Breaking News

Daily Archives: ಮೇ 2, 2026

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

ಮೈಸೂರು: ಟಿ ನರಸೀಪುರದ  ಕಾಂಗ್ರೆಸ್‌  ಮುಖಂಡ ಮದನ್‌ ರಾಜ್‌  ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. …

Read More »

ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ನಲ್ಲಿ  ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಲಹದಿಂದ ಹೆಚ್ಚು ಗೊಂದಲ ಉಂಟಾಗಿದೆ. ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಮಲ್ಲಿಕಾರ್ಜುನ ಖರ್ಗೆ ಕೂಡ ಸಿಎಂ ಆಗಲು ಪ್ರಯತ್ನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌  ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹದಿಂದಾಗಿ ಇಡೀ ಸರ್ಕಾರ ಗೊಂದಲದ ಗೂಡಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ. ಮುಂದೆ ನನ್ನ ಪರ್ವ …

Read More »

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು: ಇದು ಆಡಳಿತವಲ್ಲ, ಸಂಘಟಿತ ಲೂಟಿ ಎಂದು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆ ಮುಗಿದ ತಕ್ಷಣ ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 993 ರೂ.ಯಷ್ಟು ಹೆಚ್ಚಿಸಲಾಗಿದೆ. ಚುನಾವಣಾ ಅವಧಿಯಲ್ಲಿ ಅಂತಹ …

Read More »

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

ಬೆಂಗಳೂರು: ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿಯಲಿ ಅಂತಾನೇ ಬಿಜೆಪಿಗರು ಕಾಯ್ತಾ ಇದ್ರು. ಚುನಾವಣೆ ಮುಗಿದ ಕೂಡಲೇ ಗ್ಯಾಸ್ ಬೆಲೆ ಹೆಚ್ಚಳ ಮಾಡಿದ್ದಾರೆ. ಜನ ಸಾಮಾನ್ಯರು ಹಾಗೂ ಕಾರ್ಮಿಕರ ಬಗ್ಗೆ ಬಿಜೆಪಿಗರಿಗೆ ಕಾಳಜಿ ಇಲ್ಲ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಬೇಕಿದೆ. ಗ್ಯಾಸ್ ಬೆಲೆ ಏರಿಕೆ ಮಾಡಿ, …

Read More »

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ  ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ. ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಘಟನೆ ನಡೆದ ದಿನ ಮೃತ ಸಿದ್ದಪ್ಪ ಅವರು ಕೂಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಬಿಸಿಲು ಹೆಚ್ಚಾದ್ದರಿಂದ ಮನೆಗೆ ಮರಳಿದ್ದರು. ಮನೆಗೆ ಬಂದ ತಕ್ಷಣ ನೀರಿನ ದಾಹ ತಣಿಸಿಕೊಳ್ಳಲು …

Read More »

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ಮಟ್ಟಣ್ಣನವರ್  ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ …

Read More »

ತಾಯಿನೇ ಎಲ್ಲ.. ಬದಲಾಗೋದಿಲ್ಲ.. ಜಬಲ್ಪುರ ಬೋಟ್ ದುರಂತದಲ್ಲಿ ಮನಕಲಕುವ ಘಟನೆ…

ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಡ್ಯಾಮ್‌ನಲ್ಲಿ ನಿನ್ನೆ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟಿದ್ದಾರೆ. ಬೋಟ್‌ನಲ್ಲಿ 30 ಜನ ಇದ್ದರು. ಅದರಲ್ಲಿ 17 ಜನರನ್ನು ರಕ್ಷಿಸಲಾಗಿದ್ದು, ಇನ್ನೂ 4 ಜನರ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆದಿದೆ. 9 ಜನರ ಶವಗಳನ್ನು ಪತ್ತೆ ಹಚ್ಚಿ ನೀರಿನಿಂದ ಹೊರತೆಗೆಯಲಾಗಿದ್ದು, ಅದರಲ್ಲಿ ದೆಹಲಿ ಮೂಲದ ತಾಯಿಯೊಬ್ಬಳು ತನ್ನ ಮಗುವನ್ನು ಎದೆಗಪ್ಪಿಕೊಂಡೇ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಮಗುವನ್ನು ಉಳಿಸುವ ಅವರ …

Read More »

‘ತಾತ’ನಾದ ಕನಕಪುರ ಬಂಡೆ: ಡಿ.ಕೆ. ಶಿವಕುಮಾರ್ ಮನೆಗೆ ಮಹಾಲಕ್ಷ್ಮಿಯ ಆಗಮನ! 

ಕರ್ನಾಟಕ ರಾಜಕಾರಣದ ಬಲಿಷ್ಠ ನಾಯಕರಲ್ಲಿ ಒಬ್ಬರಾದ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಡಿ.ಕೆ. ಶಿವಕುಮಾರ್ ಅವರು ಈಗ ‘ತಾತ’ನಾಗಿ ಬಡ್ತಿ ಪಡೆದಿದ್ದಾರೆ! ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗುರುಗಳಾದ ದಿವಂಗತ ಎಸ್.ಎಂ. ಕೃಷ್ಣ ಅವರ ಜನ್ಮದಿನದಂದೇ ಅವರ ಮೊಮ್ಮಗ ಅಮರ್ತ್ಯ ಹೆಗಡೆ ಮತ್ತು ಐಶ್ವರ್ಯ ದಂಪತಿಗೆ ಮಗು ಜನಿಸಿರುವುದು ವಿಶೇಷ. …

Read More »

ಗೋಕಾಕ ರೇಲ್ವೆ ನಿಲ್ದಾಣ ಹತ್ತಿರ ಟ್ರಾಫಿಕ್ ಜಾಮ್

ಗೋಕಾಕ: Gokak Railway Station ಸಮೀಪದ ರೇಲ್ವೆ ಬ್ರಿಜ್ ಬಳಿ ಟ್ರಕ್‌ ಕೆಟ್ಟು ನಿಂತ ಪರಿಣಾಮ ಇಂದು ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ ಘಟನೆ ನಡೆದಿದೆ. ರಸ್ತೆಯ ಮಧ್ಯದಲ್ಲಿ ಟ್ರಕ್‌ ಕೆಟ್ಟು ನಿಂತಿದ್ದರಿಂದ ಎರಡೂ ಬದಿಗಳಲ್ಲೂ ವಾಹನಗಳ ಸಾಲು ಉಂಟಾಗಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕೆಲಸಕ್ಕೆ ತೆರಳುತ್ತಿದ್ದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು. ಘಟನೆ ನಡೆದ ನಂತರವೂ …

Read More »