ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಗೆಲುವು ಸಖತ್ ಕ್ರೇಜ್ ಹುಟ್ಟುಹಾಕಿದೆ. ದಶಕಗಳ ಇತಿಹಾಸ ಹೊಂದಿರುವ ಡಿಎಂಕೆ ಮತ್ತು ಎಐಎಡಿಎಂಕೆಯಂತಹ ಪ್ರಬಲ ಪಕ್ಷಗಳನ್ನು ಹಿಂದಿಕ್ಕಿ ಗೆಲುವಿನ ಪತಾಕೆ ಹಾರಿಸಿದ್ದಾಗಿದೆ. ಈ ರಾಜಕೀಯ ವಿಜಯೋತ್ಸವದ ಸಮಯದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ಮತ್ತೊಂದು ಹೆಸರು ‘ತ್ರಿಷಾ’. ಹೌದು, ವಿಜಯ್ ಯಶಸ್ಸಿನ ಬೆನ್ನಲ್ಲೇ ನಾಯಕಿ ತ್ರಿಷಾ ಸ್ವತಃ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿದ್ದು, ಈಗ ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ. ಇದು ಕೇವಲ …
Read More »Daily Archives: ಮೇ 5, 2026
ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಸತತ ಮೂರು ಬಾರಿ ಅಧಿಕಾರದಲ್ಲಿದ್ದ, ನಂತರ ನಿನ್ನೆ ಬಿಜೆಪಿ ವಿರುದ್ಧ ಸೋತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಫಲಿತಾಂಶ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಮಮತಾ ಬ್ಯಾನರ್ಜಿ, ನಾನು ರಾಜೀನಾಮೆ ಕೊಡಲ್ಲ. ನಾನು ಸೋತಿಲ್ಲ, ಹೀಗಾಗಿ ರಾಜಭವನಕ್ಕೆ ಹೋಗಲ್ಲ. ಬಿಜೆಪಿಗೆ ಸಿಕ್ಕ ಜನಾದೇಶ ಲೂಟಿಯ ಫಲಿತಾಂಶ ಎಂದು ವಾಗ್ದಾಳಿ ನಡೆಸಿದ್ದಾರೆ. ಬ್ಯಾನರ್ಜಿಯವರ ಈ ನಡೆ ರಾಜ್ಯದಲ್ಲಿ ರಾಷ್ಟ್ರಪತಿ …
Read More »ತಮಿಳುನಾಡು ರಾಜಕೀಯದಲ್ಲಿ ವಿಜಯ್ ಸೃಷ್ಟಿಸಿದ ಸಂಚಲನ: ನಟನಿಂದ ನಾಯಕನಾಗುವ ಹಾದಿಯಲ್ಲಿ ಪೋಷಕರ ಪಾತ್ರವೇನು?
ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಭರ್ಜರಿ ಜಯಭೇರಿ ಬಾರಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಕೇವಲ ಎರಡು ವರ್ಷಗಳ ಹಿಂದೆ ಪಕ್ಷ ಆರಂಭಿಸಿದ್ದ ವಿಜಯ್, ಇಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದರೆ, ಈ ಐತಿಹಾಸಿಕ ಯಶಸ್ಸಿನ ಹಿಂದೆ ಅವರ ಪೋಷಕರಾದ ಎಸ್.ಎ. ಚಂದ್ರಶೇಖರ್ ಮತ್ತು ಶೋಬಾ ಅವರ ಶ್ರಮ ಹಾಗೂ ಹಳೆಯ ವಿವಾದಗಳ ದೊಡ್ಡ …
Read More »2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ
ಮೈಸೂರು: ಕಳೆದ ವರ್ಷದ ನಾಡಹಬ್ಬ ಮೈಸೂರು ದಸರಾದ ಖರ್ಚು ವೆಚ್ಚದ ಲೆಕ್ಕವನ್ನು ಮೈಸೂರು ಜಿಲ್ಲಾಡಳಿತ ಈಗ ಬಿಡುಗಡೆ ಮಾಡಿದೆ. ದಸರಾ ಮುಗಿದು 7 ತಿಂಗಳ ಬಳಿಕ ಖರ್ಚು ವೆಚ್ಚದ ಲೆಕ್ಕವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಕಳೆದ ವರ್ಷ ಒಟ್ಟು 43 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿದೆ. ಯುವದಸರಾಗೆ ಬರೋಬ್ಬರಿ 16 ಕೋಟಿ ರೂ. ವೆಚ್ಚ ಮಾಡಿದೆ. ಸಿವಿಲ್ ಕಾಮಗಾರಿಗಳಿಗೆ 6 ಕೋಟಿ ರೂ. ಏರ್ ಶೋಗೆ 55 ಲಕ್ಷ …
Read More »96 ಲಕ್ಷ ವೋಟ್ ಡಿಲೀಟ್ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಮತಪಟ್ಟಿ ಪರಿಷ್ಕರಣೆ ವೇಳೆ 96 ಲಕ್ಷ ವೋಟ್‌ಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಇದು ನಿಜವೇ ಆಗಿದ್ದರೆ, ಇದು ಎಷ್ಟರ ಮಟ್ಟಿಗೆ ಕಾನೂನಾತ್ಮಕವಾಗಿದೆ ಎಂಬುದನ್ನು ನೋಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು . ಈ ವೇಳೆ, ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಹೇಗೆ ನಡೆದುಕೊಂಡಿದ್ದಾರೆ ಎಂದು ಗೊತ್ತಿದೆ. …
Read More »ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್
ಬೆಂಗಳೂರು: ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಇಂದು ಸುದಿನ. ಪ್ರಮುಖವಾಗಿ ಪಶ್ಚಿಮ ಬಂಗಾಳ ಚುನಾವಣೆ ದೇಶದ ಗಮನ ಸೆಳೆಯುತ್ತಿದೆ. ಅಸ್ಸಾಂ, ಪುದುಚೇರಿ ಮತ್ತು ಬಂಗಾಳದಲ್ಲಿ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಬಹುಮತ ಬರುತ್ತಿದೆ. ಪರಿಣಾಮ ಡಿಎಂಕೆ ಹತಾಶ ಮನೋಭಾವದಲ್ಲಿ ಗೂಡು ಸೇರಿದ್ದಾರೆ ಎಂದು ಕುಟುಕಿದರು. ಮೋದಿ ಮೂರು …
Read More »ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ
ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ …
Read More »ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ಬೆಂಗಳೂರು: ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ …
Read More »ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ …
Read More »ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತದಾನ ಮಾಡಿ ಗೆಲ್ಲಿಸಿದ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಇದು ನಮ್ಮ ಸರ್ಕಾರದ ಸಾಧನೆಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಸಿಕ್ಕ ಜಯವಾಗಿದೆ. ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ …
Read More »
Laxmi News 24×7