ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿದ್ದಾರೆ. ತಮ್ಮ ಪತಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂಬ ದೃಢವಾದ ಆತ್ಮವಿಶ್ವಾಸವಿದೆ ಎಂದ ಅವರು, ತೀರ್ಪನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಉನ್ನತ ನ್ಯಾಯಾಲಯದಲ್ಲಿ ಖಂಡಿತವಾಗಿಯೂ ನ್ಯಾಯ ಸಿಗಲಿದೆ ಎಂಬ ಅಚಲ ನಂಬಿಕೆ ವ್ಯಕ್ತಪಡಿಸಿದ ಅವರು, ಈ ಕಠಿಣ ಸಮಯದಲ್ಲಿ ವಿನಯ್ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಥವಾ …
Read More »Daily Archives: ಏಪ್ರಿಲ್ 19, 2026
2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ವಿರೋಧ
ಪ್ರಸ್ತಾವಿತ 2026ರ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯಗಳ ರಾಜಕೀಯ ಸಮತೋಲನಕ್ಕೆ ಧಕ್ಕೆಯುಂಟುಮಾಡುವ ಸಾಧ್ಯತೆ ಇದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಗಂಭೀರ ಆತಂಕ ವ್ಯಕ್ತಪಡಿಸಿದರು. ಸದನದಲ್ಲಿ ಮಾತನಾಡಿದ ಅವರು, ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ತತ್ವದಡಿ ಕ್ಷೇತ್ರ ಮರುಹಂಚಿಕೆ ಸಂವಿಧಾನಾತ್ಮಕವಾದದ್ದೇ ಆಗಿದ್ದರೂ, ಅದರ ಪರಿಣಾಮವಾಗಿ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದು ಎಚ್ಚರಿಸಿದರು. ಕುಟುಂಬ ಯೋಜನೆ, ಶಿಕ್ಷಣ ಹಾಗೂ …
Read More »ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ
ನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ ಭಯದಿಂದ ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿ ಮೋದಿ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್‌ಪಿ ಮತ್ತು ಇತರ ಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸಂಸತ್ತಿನಲ್ಲಿ ಮಸೂದೆ ಬಿದ್ದಾಗ ಕಾಂಗ್ರೆಸ್ ಸಂಭ್ರಮಿಸಿದ್ದನ್ನು ಉಲ್ಲೇಖಿಸಿದ ಮೋದಿ, ದೇಶದ …
Read More »543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು
ನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಎಸೆದಿದ್ದಾರೆ. ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಖರ್ಗೆ ಅವರು ದೀರ್ಘ ಪೋಸ್ಟ್ ಮಾಡಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ದೇಶವನ್ನು ಉದ್ದೇಶಿಸಿ ಮಾಡುವ ಅಧಿಕೃತ ಭಾಷಣವನ್ನು ಮೋದಿ ಅವರು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಸರ್ಕಾರವು …
Read More »ವಿದ್ಯುತ್ ದರ ಏರಿಕೆ ವಾಪಸ್ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್‌ವೈ ಆಗ್ರಹ
ಚಿಕ್ಕಮಗಳೂರು: ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಹುಚ್ಚಂಬಟ್ಟೆ ಏರಿಕೆ ಮಾಡಿದೆ. ಇದು ಸರಿಯಾದ ನಿರ್ಧಾರ ಅಲ್ಲ. ದರ ಹೀಗೆ ಏರಿಕೆಯಾದ್ರೆ ಸಾಮಾನ್ಯ ಜನ ಬದುಕೋದು ಹೇಗೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ಉದ್ಘಾಟನೆಗೆ ಅವರು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿ, ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಸರ್ಕಾರ ವಿದ್ಯುತ್ ದರ ಏರಿಸಿರುವ …
Read More »ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ. ಈ ವರ್ಷ ಕೆಆರ್‌ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗುವ ಮೂಲಕ ದಾಖಲೆ ಬರೆದಿತ್ತು. ಇದೀಗ 124.80 ಗರಿಷ್ಠ ಮಟ್ಟ ಸಂಗ್ರಹ …
Read More »ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಚಿಕ್ಕಮಗಳೂರು: ಎನ್‌ಆರ್ ಪುರದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆಯಾಗಿದ್ದು, ನೀರಿನಲ್ಲಿ ಮುಳುಗಿ ಸಾವನಪ್ಪಿದ ಶಂಕೆ ವ್ಯಕ್ತವಾಗಿದೆ. ಸಿದ್ದರಾಮಯ್ಯ ಸೇತುವೆ ಕೆಳಭಾಗದ ಭದ್ರಾ ನದಿಯ ಹಿನ್ನೀರಿನಲ್ಲಿ ಎನ್.ಆರ್.ಪುರದ ಸಿಗುವಾನಿ ಗ್ರಾಮದ ಮೂವರು ಯುವಕರು ಈಜಲು ತೆರಳಿದ್ದರು. ಇಬ್ಬರು ಮೇಲೆ ಬಂದರೂ ಮತ್ತೋರ್ವ ಮಾತ್ರ ನಾಪತ್ತೆಯಾಗಿದ್ದು, ಆತನ ಸುಳಿವು ಸಿಕ್ಕಿಲ್ಲ. ಆತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡಗಳು ಶವಕ್ಕಾಗಿ ಹುಡುಕಾಟ ನಡೆಸುತ್ತಿವೆ. ಅಗ್ನಿಶಾಮಕದಳದ …
Read More »ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
ಧಾರವಾಡ: ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ. ಮೈನುದ್ದಿನ್ ನದಾಫ್, ಸಾಗರ ಕಲಾಲ್ ಮತ್ತು ಅಲಾವುದ್ದೀನ್ ಉರ್ಫ್ ರಹೀಂ ಬಂಧಿತ ಆರೋಪಿಗಳು. ಈ ಮೂಲಕ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಈ ಮೊದಲು 9 ಮಂದಿಯನ್ನು ಬಂಧಿಸಿದ್ದೆವು. ಈಗ ಮತ್ತೆ ಮೂವರನ್ನು ಬಂಧನ …
Read More »ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು
ಬೆಂಗಳೂರು: ಜನಗಣತಿಗೆ ಗೈರಾದ್ರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಬಿಎ ಖಡಕ್ ಎಚ್ಚರಿಕೆ ನೀಡಿದೆ. ಗೈರುಹಾಜರಾತಿಗೆ ಜಿಬಿಎಯಿಂದ 1,000 ರೂ ದಂಡ ಜೊತೆಗೆ 3 ವರ್ಷ ಕಾರಾಗೃಹ ಶಿಕ್ಷೆ ಎಂದು ಎಚ್ಚರಿಸಿದೆ. ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಧಿಕಾರಿಗಳಿಗೆ ಆಯುಕ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಗಣತಿಗೆ ನಿಯೋಜಿಸಲ್ಪಟ್ಟಿರುವ ಗಣತಿ ಬ್ಲಾಕ್ ಹಾಗೂ ಸೂಪರ್ವೈಸರ್ ಸರ್ಕಲ್ ಗಳಲ್ಲಿ ಕರ್ತವ್ಯಕ್ಕೆ ಹಾಜರಾಗದ ಗಣತಿದಾರರು ಮತ್ತು ಸೂಪರ್ವೈಸರ್ಗಳ ವಿರುದ್ಧ ಜನಗಣತಿ ಕಾಯ್ದೆಯ 1948ರ ಸೆಕ್ಷನ್ …
Read More »
Laxmi News 24×7