Breaking News

Daily Archives: ಏಪ್ರಿಲ್ 21, 2026

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ, ಅರಸೀಕೆರೆ  ತಾಲೂಕಿನ, ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಪ್ರತೀಕ್ ಮೂಲತಃ ದುದ್ದ ಹೋಬಳಿ, ಸೋಮನಹಳ್ಳಿ ಗ್ರಾಮದವನು. ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ ಬಂದಿದ್ದ. ಮಾವ-ಅಳಿಯ ಇಬ್ಬರೂ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಪ್ರತೀಕ್ ಕೆರೆಗೆ ಬಿದ್ದಿದ್ದಾನೆ. ಪ್ರತೀಕ್‌ನನ್ನು ರಕ್ಷಿಸಿಲು ಮಾವ ಪ್ರಭಾಕರ್ …

Read More »

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

ಬೆಳಗಾವಿ: ವರದಕ್ಷಿಣೆ  ಕಿರುಕುಳಕ್ಕೆ ಬೇಸತ್ತು ಗೃಹಿಣಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು …

Read More »

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

ಬೀದರ್: ತರಕಾರಿ ತರಲು ಹೋಗಿ ಯುವಕ ಸಾವನ್ನಪ್ಪಿದ್ದು, ಬಿಸಿಲಿನ ಝಳಕ್ಕೆ ಮಗ ಬಲಿಯಾಗಿದ್ದಾನೆಂದು ತಂದೆ ಗೋಳಾಡಿದ್ದಾರೆ. ಈ ಘಟನೆ ಬೀದರ್ ( ಜಿಲ್ಲೆಯ ಕಮಲನಗರ ಪಟ್ಟಣದ ಡಿಗ್ಗಿ ರೋಡ್ ಬಳಿ ನಡೆದಿದೆ. ಯುಪಿ ಮೂಲದ ಮೊಹ್ಮದ್ ಸಮೀರ್ ಅಹ್ಮದ್ (20) ಸಾವನ್ನಪ್ಪಿದ ದುರ್ದೈವಿ ಯುವಕ. ಗರಿಷ್ಠ ತಾಪಮಾನ ಸಹಿಸಲಾರದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ದಿನ ಯುವಕ ತರಕಾರಿ ತರಲು ಹೋಗಿದ್ದ. ಬಳಿಕ ಮನೆಗೆ ವಾಪಸ್ಸಾಗುವಾಗ ತಲೆ ತಿರುಗಿದಂತಾಗಿದ್ದು, ಕೂಡಲೇ …

Read More »

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದರು.  ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ …

Read More »

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

ಬೆಂಗಳೂರು: ಕೃಷಿ ಇಲಾಖೆಯಲ್ಲಿ  ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ  ಅವರು ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಮತ್ತು ಇತರ ಮೂಲ ವೃಂದ ಸೇರಿ ಎಲ್ಲರಿಗೂ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ. …

Read More »

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ

ನವದೆಹಲಿ: ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರಿಗೆ ಕೇಂದ್ರ ಕಾರ್ಮಿಕ, ಎಂಎಸ್‌ಎಂಇ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ  ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಬೆಂಗಳೂರು ದೇಶದ ಪ್ರಮುಖ ಹಣಕಾಸು ಮತ್ತು ವಾಣಿಜ್ಯ ಕೇಂದ್ರವಾಗಿದೆ. ಡಿಆರ್‌ಟಿ ಅಡಿಯಲ್ಲಿ ಉದ್ಭವಿಸುವ ಕೇಸ್‌ಗಳು ಗಣನೀಯ ಪ್ರಮಾಣವನ್ನು ಹೊಂದಿದೆ. ಪ್ರಕರಣಗಳ ಹೆಚ್ಚುತ್ತಿರುವ ಬಾಕಿ ಸಂಖ್ಯೆ ಮತ್ತು ಅಪೀಲ್ ವೇದಿಕೆಯ ಅನಾನುಕೂಲತೆಯು ನಿರ್ಣಯ ಮತ್ತು …

Read More »

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು: 2026ರ ಸಿಇಟಿ ಪರೀಕ್ಷೆಗೆ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಸ್ತ್ರಸಂಹಿತೆ ಜಾರಿ ಮಾಡಿದೆ. ಏ.22 ಕನ್ನಡ ಸೇರಿದಂತೆ ಏ.23 ಮತ್ತು 24ರಂದು ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯಲು 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸದ್ಯ ಕೆಇಎ ಪರೀಕ್ಷೆಗೆ ವಸ್ತ್ರಸಂಹಿತೆ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ವಸ್ತ್ರಸಂಹಿತೆ ಪಾಲನೆಗೆ ಸೂಚನೆ …

Read More »

