ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಾವುಂಡ ಪಾಳ್ಯಂ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಪರ ಪ್ರಚಾರ ನಡೆಸಿದರು. ತೆಲಂಗಾಣದ ಜಲ ಸಂಪನ್ಮೂಲ ಸಚಿವರಾದ ಉತ್ತಮ್‌ಕುಮಾರ್ ರೆಡ್ಡಿ ಜೊತೆಗೂಡಿ, ಕಾವುಂಡ ಪಾಳ್ಯಂ ಕ್ಷೇತ್ರದ ಜಲ್ಲಿಕೊರೈ, ಸುಬ್ರಹ್ಮಣ್ಯ ಪಾಳ್ಯಂ, ವಾಲೆಟ್ ನಗರ, ಕೆಎನ್‌ಜಿ ಪುದುರ್ ಪ್ರದೇಶಗಳಲ್ಲಿ ಮತಯಾಚಿಸಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ …
Read More »Daily Archives: ಏಪ್ರಿಲ್ 15, 2026
ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಬೆಳಗಾವಿ: ಬೆಳಗಾವಿಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿನ ಸ್ಟೀಮ್ ಹೆಚ್ ತರಬೇತಿ ಮತ್ತು ಸಂಶೋಧನಾ ಪ್ರತಿಷ್ಠಾನದ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಸುಶಾಂತ ಲಕ್ಕಪ್ಪ ಬಂಡಿವಡ್ದರ ಹಾಗೂ ವಿಠ್ಠಲ ಮಲ್ಲಿಕಾರ್ಜುನ ಗದಗ ಎಂಬ ಇಬ್ಬರು ವಿದ್ಯಾರ್ಥಿಗಳು ಮಾರ್ಚ್ 11 ಮತ್ತು 12 ರಂದು ಬೆಂಗಳೂರಿನ ಗೀತಂ ವಿಶ್ವವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರಮಟ್ಟದ ಕೊಡವಿಯರ್ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿ ಅಂತರಾಷ್ಟ್ರೀಯ …
Read More »ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಯುವಕ ಸಾವು
ಬೆಳಗಾವಿ : ಕಟ್ಟಡಕ್ಕೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದ ಯುವಕನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ ಎಂಬ ಗಂಭೀರ ಆರೋಪಿಸಲಾಗಿದೆ. ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿ ಶಿವು ಕಮ್ಮಾರ (22) ಮೃತ ದುರ್ದೈವಿ. ಯುವಕ ಬ್ರಹ್ಮನಗರದಲ್ಲಿರುವ ಕಟ್ಟಡಕ್ಕೆ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಬಾಗದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಬಿದ್ದ ತಕ್ಷಣವೇ ಸ್ಥಳೀಯರು ಅವನನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಗೆ …
Read More »ಬೆಳಗಾವಿಯಲ್ಲಿ ಏಪ್ರಿಲ್ 16ರಂದು “ಸ್ಪಂದನ ಮೆಲೋಡೀಸ್” ಸಂಗೀತ ಸಂಭ್ರಮ
ಲಿಂಗಾಯತ ಮಹಿಳಾ ಸಮಾಜ, ಕನ್ನಡ ಭವನ ಬೆಳಗಾವಿ ಇವರ ಸಹಯೋಗದಲ್ಲಿ “ಸ್ಪಂದನ ಮೆಲೋಡೀಸ್” ವತಿಯಿಂದ ಏಪ್ರಿಲ್ 16ರಂದು “ಜಾನೆ ಕಹಾಂ ಗಯೇ ವೋ ದಿನ್” (ಕಪೂರ್ ಕುಟುಂಬದ ಹಾಡುಗಳು) ಎಂಬ ವೈವಿಧ್ಯಮಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಕನ್ನಡ ಭವನದಲ್ಲಿ ಸಂಜೆ 5.30ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಹಳೆಯ ಬಾಲಿವುಡ್‌ನ ಜನಪ್ರಿಯ ಹಾಡುಗಳ ಸವಿನೆನಪುಗಳನ್ನು ಸಂಗೀತಾಸಕ್ತರಿಗೆ ನೀಡಲಾಗುತ್ತದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಎಲ್ಇ ಸ್ಕೂಲ್ ಆಫ್ ಮ್ಯೂಸಿಕ್ ಕೋ-ಆರ್ಡಿನೇಟರ್ ಡಾ. ರಾಜೇಂದ್ರ …
Read More »ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಪ್ರಾಧ್ಯಾಪಕ ಮಂಜುನಾಥ್ ಹಳ್ಳೂರ್ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರ ದೃಷ್ಟಿಯಿಂದ ಮೂಡಿಬಂದ ಸಂವಿಧಾನದ ಆಶಯಗಳಾದ ಸಮಾನತೆ, ಭ್ರಾತೃತ್ವ, ಜಾತ್ಯತೀತತೆಯನ್ನು ಪಾಲಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯ, ಜಾತಿ ಮತ್ತು ಧರ್ಮದ ಆಚೆಗೆ ಕಾಣುವ ವ್ಯಕ್ತಿಗಳಲ್ಲಿ ಅಗ್ರಗಣ್ಯ ನಾಯಕರಾಗಿ ಮಹಾನ್ …
Read More »ವಿಶ್ವದಲ್ಲಿ ಭಾರತ ನಿಂತಿರುವುದಕ್ಕೆ ಸಂವಿಧಾನದ ಆಶಯಗಳೇ ಕಾರಣ
ಬೆಳಗಾವಿ:ವಿಶ್ವದಲ್ಲಿ ಸದೃಢ ಪ್ರಜಾಪ್ರಭುತ್ವ ದೇಶವಾಗಿ ಭಾರತ ನಿಂತಿರುವುದಕ್ಕೆ ಸಂವಿಧಾನದ ಆಶಯಗಳೇ ಬಹುಮುಖ್ಯ ಕಾರಣ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಭಾರತೀಯನಿಗೆ ಸಾಮಾಜಿಕ ಸಮಾನತೆ ಸಿಗಬೇಕು. ಭ್ರಾತೃತ್ವ, ಸಹೋದರತ್ವದಿಂದ ಬಾಳಬೇಕು ಎಂಬ ವೈವಿದ್ಯಮಯ ಚಿಂತನೆಗಳಿಂದ ಕೂಡಿದ ಸಂವಿಧಾನವನ್ನು ಬಾಬಾ ಸಾಹೇಬ್‌ರು ನಮಗೆ ನೀಡಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ …
Read More »ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿಗೆ ಶ್ರೀ ಮಠದವರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ. ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ ಭೇಟಿ …
Read More »7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್, ಸುರ್ಜೇವಾಲಾ ಅವರ ಎದುರಲ್ಲೇ ಓಪನ್ ಆಗಿ ಹೇಳಿದ್ದೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದದ್ದು ನಿಜ, ಆ ನಂತರ ಎಲ್ಲವೂ ಸರಿಹೋಗಿದೆ. ಜಬ್ಬಾರ್ ಜೊತೆಗೆ 7 ಮುಸ್ಲಿಂ …
Read More »2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್
ಮಂಡ್ಯ: 2028ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ಹೊರತು ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಾಳೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಶ್ರೀಕ್ಷೇತ್ರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಸಿದ್ಧತೆ …
Read More »ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ
ಬೆಂಗಳೂರು: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಶಿಸ್ತು ಪಾಲಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ …
Read More »
Laxmi News 24×7