Breaking News

Daily Archives: ಏಪ್ರಿಲ್ 18, 2026

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರ  ನಡುವೆ ಕಿರಿಕ್ ಉಂಟಾಗಿ ಗೆಳೆಯನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು  ಹೊರವಲಯ ಸರ್ಜಾಪುರ  ಸಮೀಪದ ಮಟ್ಟನಹಳ್ಳಿ  ಕೆರೆ ಬಳಿ ನಡೆದಿದೆ. ಮೋಹನ್(25) ಕೊಲೆಯಾದ ಯುವಕ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದವನಾದ ಮೋಹನ್ ಗುರುವಾರ ಸಂಜೆ ಸ್ನೇಹಿತನ ಜೊತೆ ಎಣ್ಣೆ ಪಾರ್ಟಿ ಮಾಡಲು ಬಂದಿದ್ದ. ಸ್ನೇಹಿತ ಮನೋಜ್ ಮತ್ತು ಮೋಹನ್ ಕಂಠಪೂರ್ತಿ ಕುಡಿದಿದ್ದರು. ಕುಡಿದ ನಶೆಯಲ್ಲಿ ಮೋಹನ್ ಮತ್ತು ಮನೋಜ್ ನಡುವೆ ಗಲಾಟೆ ನಡೆದಿದೆ. ಈ ವೇಳೆ …

Read More »

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

ರಾಯಚೂರು: ಬಿಸಿಲನಾಡು ರಾಯಚೂರು  ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಲ್ಲೆ ಬಿಸಿಲಿನ ಅಬ್ಬರ ಬಲು ಜೋರಾಗಿದೆ. ಗರಿಷ್ಠ ತಾಪಮಾನ ಈಗಲೇ ದಾಖಲಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ರೈತರ ಬಹುತೇಕ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿದ್ದು, ಬಿಸಿಲಿನ ಅಬ್ಬರಕ್ಕೆ ಅನ್ನದಾತರು  ಹೈರಾಣಾಗಿದ್ದಾರೆ. ರಾಯಚೂರಿನ ಎಪಿಎಂಸಿಯಲ್ಲಿ ಸುಡುಬಿಸಿಲಿನಲ್ಲೇ ತಮ್ಮ ಉತ್ಪನ್ನಗಳ ಮಾರಾಟ ಮಾಡುತ್ತಿದ್ದಾರೆ. ರಾಯಚೂರು ಅಂದ್ರೆ ಬೇರೆ ಹೇಳಬೇಕಿಲ್ಲಾ ಇಲ್ಲಿ ಇರೋದೇ ಎರಡು ಕಾಲ. ಒಂದು ಬೇಸಿಗೆ ಕಾಲ, ಇನ್ನೊಂದು ಬಿರು ಬೇಸಿಗೆಕಾಲ. ಇಂತಹದ್ರಲ್ಲಿ ಈ …

Read More »

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

ಮೈಸೂರು: ಸ್ಥಳೀಯ ಸಂಸ್ಥೆ ಚುನಾವಣೆ  ಮಾಡಲು ರಾಜ್ಯ ಸರ್ಕಾರಕ್ಕೆ ಭಯವಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್  ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಮಹಾ ನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್  ಸೋಲುವುದು ಖಚಿತ. ಹೀಗಾಗಿ ಚುನಾವಣೆ ನಡೆಸುತ್ತಿಲ್ಲ. ಸಿಎಂ ಹಾಗೂ ಸಿಎಂ ಪುತ್ರ ಮಾತ್ರ ಅಧಿಕಾರದಲ್ಲಿ ಇದ್ದರೆ ಸಾಲದು. ಸ್ಥಳೀಯ ಮುಖಂಡರಿಗೂ ಅಧಿಕಾರ ಬೇಕು ಎಂದು ಕಿಡಿಕಾರಿದರು. ಜಿಟಿಡಿ ನಮ್ಮ ಪಕ್ಷದಲ್ಲಿ ಇಲ್ಲ. ಅವರ …

Read More »

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

ಬೆಂಗಳೂರು: ಸ್ವಂತ ಅಕ್ಕ-ಭಾವನಿಂದಲೇ ತಂಗಿ-ಮೈದುನನ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ ಆರೋಪ ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ  ನಡೆದಿದೆ. ಅಕ್ಕ ಪ್ರಫುಲ್ಲಾ ಎಂಬಾಕೆಯಿಂದ ತಂಗಿ ಪೃಥ್ವಿ ಎಂಬಾಕೆ 9.5 ಲಕ್ಷ ರೂ. ಸಾಲ ಪಡೆದಿದ್ದಳು. 5 ಲಕ್ಷ ಸಾಲ ಹಿಂತಿರುಗಿಸಿದ್ದು, ಇನ್ನು 4.5 ಲಕ್ಷ ರೂ. ಬಾಕಿ ನೀಡಬೇಕಿತ್ತು. ಈ ಸಾಲದ ಹಣಕ್ಕಾಗಿ ಅಕ್ಕನಿಂದ ತನ್ನ ತಂಗಿಯನ್ನ ಕಿಡ್ನ್ಯಾಪ್ ಜೊತೆಗೆ ಹಲ್ಲೆ ಆರೋಪ ಕೇಳಿಬಂದಿದೆ. ಕಳೆದ ಎರಡು ದಿನದ ಹಿಂದೆ ಅಕ್ಕ …

Read More »

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

ಧಾರವಾಡ: ನಾನು ಹತ್ತು ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡುವೆ ಎಂದು ಯೋಗೀಶ್ ಗೌಡ ಪತ್ನಿ  ಮಲ್ಲಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ  ಶಾಸಕ ವಿನಯ್ ಕುಲಕರ್ಣಿ  ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಈ ಹಿನ್ನೆಲೆ ಇದೇ ಮೊದಲ ಬಾರಿಗೆ ‘ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಪತ್ನಿ ಮಲ್ಲಮ್ಮ, ನನಗೆ ಇದು ಸಮಾಧಾನ ತಂದಿಲ್ಲ. ನನ್ನ …

