Breaking News

Daily Archives: ಏಪ್ರಿಲ್ 22, 2026

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

ಬೆಂಗಳೂರು: ನಗರದಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ದೋಷಿ ಎಂದು ಘೋಷಿಸಿ, 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಎನ್‌ಐಎ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದು (ಏ.21) ಮಧ್ಯಾಹ್ನಕ್ಕೆ ತೀರ್ಪು ಕಾಯ್ದಿರಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 7 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. …

Read More »

ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

ಬೆಳಗಾವಿ: ಹಿಟ್ ಸ್ಟ್ರೋಕ್‌ಗೆ  ರಾಜ್ಯದಲ್ಲಿ ಎರಡನೇಯ ಬಲಿಯಾಗಿದೆ. ಬಿಸಿಲಿನ ತಾಪಕ್ಕೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು …

Read More »

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

ಕೋಲ್ಕತ್ತಾ: ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆ ಏ.23 ರಂದು ನಿಗದಿಯಾಗಿದ್ದ ರಾಹುಲ್‌ ಗಾಂಧಿ  ಅವರ ಕೋಲ್ಕತ್ತಾ  ಭೇಟಿಯನ್ನ ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಚಾರ  ಕಾರ್ಯಕ್ಕಾಗಿ ರಾಹುಲ್‌ ಗಾಂಧಿ ಕೋಲ್ಕತ್ತಾಗೆ ಭೇಟಿ ನೀಡಬೇಕಿತ್ತು. ಆದ್ರೆ ಮಮತಾ ಬ್ಯಾನರ್ಜಿ  ಸರ್ಕಾರ ಉದ್ದೇಶಪೂರ್ವಕವಾಗಿ ಅನುಮತಿ ನಿರಾಕರಿಸಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ಮಮತಾ ಬ್ಯಾನರ್ಜಿ ಸರ್ಕಾರದ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ …

Read More »

ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಸವದತ್ತಿ : ತಾಲೂಕಿನ ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿ ದೇವಿ ಆಶೀರ್ವಾದ ಪಡೆದರು. ನಂತರ ಊರಿನ ಹಿರಿಯರು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.

Read More »