ಚಿತ್ರದುರ್ಗ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ (D.Sudhakar) ಅವರ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ವಿರುದ್ಧ ಸುಹಾಸ್ ಸುಧಾಕರ್ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ, ಹೆಬ್ಬೆಟ್ಟು ಬಳಕೆ ಬಗ್ಗೆ ಹೆಚ್‌ಡಿಕೆ ಹೇಳಿಕೆಯಿಂದ ನೋವಾಗಿದೆ. ನಮ್ಮ ತಂದೆಯ ಅನಾರೋಗ್ಯ ವಿಚಾರ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡಿದ್ದು ತುಂಬಾ ನೋವಾಗಿದೆ ಎಂದು ಹೇಳಿಕೊಂಡಿದ್ದಾರೆ. ನಮ್ಮ ತಂದೆ ಈಗ …
Read More »Monthly Archives: ಏಪ್ರಿಲ್ 2026
ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್ ವಾಗ್ದಾಳಿ
ಬೆಂಗಳೂರು: ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಂಡಿ ಮುಚ್ಚಲು ಕೋಟಿ ಕೋಟಿ ಹಣ ಖರ್ಚು ಮಾಡಿದ ವಿಚಾರವಾಗಿ ʻಪಬ್ಲಿಕ್ ಟಿವಿʼ ಸುದ್ದಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗುಂಡಿ ಮುಚ್ಚಿದ ಹಣ ಗುಂಡಿಗೆ ಹೋಗಿದೆ. ಗುಂಡಿ ಮುಚ್ಚೋಕೆ ಎಲ್ಲಾದ್ರೂ ಒಂದು ಲಕ್ಷ ಖರ್ಚಾಗುತ್ತದೆಯಾ? ಬೆಂಗಳೂರು ಜನ ಶಾಪ ಹಾಕುತ್ತಿದ್ದಾರೆ. ಎಲ್ಲಾ ಬೆಲೆ ಜಾಸ್ತಿ ಮಾಡಿದ್ದಾರೆ. ಗುಂಡಿ …
Read More »SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ
ಬೆಂಗಳೂರು: SSLC ಪರೀಕ್ಷೆ 1 ರಲ್ಲಿ ಫೇಲ್ ಆಗಿರೋ ವಿದ್ಯಾರ್ಥಿಗಳು ಪರೀಕ್ಷೆ 2ನ್ನು ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ. ಪರೀಕ್ಷೆ 2ನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶುಲ್ಕ ಸರ್ಕಾರವೇ ಭರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದಲ್ಲದೆ ವಿಷಯವಾರು ವಿದ್ಯಾರ್ಥಿಗಳು ಫೇಲ್ ಆಗಿರೋ ಅಂಕಿಅಂಶಗಳನ್ನು ಸಚಿವರು ಪ್ರಕಟ ಮಾಡಿದ್ದಾರೆ. ಪರೀಕ್ಷೆ 1 ರಲ್ಲಿ 45,415 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. 1 ವಿಷಯದಲ್ಲಿ 20,691 ವಿದ್ಯಾರ್ಥಿಗಳು, 2 ವಿಷಯದಲ್ಲಿ …
Read More »ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು
ಧಾರವಾಡ: ಮರ್ಯಾದೆಗೆ ಅಂಜಿ ಮನನೊಂದು ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ಆದಿತ್ಯ ಮಗ್ಯಾಗೇರಿ ಎಂದು ಗುರುತಿಸಲಾಗಿದ್ದು, ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಶನಿವಾರದಂದು ಗಾಂಜಾ ಸೇವನೆ ಸಂಶಯದಲ್ಲಿ ಆದಿತ್ಯ ಹಾಗೂ ಇತರೆ 40ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದರೆ, ಪೊಲೀಸರು …
Read More »ಜಮೀರ್ ದರ್ಗಾವಾಲೆ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಐವರು ಬಂಧನ; ಮೀಟರ್ ಬಡ್ಡಿ ದಂಧೆಯೇ ಹತ್ಯೆಗೆ ಕಾರಣ?
