ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕೋರ್ಟ್ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ …
Read More »Daily Archives: ಏಪ್ರಿಲ್ 23, 2026
ವಿನಯ್ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ತಂಡದವರು ಭಾಗಿಯಾಗಿರುವ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಉಪನಿಷತ್ ಉಲ್ಲೇಖಮಾಡಿ ಕಾನೂನನ್ನು ‘ಧರ್ಮʼಕ್ಕೆ ಹೋಲಿಸಿದ್ದಾರೆ. ನ್ಯಾಯಾಧೀಶರು ನೀಡಿರುವ 623 ಪುಟಗಳ ಸುದೀರ್ಘ ಆದೇಶದಲ್ಲಿ ರಾಜಧರ್ಮ ಎಂದರೆ ಏನು ಎನ್ನುವುದನ್ನು ವಿವರಿಸಿದ್ದಾರೆ. ಕಾನೂನು ಧರ್ಮವಾಗಿಯೂ, ಧರ್ಮವನ್ನು ರಾಜನನ್ನಾಗಿಯೂ ಸಮಾಜ ಸ್ವೀಕರಿಸುತ್ತದೆ. ಒಬ್ಬ ರಾಜನಾದವನು ಅಶಕ್ತರನ್ನು ಬಲಾಢ್ಯರಿಂದ ರಕ್ಷಿಸಬೇಕು ಎಂಬ ಉಪನಿಷತ್ತಿನ ಸಾರವನ್ನು …
Read More »ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ
ಕೋಲಾರ: ತಾಲೂಕಿನ ಬೆಳಗಾನಹಳ್ಳಿ ಬಳಿ ಇರುವ ಕೋಲಾರ ಹಾಲು ಒಕ್ಕೂಟ ಕಚೇರಿ ಮೇಲೆ ದಿಢೀರ್ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಎಂಬವವರು ನೀಡಿರುವ ದೂರನ್ನು ಆಧರಿಸಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂವಿಕೆ ಗೋಲ್ಡನ್ ಡೈರಿ, ಸೋಲಾರ್ ಪ್ಲಾಂಟ್, ಐಸ್ ಕ್ರೀಂ ಘಟಕ, ಮೆಗಾ ಡೈರಿಗಳಲ್ಲಿ ಸಾಕಷ್ಟು ಅವ್ಯವಹಾರ ಸೇರಿದಂತೆ ಸೆ-2023ರಲ್ಲಿ ನಡೆದ ನೇಮಕಾತಿಯಲ್ಲೂ ಹಗರಣ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ …
Read More »ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ಉಲೇಮಾಗಳು ಕಿಡಿ
ಬೆಂಗಳೂರು: ದಾವಣಗೆರೆ ಉಪಚುನಾವಣೆ ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಉಲೇಮಾಗಳು ಕಿಡಿಕಾರುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಉಲೇಮಾಗಳು ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಉಳಿಸಿ, ಬೆಳೆಸಿಕೊಂಡು ಬಂದಿದ್ದೇವೆ. ಆದ್ರೆ ದಾವಣಗೆರೆ ಚುನಾವಣೆಯಲ್ಲಿ ನಮ್ಮ ನಾಯಕರನ್ನು ಮೂಲೆಗೆ ಸೇರಿಸುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು 3 ವರ್ಷವಾಗಿದೆ. ಹಿಜಾಬ್ ಸಮಸ್ಯೆ, …
Read More »ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ
ಕಾರವಾರ: ಹುಬ್ಬಳ್ಳಿ – ಕಾರವಾರ ರಾಷ್ಟ್ರೀಯ ಹೆದ್ದಾರಿ 63ರ ದೇವಿಕೊಪ್ಪ ಗ್ರಾಮದ ಐ.ಬಿ ಕ್ರಾಸ್ ಬಳಿ ಎಲ್‌ಪಿಜಿ ಅನಿಲ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿದೆ. ಅನಿಲ ಸೋರಿಕೆಯಿಂದಾಗಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಘಟಗಿ -ಯಲ್ಲಾಪುರ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಪರ್ಯಾಯ ಮಾರ್ಗಗಳ ವಿವರ ಗ್ಯಾಸ್ …
Read More »ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ
ಕೊಪ್ಪಳ: ಕುಡಿಯುವ ನೀರಿಗಾಗಿ ಸಚಿವ ಶಿವರಾಜ ತಂಗಡಗಿಯವರ ಕಾರನ್ನು ಗ್ರಾಮಸ್ಥರು ಅಡ್ಡಗಟ್ಟಿ ಪ್ರತಿಭಟಿಸಿದ ಘಟನೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿ ಭೂಮಿ ಪೊಜೆ ನೇರವರಿಸಿ ಸಚಿವರು ತೆರುಳುತ್ತಿದ್ದರು. ಈ ವೇಳೆ ಸಂಕನಾಳ ಗ್ರಾಮದ ಮಹಿಳೆಯರು ಜಿಲ್ಲಾ ಉಸ್ತುವಾರಿ ವಾಹನ ಅಡ್ಡಗಟ್ಟಿ ಖಾಲಿ ಕೊಡ ಹಿಡಿದು ನೀರು ಕೊಡಿ ಎಂದು ಆಗ್ರಹಿಸಿದರು. ಈಗ್ರಾಮದಲ್ಲಿ ನೂರಕ್ಕು ಹೆಚ್ಚು ಮನೆಗಳಿವೆ. ಗ್ರಾಮೀಣ ಭಾಗದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ …
Read More »ಕಾಗವಾಡ ತಾಲೂಕಿನ ಲೂಕುರ್ ಗ್ರಾಮದಲ್ಲಿ ಬುಧವಾರ ರಾತ್ರಿ ವಿಪರೀತ ಮಳೆ
ಭಾರತ ದೇಶ ಸ್ವೌತಂತ್ರ ವಾಗಿ 73 ವರ್ಷ ಕಳೆದರೂ ಈವರಿಗೆ ಇಂತಹ ವಿಪರೀತ ಆಲೆಕಲು ಮಳೆ ಯಾರು ಕಂಡೆ ಇಲ್ಲ ಆದರೆ ಬುಧವಾರ ರಾತ್ರಿ ಸುಮಾರು ಒಂದು ಗಂಟೆ ಕಾಲ ಉರುಳಿದ ಆಲೆಕಲ್ ಮಳೆಇಂದ ಸುಮಾರು ಕಬ್ಬಿನ ಗದ್ದೆಯಲ್ಲಿ ಒಂದು ಅಡಿ ಆಲಿಕಲಿನ ತುಂಬಿದ್ದು ಇದನ್ನು ವೀಕ್ಷಿಸಲು ಅನೇಕ ರೈತರು, ಬೆಳಗ್ಗೆಯಿಂದ ಕಂಡು ತಂಡೊಪತಂಡವಾಗಿ ಆಗಮಿಸಿ ಇಂತಹ ವಿಪರೀತ ಮಳೆ ಬಗ್ಗೆ ಚರ್ಚಿಸುತ್ತಿದ್ದಾರೆ. ಕಾಗವಾಡ ತಾಲೂಕಿನ ಲೋಕುರ್ ಗ್ರಾಮದ ಈಶ್ವರ್ …
Read More »
Laxmi News 24×7