ರಾಮನಗರ: ವೈದ್ಯನ ಸಾವಿನ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಎರಡು ದಿನಗಳ ಅಂತರದಲ್ಲಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣಿಗೆ ಶರಣಾದ ನರ್ಸ್. 2 ದಿನಗಳ ಹಿಂದೆ ಕೌಟುಂಬಿಕ ಕಲಹದಿಂದ ಕನಕಪುರ ನವೋದಯ ಆಸ್ಪತ್ರೆ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಡಾ.ಚೇತನ್ ಅವರ ಆಸ್ಪತ್ರೆಯಲ್ಲಿ ಸಾಕಷ್ಟು …
Read More »Daily Archives: ಮೇ 8, 2026
ಜಿಬಿಎ ಚುನಾವಣೆ – ಜೂ.14 ರಿಂದ 24ರ ಒಳಗೆ ದಿನಾಂಕ ಘೋಷಣೆಗೆ ಸೂಚನೆ
ಬೆಂಗಳೂರು: ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ಕರೆಯಲಾಗಿತ್ತು.ಜಿಬಿಎ ಅಧ್ಯಕ್ಷರಾಗಿರುವ ಸಿಎಂ ಹಾಗೂ ಡಿಸಿಎಂ ಸಭೆಗೆ ಗೈರಾಗಿದ್ದರು. ಈ ಹಿನ್ನೆಲೆ ರಾಜ್ಯ ಚುನಾವಣಾ ಆಯುಕ್ತ …
Read More »ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ – ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ
ಬೆಂಗಳೂರು: ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವಂತೆ ಒತ್ತಾಯಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ …
Read More »11 ಜಿಲ್ಲೆಗಳಲ್ಲಿ ಬೆಂಬಲ ಬೆಲೆ ನೀಡಿ ಸೂರ್ಯಕಾಂತಿ ಖರೀದಿಗೆ ಆದೇಶ
ಬೆಂಗಳೂರು: ಬೆಂಬಲ ಬೆಲೆ ಯೋಜನೆ (MSP) ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು (Sunflower) ಪ್ರತಿ ಕ್ವಿಂಟಾಲ್‌ಗೆ 7,721 ರೂ. ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ (Shivanand Patil) ಆದೇಶ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ …
Read More »ಬಿಜೆಪಿ ನಾಯಕರನ್ನ ಬ್ಲ್ಯಾಕ್‌ಮೇಲ್ ಮಾಡೋಕೆ ಮಾಡ್ತಿದ್ದಾರೆ, ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ: ಯತ್ನಾಳ್
ಕೊಪ್ಪಳ: ಬಿಜೆಪಿ ನಾಯಕರನ್ನ ಬ್ಲ್ಯಾಕ್‌ಮೇಲ್ ಮಾಡೋಕೆ ಮಾಡ್ತಿದ್ದಾರೆ, ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಭಿಮಾನೋತ್ಸವ ಮಾಡೋಕೆ ಏನ್ ಕೆಲಸ ಮಾಡಿದ್ದಾರೆ. 50 ವರ್ಷ ಒಳ್ಳೆಯ ಕೆಲಸ ಮಾಡಿದ್ದರೆ ಮಾಡಬೇಕು, ಅದಕ್ಕಿಂತ ನೂರು ಪಟ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅದಕ್ಕೆ ಜೈಲಿಗೆ ಹೋಗಿದ್ರು. ಸಿದ್ದರಾಮಯ್ಯ ಜೊತೆ ಅಡ್ಜಸ್ಟ್ಮೆಂಟ್ ಇರೋದಕ್ಕೆ ಹೊರಗಿದ್ದಾರೆ. ಇಲ್ಲಾಂದ್ರೆ ಜೈಲಲ್ಲಿ ಇರ್ತಿದ್ದರು. ಇದೀಗ …
Read More »ಬಂಗಾಳ ಸರ್ಕಾರ ರಚನೆಗೆ ಕೋಲ್ಕತ್ತಾಗೆ ಆಗಮಿಸಿದ ಅಮಿತ್ ಶಾ – `ದಕ್ಷಿಣೇಶ್ವರ ಕಾಳಿ’ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ವೀಕ್ಷಕರಾಗಿ ಗೃಹಸಚಿವ ಅಮಿತ್ ಶಾ ಅವರಿಂದು ಕೋಲ್ಕತ್ತಾಗೆ ಆಗಮಿಸಿದ್ದಾರೆ. ನೂತನ ಸಿಎಂ ಆಯ್ಕೆ ಹಿನ್ನೆಲೆ ನಡೆಯಲಿರುವ ಪಕ್ಷದ ಸಭೆಗೂ ಮುನ್ನ ಇಲ್ಲಿನ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದಕ್ಕ ಮುನ್ನ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಸಿಎಂ ರೇಸ್‌ನಲ್ಲಿರುವ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಅಮಿತ್ ಶಾ ಅವರನ್ನ ಸ್ವಾಗತಿಸಿದರು. ಬಳಿಕ ವಿಮಾನ ನಿಲ್ದಾಣದ ಹೊರಗೆ …