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಚಿಕ್ಕೋಡಿ :ಸದಲಗಾ ದತ್ತವಾಡ ರಸ್ತೆಯಿಂದ ಘೋಸರವಾಡ ಬ್ಯಾರೇಜವರೆಗೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಎಂಎಲ್ಸಿ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳ ಜೊತೆಗೆ ‌ಮಾತನಾಡಿದ ಅವರು ಸದಲಗಾ-ದತ್ತವಾಡ ರಸ್ತೆಯಿಂದ ಘೋಸರವಾಡ ಬ್ಯಾರೇಜವರೆಗೆ ರಸ್ತೆ ಅಭಿವೃದ್ಧಿ ಆಗಬೇಕೆಂದು ಇಲ್ಲಿನ ಜನರ ಬೇಡಿಕೆಯಾಗಿತ್ತು.ಅವರ ಬೇಡಿಕೆಯಂತೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇವತ್ತು ಚಾಲನೆ ನೀಡಲಾಗಿದೆ ಎಂದರು.ಸದಲಗಾ ಪಟ್ಟಣದ ‌ಶಿವಾಜಿ ವೃತ್ತದಿಂದ ಬಸವೇಶ್ವರ …

Read More »

ಮಜಗಾವದ ಆದಿನಾಥ ಜೈನ ಮಂದಿರದಲ್ಲಿ ಅಕ್ಷಯ ತೃತೀಯ ಸಡಗರ: ಭಗವಂತನಿಗೆ ಕಬ್ಬಿನ ಹಾಲಿನ ಅಭಿಷೇಕ

ಬೆಳಗಾವಿಯ ಮಜಗಾವ ಗ್ರಾಮದಲ್ಲಿ ಅಕ್ಷಯ ತೃತೀಯದ ನಿಮಿತ್ತ ಧಾರ್ಮಿಕ ಸಂಭ್ರಮ ಮನೆಮಾಡಿದೆ. ಮುನಿಗಳ ಮಾರ್ಗದರ್ಶನದಲ್ಲಿ ಭಗವಾನ್ ಆದಿನಾಥರಿಗೆ ವಿಶೇಷ ಕಬ್ಬಿನ ಹಾಲಿನ ಅಭಿಷೇಕ ಮಾಡುವ ಮೂಲಕ ಭಕ್ತರು ಭಕ್ತಿಭಾವದಿಂದ ಸಂಭ್ರಮಿಸಿದರು. ಬೆಳಗಾವಿ ಸಮೀಪದ ಮಜಗಾವ ಗ್ರಾಮದ ಭಗವಾನ್ ಶ್ರೀ 1008 ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ಅಕ್ಷಯ ತೃತೀಯ ಕಾರ್ಯಕ್ರಮವು ಅತ್ಯಂತ ಸಡಗರದಿಂದ ಜರುಗಿತು. ಪರಮ ಪೂಜ್ಯ 108 ಮಹಾನಸಾಗರ್ ಮುನಿಗಳ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ನಡೆದ ಈ ಉತ್ಸವದಲ್ಲಿ, …

Read More »

ಬೆಳಗಾವಿ ಶಿವಜಯಂತಿ ಮೆರುಗು: ಚವ್ಹಾಟ್ ಗಲ್ಲಿ ಮಂಡಳಿಯಿಂದ ಈ ಬಾರಿ ಅದ್ಭುತ ‘ಸಜೀವ ರೂಪಕ’ ಪ್ರದರ್ಶನ!

ಬೆಳಗಾವಿಯ ಶಿವಜಯಂತಿ ಅಂದ್ರೆ ಅಲ್ಲಿ ಸಜೀವ ರೂಪಕಗಳದ್ದೇ ಕಾರುಬಾರು. ಈ ಬಾರಿ ಚವ್ಹಾಟ್ ಗಲ್ಲಿಯ ಕ್ರಾಂತಿಸಿಂಹ ನಾನಾ ಪಾಟೀಲ್ ಚೌಕ್ ಮಂಡಳವು ಶಿವಭಕ್ತರ ಮನವಿಗೆ ಓಗೊಟ್ಟು, ತನ್ನ ಐತಿಹಾಸಿಕ ಸಜೀವ ರೂಪಕವನ್ನ ಒಂದೇ ಸ್ಥಳದಲ್ಲಿ ನಿಂತು ಪ್ರದರ್ಶಿಸಲು ನಿರ್ಧರಿಸಿದೆ. ಸುನಿಲ್ ಜಾಧವ್ ಅವರ ಮುಂದಾಳತ್ವದಲ್ಲಿ ಈ ಉಪಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕ್ರಾಂತಿಸಿಂಹ ನಾನಾ ಪಾಟೀಲ್ ಚೌಕ್ ಚವಾಟ ಗಲ್ಲಿಯ ಶಿವಜಯಂತಿ ಉತ್ಸವ ಮಂಡಳವು ಈ ಬಾರಿ ಶಿವಭಕ್ತರಿಗಾಗಿ ವಿಶೇಷ ಸೌಲಭ್ಯವನ್ನ …

Read More »