟ್‌ ಆಗಿದ್ದ ಅವಿನಾಶ ಅವರು, ಕಳೆದ ಮಾರ್ಚ್ 5 ರಂದು ತಮ್ಮ’ಅಂಕುಶ ಆಯುರ್ವೇದಿಕ ಕೇರ್ ಸೆಂಟರ್‌ನ ಬೆಡ್ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರ ತಲೆಯ ಹಿಂಭಾಗಕ್ಕೆ …

Read More »

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಈ ಜನತಾ ದರ್ಶನ ಮಧ್ಯಾಹ್ನ 2 ಗಂಟೆಯವರೆಗೆ ನಿರಂತರವಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಸಮಸ್ಯೆಗಳು, ಅಹವಾಲುಗಳು ಮತ್ತು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಇ ಖಾತಾ, ಮಂದಿರ ನಿರ್ಮಾಣ, ಉದ್ಯೋಗ, ಪಿಂಚಣಿ, …

Read More »

ಪಕ್ಷದ ಬಲಕ್ಕಾಗಿ ಉಪಚುನಾವಣೆ ಗೆಲ್ಲುವುದು ಅನಿವಾರ್ಯ: ಸಚಿವ ಸತೀಶ್‌ ಜಾರಕಿಹೊಳಿ

ಬಾಗಲಕೋಟೆ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಉಮೇಶ ಮೇಟಿ ಗೆದ್ದೆ ಗೆಲ್ಲುತ್ತಾರೆ, ಅದರಲ್ಲಿ ಯಾವುದೇ ಸಂದೇಹ ಬೇಡ, ಆದರೆ ಎಷ್ಟು ಅಂತರದಿಂದ ಗೆಲ್ಲುತ್ತಾರೆಂದು ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲವೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕ್ಷೇತ್ರವನ್ನು ಮೊತ್ತೊಂದು ಕ್ಷೇತ್ರಕ್ಕೆ ಹೊಲಿಕೆ ಮಾಡಲು ಆಗುವುದಿಲ್ಲ. ಶಿಗ್ಗಾಂವಿ ಗೆದ್ದ ಹಾಗೆ ಬಾಗಲಕೋಟೆ ಗೆಲ್ಲುತ್ತೇವೆ ಎನ್ನುವುದು ತಪ್ಪು. ಬಾಗಲಕೋಟೆ ವಿಧಾನಸಭೆ …

Read More »

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ  ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ  ಮಾಡಿತ್ತು. ಇಂದು ಅಧಿಕೃತವಾಗಿ ಆದೇಶ ಮಾಡಿದೆ. ಈ ಮಿತಿ ಸಡಿಲ ಆದೇಶ 2026-27ನೇ ಸಾಲಿನ ದಾಖಲಾತಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಶಾಲೆಯ ಪ್ರಾರಂಭ ಜೂನ್ 1 ರಿಂದ ಅನ್ವಯವಾಗುವಂತೆ 60 ದಿನದ ಅವಧಿಗೆ ಮಗುವಿನ …

Read More »

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

ದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು ಹೈಕಮಾಂಡ್‌ಗೆ   ದೂರು ನೀಡಿದ್ದಾರೆ. ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಸುರ್ಜೇವಾಲಾ ಅವರು ದೂರು ದಾಖಲಿಸಿದ್ದು, ಮೂವರ ಮೇಲೆ ಕ್ರಮವಹಿಸುವಂತೆ ಉಲ್ಲೇಖಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ …

Read More »

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ  ಬಿಡುಗಡೆ ಮಾಡಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು …

Read More »

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಶುಕ್ರವಾರ (ಏ.10) ನಡೆದ ಲಿಖಿತ ಪರೀಕ್ಷೆ ಬಳಿಕ ಒಂದು ಗಂಟೆಯಲ್ಲೇ ಎಲ್ಲ ಓಎಂಆರ್ ಶೀಟ್‌ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ಎರಡು ಮತ್ತು ಧಾರವಾಡದ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಮುಗಿದ ಕ್ಷಣದಿಂದಲೇ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ …

Read More »

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

ಬೀದರ್: ಜಿಲ್ಲೆಯ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌  ಅವರು ಮಠಮಾನ್ಯಗಳು, ಧಾರ್ಮಿಕ, ಆಧ್ಯಾತ್ಮಿಕ ಪ್ರಸಾರ, ಪ್ರಚಾರದ ಜೊತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಮೂಡಿಸಲು ಶ್ರಮಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೆಹಕರ್ ವಿಶ್ವಶಾಂತಿ ಟ್ರಸ್ಟ್, ತಡೋಳ, ಹಾರಕೋಡ ಶ್ರೀ ಚನ್ನಬಸವೇಶ್ವರ ಸಂಸ್ಥಾನ, ದೇಗಲಮಾಡಿ ಬಸವಲಿಂಗ ಅವಧೂತ ಆಶ್ರಮ, ಹುಡುಗಿ ಹಿರೇಮಠ ಟ್ರಸ್ಟ್, ಬೆಲ್ದಾಳೆಯ ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸೇರಿದಂತೆ ಸುಮಾರು 28 ಮಠಗಳಿಗೆ ರಾಜ್ಯ …

Read More »

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

ಹೈದರಾಬಾದ್: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ ಮತ್ತು 16 ವರ್ಷದ ಪವಿತ್ರಾ 16 ಎಂದು ಗುರುತಿಸಲಾಗಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ವಿಡಿಯೋ ಮಾಡಲು ಹೋದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಹುಡುಗಿಯರು ಸುರಕ್ಷಿತವಾಗಿ ಪಾರಾಗಿದ್ದಾರೆ. ಆರಂಭದಲ್ಲಿ …

Read More »