ಮುಂಡಗೋಡ ಪಟ್ಟಣದಲ್ಲಿ ನಡೆದ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದು, ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಬಂಧಿತರಿಂದ ಎರಡು ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.ಬಂಧಿತರನ್ನು ಮಂಜುನಾಥ ನಾಗೇಂದ್ರ ಕಾಜಗಾರ (35), ಶ್ರೀಕಾಂತ್ ಕಿರಣ್ಣನವರ್ (22), ಮಲ್ಲಿಕಾರ್ಜುನ ಬಡಶೆಟ್ಟಿ (22), ಮಂಜುನಾಥ ವಿಷ್ಣು ಬೆಳಗಾಂವ (20) ಹಾಗೂ …
Read More »ಪತ್ನಿಯನ್ನು ಹತ್ಯೆ ಮಾಡಿ ಮರದ ಬಾಕ್ಸ್‌ಗೆ ಶವ ತುಂಬಿ ಸಿಮೆಂಟ್‌ನಲ್ಲಿ ಸೀಲ್ ಮಾಡಿದ ಪತಿ , ಪೊಲೀಸರ ಮುಂದೆ ಹೈಡ್ರಾಮಾ
ಗುಜರಾತ್: ಪತ್ನಿ ಯನ್ನು ಕ್ರೂರವಾಗಿ ಕೊಂದು ಕಟ್ಟಿಗೆಯ ಬಾಕ್ಸ್ ನಲ್ಲಿ ತುಂಬಿ ಅದನ್ನು ಸಂಪೂರ್ಣವಾಗಿ ಸಿಮೆಂಟ್ ನಿಂದ ಪ್ಯಾಕ್ ಮಾಡಿ ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ ಪತಿಯ ಖತರ್ನಾಕ್ ಕೃತ್ಯ ಪೊಲೀಸರು ಬಯಲು ಮಾಡಿದ್ದಾರೆ. ಈ ಘಟನೆ ಗುಜರಾತ್ ನಲ್ಲಿ ನಡೆದಿದ್ದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಮರದ ಬಾಕ್ಸ್‌ಗೆ ಶವ ತುಂಬಿ ಸಿಮೆಂಟ್‌ನಲ್ಲಿ ಸೀಲ್ ಮಾಡಿ, ನಂತರ ಠಾಣೆಗೆ ತೆರಳಿ ನಾಪತ್ತೆ ನಾಟಕವಾಡಿದ್ದಾನೆ , ಪೊಲೀಸರಿಗೆ ಅದೇಕೋ ಆತನ …
Read More »ಸಿದ್ದರಾಮಯ್ಯ 15 ದಿನಗಳ ನಂತರ ಸಿಎಂ ಆಗಿ ಇರಲ್ಲ: ಸಂಸದ ಗೋವಿಂದ ಕಾರಜೋಳ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಈ ನಡುವೆ, ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು, ಇಂದು ಬೆಂಗಳೂರಿನಲ್ಲಿ ಮಾತನಾಡಿ “15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ” …
Read More »ಸಹೋದರಿ ಸಾವಿನ ಸರ್ಟಿಫಿಕೇಟ್ ಕೇಳಿದ ಬ್ಯಾಂಕ್ ಸಿಬ್ಬಂದಿ ; ಅಸ್ಥಿಪಂಜರದ ಜೊತೆ ಬಂದ ಸಹೋದರ
ತನ್ನ ಮೃತ ಸಹೋದರಿಯ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಹಿಂಪಡೆಯಲು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ಆಕೆಯ ಅಸ್ಥಿಪಂಜರವನ್ನು ಬ್ಯಾಂಕಿಗೆ ತಂದಿರುವ ವಿಚಿತ್ರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಪಟಾನಾ ಬ್ಲಾಕ್‌ನಲ್ಲಿರುವ ಒಡಿಶಾ ಗ್ರಾಮೀಣ ಬ್ಯಾಂಕಿನ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ. ಆ ವ್ಯಕ್ತಿಯನ್ನು ಡಯಾನಾಲಿ ಗ್ರಾಮದ ಜೀತು ಮುಂಡಾ (50) ಎಂದು ಗುರುತಿಸಲಾಗಿದೆ. ಈತ ಜನವರಿ 26, 2026 ರಂದು ಮೃತಪಟ್ಟಿದ್ದ ತನ್ನ ಸಹೋದರಿ ಕಲ್ರಾ ಮುಂಡಾ (56) ಅವರ ಬ್ಯಾಂಕ್ …
Read More »ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ
ಬೆಂಗಳೂರು: ಮೇ 15ರ ಒಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ ಅಂತ ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಆಗಲೇಬೇಕು. ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ವಿ. ಅವರು ನಮಗೆ ಭರವಸೆ ನೀಡಿದ್ದಾರೆ. ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟು ಹೊಸಬರನ್ನು ಸೇರಿಸಬೇಕು. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಆಗಲೇಬೇಕು. ಮಂತ್ರಿ ಸ್ಥಾನ …
Read More »ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು
ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ. ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »
Laxmi News 24×7