Read More »

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿಗೆ  ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆ ಅವರ ಶಾಸಕ ಸ್ಥಾನ ರದ್ದಾಗಿದೆ. ಬುಧವಾರ ಶಾಸಕರು ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ಪ್ರಕಟಿಸಿದ್ದ ಕೋರ್ಟ್‌  ಇಂದು (ಶುಕ್ರವಾರ) ಶಿಕ್ಷೆಯ ಅವಧಿ ಪ್ರಕಟಿಸಿದೆ. ಶಿಕ್ಷೆಗೆ ಗುರಿಯಾದ ಹಿನ್ನೆಲೆ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 8(4) ರ ಪ್ರಕಾರ ತಕ್ಷಣದಿಂದಲೇ …

Read More »

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

ಬೆಂಗಳೂರು: ವಿಶೇಷ ಕಾರ್ಯಾಚರಣೆ ವೇಳೆ ಜಪ್ತಿ ಮಾಡಿದ್ದ ಭಾರೀ ಪ್ರಮಾಣದ ಡ್ರಗ್ಸ್‌ ಅನ್ನು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (NCB) ನಾಶಪಡಿಸಿದೆ. ಮಾದಕ ವಸ್ತುಗಳ ವಿರುದ್ಧ ಕೈಗೊಂಡಿದ್ದ ಕಾರ್ಯಾಚರಣೆ ವೇಳೆ ಎನ್‌ಸಿಬಿ 38 ಕೋಟಿ ಮೌಲ್ಯದ ಮಾದಕ ವಸ್ತುವನ್ನ ಜಪ್ತಿ ಮಾಡಿತ್ತು. ಇಂದು ಹೊಸಕೋಟೆ ಬಳಿಯ ಸೆಂಚುರಿ ರಿಫೈನರಿ ಘಟಕದಲ್ಲಿ 128 ಕೆ.ಜಿ. ಡ್ರಗ್ಸ್ ನಾಶ ಮಾಡಿದೆ. ಹೈಡ್ರೋಗಾಂಜಾ, ಕೊಕೇನ್, ಮೆಥಾಂಪೈಟಮನ್ ಸೇರಿದಂತೆ ಒಟ್ಟು ಸುಮಾರು 38 ಕೋಟಿ ಮೌಲ್ಯದ ಹಲವು …

Read More »

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರ  ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ  ಆದೇಶ ಹೊರಡಿಸಿದೆ. ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದೆ. 2024-25 ಆರ್ಥಿಕ ವರ್ಷದಲ್ಲಿ 34,084 ಕೋಟಿ ಕೆಇಆರ್‌ಸಿ ಆದಾಯ ನಿರೀಕ್ಷೆ ಮಾಡಿತ್ತು. ಆದ್ರೆ 32,019 ಕೋಟಿಯಷ್ಟೇ ಆದಾಯ ಬಂದಿದೆ. ಹೀಗಾಗಿ 2,068 ಕೋಟಿ ಹಣದ ಕೊರತೆಯನ್ನ ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ ಆದೇಶ ಮಾಡಿದೆ.  …

Read More »

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಮಹಿಳಾ ಮೀಸಲಾತಿ ಕಾಯ್ದೆಗೆ 131ನೇ ತಿದ್ದುಪಡಿ ತರುವ ಮೂಲಕ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಮತದಾನದ ಮೂಲಕ ಮಸೂದೆ ಅಂಗೀಕರಿಸಲು ನಿರ್ಧರಿಸಲಾಗಿತ್ತು. ಆದ್ರೆ 3ನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆ ಮಸೂದೆಗೆ ಸೋಲಾಗಿದೆ. ವಿಪಕ್ಷಗಳ ಹಠದಿಂದಾಗಿ ಮೊದಲು ಮಂಡಿಸಿದ ಮಹಿಳಾ ಮೀಸಲಾತಿ ಬಿಲ್ ಸೋಲು ಕಂಡಿದೆ. ಆದ್ದರಿಂದ ಉಳಿದ 2 ಬಿಲ್‌ಗಳನ್ನೂ …

Read More »

ಗಬ್ಬೆದ್ದು ನಾರುತ್ತಿದೆ ಗಂದಿಗವಾಡ ದಲಿತ ಕಾಲೋನಿ ರಸ್ತೆ: ಗ್ರಾ.ಪಂ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ‘ಸ್ವಚ್ಛ ಭಾರತ’ದ ಕನಸು ನುಚ್ಚುನೂರಾಗಿದೆ. ದಲಿತ ಕಾಲೋನಿಯ ಮುಖ್ಯ ರಸ್ತೆಯುದ್ದಕ್ಕೂ ಕಸದ ರಾಶಿ ಬಿದ್ದಿದ್ದು, ಸಾಂಕ್ರಾಮಿಕ ರೋಗಗಳ ಭೀತಿಯ ನಡುವೆಯೇ ಗ್ರಾಮಸ್ಥರು ಜೀವನ ಸಾಗಿಸುವಂತಾಗಿದೆ. ಗಂದಿಗವಾಡ ಗ್ರಾಮದ ದಲಿತ ಕಾಲೋನಿಗೆ ಸಂಪರ್ಕಿಸುವ ರಸ್ತೆಯು ಈಗ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ರಸ್ತೆಯಲ್ಲೇ ಕಸ ಎಸೆಯುತ್ತಿರುವುದರಿಂದ ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮಾತ್ರ ಇತ್ತ ತಲೆಹಾಕಿಯೂ …

Read More »