Read More »ಡಿಎಂಕೆ, ಎಐಎಡಿಎಂಕೆ ಮೈತ್ರಿ – ನಾವು ತಟಸ್ಥವಾಗಿದ್ದೇವೆ, ಬೆಂಬಲ ನೀಡಲ್ಲ: ತಮಿಳುನಾಡು ಬಿಜೆಪಿ
ಚೆನ್ನೈ: ಡಿಎಂಕೆ ಮತ್ತು ಎಐಎಡಿಎಂಕೆ ಮಧ್ಯೆ ಮೈತ್ರಿ ಸುಳಿವು ಬೆನ್ನಲ್ಲೇ ತಮಿಳುನಾಡು ಬಿಜೆಪಿ ತಟಸ್ಥವಾಗಿರಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ತಮಿಳುನಾಡು ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ, ಯಾವ ಪಕ್ಷದ ಜೊತೆಗೂ ನಾವು ಕೈ ಜೋಡಿಸುವುದಿಲ್ಲ. ಯಾರ ಜೊತೆಗೂ ಸೇರಿ ಸರ್ಕಾರ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಯಾರಾದರೂ ಸರ್ಕಾರ ರಚನೆಗೆ ಮುಂದಾದರೂ ಕೂಡ, ಆ ಪಕ್ಷದ ಜೊತೆ ನಾವು ಹೋಗುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ಈ ಮೂಲಕ …
Read More »ಲೋಕಸಭೆಯಲ್ಲಿ ನಾವು ಕಾಂಗ್ರೆಸ್ ಜೊತೆ ಕೂರಲ್ಲ, ಪ್ರತ್ಯೇಕ ಆಸನ ನೀಡಿ: ಸ್ಪೀಕರ್‌ಗೆ ಡಿಎಂಕೆ ಮನವಿ
ನವದೆಹಲಿ: ತಮಿಳುನಾಡು ರಾಜಕಾರಣದ ದಿಢೀರ್ ಬೆಳವಣಿಗೆಯಿಂದಾಗಿ ದಶಕಗಳ ಕಾಲದ ಕಾಂಗ್ರೆಸ್-ಡಿಎಂಕೆ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರ ನೇರ ಪರಿಣಾಮ ಈಗ ಸಂಸತ್ತಿನವರೆಗೂ ತಲುಪಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ಪಕ್ಕದಲ್ಲಿ ಕುಳಿತುಕೊಳ್ಳಲು ಡಿಎಂಕೆ ನಿರಾಕರಿಸಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಬದಲಾದ ರಾಜಕೀಯ ಸಮೀಕರಣಗಳ ಹಿನ್ನೆಲೆಯಲ್ಲಿ, ಡಿಎಂಕೆ ಸಂಸದರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸುವಂತೆ ಪಕ್ಷದ ಹಿರಿಯ ನಾಯಕಿ ಕನಿಮೊಳಿ(Kanimozhi) ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ …
Read More »ಸರ್ಕಾರ ರಚಿಸುವ ಪಕ್ಷ ಬಹುಮತ ಮನವರಿಕೆ ಮಾಡಿಕೊಡಿಬೇಕು: ರಾಜ್ಯಪಾಲ ಅರ್ಲೇಕರ್
ಚೆನ್ನೈ: ಚುನಾವಣಾ ಫಲಿತಾಂಶದ ಬಳಿಕ ಯಾವ ಪಕ್ಷ ಸರ್ಕಾರವನ್ನ ರಚಿಸುತ್ತೇವೆ ಎಂದು ಮುಂದೆ ಬರುತ್ತದೆಯೋ ಅವರು ಬಹುಮತ ಇದೆ ಎನ್ನುವುದನ್ನು ನನಗೆ ಮನವರಿಕೆ ಮಾಡಬೇಕು. ಈಗಲೂ ಇದಕ್ಕಿಂತ ಹೆಚ್ಚು ನಾನು ಏನು ಕೇಳಿಲ್ಲ ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೇಳಿದ್ದಾರೆ. ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಪಕ್ಷ ಸರ್ಕಾರ ರಚಿಸಲು ಬಂದಾಗ ಅವರು ಬಹುಮತ ಇರುವ ಬಗ್ಗೆ ಖಾತರಿಪಡಿಸಬೇಕು. ನಾನು ತಲೆ ಎಣಿಕೆಯನ್ನು ಕೇಳುತ್ತಿಲ್ಲ. ಅದು …
Read More »ನಾಪತ್ತೆಯಾಗಿದ್ದ ಮಗು 12 ಗಂಟೆ ಬಳಿಕ ಹಳ್ಳದಲ್ಲಿ ಪತ್ತೆ – ರಾತ್ರಿಯಿಡಿ ಮಳೆ ಸುರಿದ್ರೂ ಗ್ರೇಟ್ ಎಸ್ಕೇಪ್
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೆಳಗೂರು ಎಸ್ಟೇಟ್ ಬಳಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಮಗುವನ್ನು ಪೊಲೀಸರು 12 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ. ಒಂದೂವರೆ ವರ್ಷದ ಶಿವಂ ಮಳೆ ಮಧ್ಯೆ 12 ಗಂಟೆಗಳ ಕಾಲ ಹಳ್ಳದಲ್ಲಿ ಕೂತು ಬಚಾವ್ ಆದ ಮಗು. ಕಳೆದ ವಾರ ಮಧ್ಯಪ್ರದೇಶದಿಂದ ಕೆಲಸಕ್ಕೆಂದು ಬಂದಿದ್ದ ಕುಟುಂಬ, ಮಗುವನ್ನ ನೋಡಿಕೊಳ್ಳಲು ಮಹಿಳೆಯೊಬ್ಬರ ಜೊತೆಗೆ ಬಿಟ್ಟು ಹೋಗಿದ್ದರು. ಕೂಲಿ ಕಾರ್ಮಿಕರ ಐದು ಮಕ್ಕಳನ್ನು …
Read More »
Laxmi News 24×7