ಬೆಂಗಳೂರು: 48 ವರ್ಷಗಳ ಕನ್ನಡ ಹೋರಾಟದಲ್ಲಿ ನಾನು ಯಾವತ್ತೂ ರಾಜಿ ಆಗಿಲ್ಲ. ಅದಕ್ಕೆ ಶಕ್ತಿ, ಸ್ಫೂರ್ತಿ ಡಾ. ರಾಜ್‌ಕುಮಾರ್ ಎಂದು ಹೇಳುವ ಮೂಲಕ ನಟ ಚೇತನ್ ಅಹಿಂಸಾ ಅವರ ಆರೋಪಕ್ಕೆ ನಿರ್ಮಾಪಕ ಸಾ.ರಾ ಗೋವಿಂದು ತಿರುಗೇಟು ನೀಡಿದರು. ರಾಜ್‌ಕುಮಾರ್ ಸಮಾಧಿ ವಿಚಾರದಲ್ಲಿ ಸಾರಾ ಗೋವಿಂದು ವಿರುದ್ಧ ನಟ ಚೇತನ್ ದೂರು ನೀಡಿದ್ದ ವಿಚಾರಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಎಲ್ಲಿಂದ ಬಂದಿದೀಯ, ಸಂಸ್ಕೃತಿ ಇಲ್ವಾ ನಿನಗೆ? ಡಾ. ರಾಜ್‌ಕುಮಾರ್ ಅವರ ಬಗ್ಗೆ …
Read More »Daily Archives: ಮೇ 5, 2026
ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮಧ್ಯಂತರ ತಡೆ
ಚಿಕ್ಕಮಗಳೂರು: ಅಂಚೆ ಮತಗಳನ್ನ ತಿರುಚಿದ ಆರೋಪದ ಮೇಲೆ ಶೃಂಗೇರಿ ಶಾಸಕ ಜೀವರಾಜ್ ಮೇಲೆ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತನ್ನ ಮೇಲಿನ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಜೀವರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ನ್ಯಾಯಮೂರ್ತಿ ಶ್ರೀಶಾನಂದ ಅವರ ರಜಾಕಾಲದ ಪೀಠ ಇಂದು (ಮೇ 5) ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರದ ನಡೆಗೆ ಎಸ್‌ಪಿಪಿ ಬೆಳ್ಳಿಯಪ್ಪ ಮೇಲೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 2023ರ ಮೇ 13ರಂದು ನಡೆದ ಘಟನೆಗೆ …
Read More »ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್
ಬೆಂಗಳೂರು: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಕೇಂದ್ರ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್‌ರಿಂದ ಬಿಜೆಪಿಗೆ ಗೆಲುವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಪಂಚರಾಜ್ಯ ಚುನಾವಣೆ ಮತ್ತು ಉಪ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ 2 ಕ್ಷೇತ್ರದಲ್ಲಿ ನಾವು ಗೆದ್ದಿದ್ದೇವೆ. ಸರ್ಕಾರದ ಕಾರ್ಯಕ್ರಮ ಅದರ ಜೊತೆ ಕಾರ್ಯಕರ್ತರು, ಮುಖಂಡರ ಕೆಲಸದಿಂದ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ ಎಂದು …
Read More »ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ
ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ದಿನ ಕಳೆದಂತೆ ಸ್ವಾಮೀಜಿ ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಮಠದಲ್ಲಿ ಕಳೆದ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು ನಡೆಯುತ್ತಿವೆ. ಇವುಗಳು ವಿಕೋಪಕ್ಕೆ ತಿರುಗಿದ್ದು, ಗಲಾಟೆಗಳು, ಪ್ರಚೋದನಕಾರಿ ಹೇಳಿಕೆಗಳು ಬರುತ್ತಿವೆ. ಇದರಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ, ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಪೊಲೀಸ್ ಇಲಾಖೆ …
Read More »ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ
ಕೋಲ್ಕತ್ತಾ: 15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ಕುರಿತು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್‌ಡಿಎ ಆಡಳಿತವಿರುವ ಎಲ್ಲ …
Read More »ಬಿಜೆಪಿ ಕ್ರಿಮಿನಲ್ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್ ಚೋರಿ ಮಾಡಿದೆ: ಸಿಎಂ ಬಾಂಬ್
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವೋಟ್ ಜೋರಿ ಆರೋಪ ಹೊರಿಸಿದರು. ಕೋರ್ಟ್ ಆದೇಶದ ಮೇರೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಆಯಿತು. ರಾಜೇಗೌಡ ಕಳೆದ ವಿಧಾನಸಭೆಯಲ್ಲಿ 201 ಮತಗಳಿಂದ ಗೆದ್ದಿದ್ದರು. ರಾಜೇಗೌಡಗೆ ಇವಿಎಂ …
Read More »ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ರಾಜೀನಾಮೆ
ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ ಕಳುಹಿಸಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ಡಿಎಂಕೆ ವಿಫಲವಾದ ಹಿನ್ನೆಲೆ ಸ್ಟಾಲಿನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಟಿವಿಕೆ ನಾಯಕ ದಳಪತಿ ವಿಜಯ್ 2 ವಾರಗಳಲ್ಲಿ …
Read More »ಮನೆಗೆಲಸ ಮಾಡ್ಕೊಂಡು ತಿಂಗಳಿಗೆ 2,500 ರೂ. ಸಂಪಾದಿಸುತ್ತಿದ್ದ ಬಂಗಾಳದ ಮಹಿಳೆ ಈಗ ಬಿಜೆಪಿ ಶಾಸಕಿ
ಕೋಲ್ಕತ್ತಾ: ಮನೆಗೆಲಸ ಮಾಡಿಕೊಂಡು ತಿಂಗಳಿಗೆ 2,500 ರೂ. ಸಂಪಾದನೆ ಮಾಡುತ್ತಿದ್ದ ಮಹಿಳೆಗೆ ಬಂಗಾಳ ಚುನಾವಣೆಯಲ್ಲಿ ಅದೃಷ್ಟ ಖುಲಾಯಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಕಲಿತಾ ಮಾಝಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕಲಿತಾ ಮಾಝಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 12,535 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸಿ ಶಾಸಕಿಯಾಗಿದ್ದಾರೆ. ಸಾಧಾರಣ ಹಿನ್ನೆಲೆಯಿಂದ ಬಂದ ಮಾಝಿ ಆರ್ಥಿಕ ಸಂಕಷ್ಟದಿಂದಾಗಿ ಬಾಲ್ಯದಲ್ಲೇ ಶಿಕ್ಷಣವನ್ನು ತ್ಯಜಿಸಬೇಕಾಯಿತು. ತನ್ನ ಕುಟುಂಬವನ್ನು ಪೋಷಿಸಲು, …
Read More »ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. …
Read More »ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ …
Read More »
Laxmi News 24×7