ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್‌ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರುತ್ತಾರೆ ಎಂದು ಅಥಣಿಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಮರಳಿ ಬಿಜೆಪಿಗೆ (BJP) ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದು ಭವಿಷ್ಯ ನುಡಿದರು. …
Read More »Monthly Archives: ಏಪ್ರಿಲ್ 2026
ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ
ದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಎರಡೂ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಇಂದು ಬಹಿರಂಗ ಪ್ರಚಾರ ಅಂತ್ಯಕ್ಕೂ ಮುನ್ನ ಕೊನೆಯ ದಿನದ ಕಸರತ್ತು ನಡೆಸಿದ್ರು. ನಾಳೆ ಸಂಜೆಯವರೆಗೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎರಡೂ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಭರ್ಜರಿ ಮತಯಾಚನೆ …
Read More »ವಿಜಯಪುರ ನಗರದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’*
ವಿಜಯಪುರ…ವಿಜಯಪುರ ನಗರದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’* : ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಗರದ ದರ್ಬಾರ್ ಮೈದಾನದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’ ನಡೆಯಲಿದೆ ಎಂದು ಪುಸ್ತಕ ಮೇಳದ ಆಯೋಜಕ, ಪ್ರಗತಿಪರ ಚಿಂತಕ ಬಸವರಾಜ ಸೂಳಿಬಾವಿ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, …
Read More »ಸಿಪಿಐ ಸಂತೋಷ ಸತ್ಯನಾಯಕ ಅವರಿಗೆ ಮುಖ್ಯಮಂತ್ರಿ ಪದಕದ ಗರಿ; ಕರವೇಯಿಂದ ಸತ್ಕಾರ
1. ಮಾರ್ಕೆಟ್ ಸಿಪಿಐಗೆ ಸಿಎಂ ಪದಕದ ಗೌರವ. 2. ಸತ್ಯನಾಯಕ ಸೇವೆಯನ್ನು ಶ್ಲಾಘಿಸಿದ ರಕ್ಷಣಾ ವೇದಿಕೆ. 3. ಬೆಳಗಾವಿಯಲ್ಲಿ ಸಿಪಿಐಗೆ ಅದ್ಧೂರಿ ಸನ್ಮಾನ ಕಾರ್ಯಕ್ರಮ. 4. ಸಾರ್ವಜನಿಕರ ಸೇವೆಯೇ ಪರಮಧರ್ಮ ಎಂದ ಅಧಿಕಾರಿ. ತಮ್ಮ ದಕ್ಷ ಆಡಳಿತ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಮಾರ್ಕೆಟ್ ಪೊಲೀಸ್ ಠಾಣೆಯ ಸಿಪಿಐ ಸಂತೋಷ ಸತ್ಯನಾಯಕ ಅವರಿಗೆ ಈಗ ಅತ್ಯುನ್ನತ ರಾಜ್ಯಮಟ್ಟದ ಗೌರವ ಲಭಿಸಿದೆ. ಈ ಹಿನ್ನೆಲೆ ಕರ್ನಾಟಕ ರಕ್ಷಣಾ …
Read More »ಪುಟ್ಟ ಹೆಜ್ಜೆಗಳಿಗೆ ಭದ್ರ ಬುನಾದಿ: ಕಂಟೋನ್ಮೆಂಟ್ ಬೋರ್ಡ್ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ
1. ಫೇಸ್‌ಬುಕ್ ಫ್ರೆಂಡ್ಸ್ ತಂಡದಿಂದ ಸಮಾಜಮುಖಿ ಕಾರ್ಯ 2. 1ನೇ ತರಗತಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ 3. ಶಿಕ್ಷಣಕ್ಕೆ ಆಸರೆಯಾದ ಜಿತೇಂದ್ರ ಲೋಹರ್, ವಿಕ್ಟರ್ ಫ್ರಾನ್ಸಿಸ್ 4. ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಗಣ್ಯರ ಸಾಥ್ ಶಿಕ್ಷಣವೇ ಶಕ್ತಿ ಎಂಬ ತತ್ವದಡಿ ಬೆಳಗಾವಿಯ ಫೇಸ್‌ಬುಕ್ ಫ್ರೆಂಡ್ಸ್ ತಂಡ ಇಂದು ಅರ್ಥಪೂರ್ಣ ಕಾರ್ಯವೊಂದನ್ನು ಕೈಗೊಂಡಿದೆ. ಕಂಟೋನ್ಮೆಂಟ್ ಬೋರ್ಡ್ ಶಾಲೆಗಳಿಗೆ ಹೊಸದಾಗಿ ದಾಖಲಾದ ಪುಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಗೆ ಬೆಂಬಲ …
Read More »ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತನನ್ನು ಅಶೋಕ ವಡ್ಡರ (27) ಎಂದು ಗುರುತಿಸಲಾಗಿದ್ದು, ಆಟೋ ನಂಬರ್ ಹಾಕುವ ವಿಚಾರಕ್ಕೆ ಉಂಟಾದ ಗಲಾಟೆಯೇ ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಾದ ಶಿವಾ ವಡ್ಡರ್, ಸಾಗರ ವಡ್ಡರ್ ಹಾಗೂ ವಿನೋದ ವಡ್ಡರ್ ಅವರು ಅಶೋಕನ ತಲೆಗೆ ಬಲವಾಗಿ ಹೊಡೆದು ಕೊಲೆ ನಡೆಸಿದ್ದಾರೆ. ಬಳಿಕ ಘಟನೆ ಮರೆಮಾಚಲು …
Read More »ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು.
ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು. ಬಾಗಲಕೋಟೆ: ಉಪಚುನಾವಣೆಯ ಅಂತಿಮ ಹಂತದ ಪ್ರಚಾರ ಜೋರಾಗಿದ್ದು, ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು. ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸಂಚರಿಸಿದ ಸಚಿವರು, ಪಕ್ಷದ ಅಭ್ಯರ್ಥಿಗೆ ಭಾರೀ ಬಹುಮತದೊಂದಿಗೆ ಗೆಲುವು ತಂದುಕೊಡಲು ಮತದಾರರನ್ನು ಮನವಿ ಮಾಡಿದರು. ಅಭಿವೃದ್ಧಿ ಕಾರ್ಯಗಳು, ಸರ್ಕಾರದ ಜನಪರ ಯೋಜನೆಗಳು ಹಾಗೂ ಮುಂದಿನ …
Read More »ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು
ಬೆಳಗಾವಿ: ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ. ಮಧುರಾ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ …
Read More »ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್
ಮೈಸೂರು: ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಸಿಎಂ ಬದಲಾವಣೆ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. 2013ರಲ್ಲಿ …
Read More »ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ದಾವಣಗೆರೆ: ಸಿದ್ದರಾಮಯ್ಯ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Byelection) ಪ್ರಚಾರ ಮುಗಿಸಿ ಬೆಂಗಳೂರಿಗೆ ಹೋದ್ರೆ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದರು. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಸೋಲುವ ಭೀತಿ ಕಾಡುತ್ತಿದೆ. ಹಿಂದೂಗಳ ಮತಕ್ಕೆ 7000 ರೂ., ಮುಸ್ಲಿಮರ ಮತಕ್ಕೆ 10,000 ರೂ. ದರ ನಿಗದಿ ಮಾಡಲಾಗಿದೆ …
Read More »
Laxmi News 24×7