Breaking News

Daily Archives: ಮೇ 9, 2026

ವಾಲ್ಮೀಕಿ ವಿವಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ – ಕಲಬುರಗಿ ಹೈಕೋರ್ಟ್ ತಡೆ

ರಾಯಚೂರು: ಜಿಲ್ಲೆಯ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ಕೋರ್ಟ್  ತಡೆ ನೀಡಿದೆ. ಸರ್ಕಾರದಿಂದ ಮಂಜೂರಾಗಿದ್ದ ವಿವಿಯ ಸಹಾಯಕ ಪ್ರಾಧ್ಯಾಪಕರ 24 ಹುದ್ದೆಗಳ ನೇಮಕಾತಿಗೆ ಕಲಬುರಗಿ ಹೈಕೋರ್ಟ್‌ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರ ನೇಮಕಾತಿಗೆ 16 ಏಪ್ರಿಲ್ 2026 ರಂದು ಮಂಜೂರಾತಿ ನೀಡಿತ್ತು. ಸರ್ಕಾರದ ಕೆಲ ಮಾರ್ಗಸೂಚಿಗಳು ಯು.ಜಿ.ಸಿ ನಿಯಮಾವಳಿಗಳ ಉಲ್ಲಂಘಿಸಿವೆ ಅಂತ ಆರೋಪಿಸಿ ಸ್ಪರ್ಧಾಕಾಂಕ್ಷಿ ಶ್ರೀಧರ್ …

Read More »

ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.  ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ …

Read More »

ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ಲಂಚ ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್ ಅರೆಸ್ಟ್

ಬಳ್ಳಾರಿ: ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ರೂ. ಲಂಚ ಹಣ ವಸೂಲಿ ಮಾಡಿದ್ದಕ್ಕೆ ಬಳ್ಳಾರಿ ಎಸ್ಪಿ ಸುಮನ್ ಪನ್ನೇಕರ್  ಗನ್‌ಮ್ಯಾನ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಕ್ರಮ ದಂಧೆಕೋರ ಶರಭಯ್ಯ ಎಂಬಾತ ಮೋಕಾ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಬಳ್ಳಾರಿ ಎಸ್ಪಿ ಸುಮನ್ ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಡಿತರ ಅಕ್ಕಿ …

Read More »

ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ – ತಪ್ಪಿದ ಭಾರೀ ಅನಾಹುತ

ಮಡಿಕೇರಿ: ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ಇಂದು ಮುಂಜಾನೆ  5 ಗಂಟೆ ಸುಮಾರಿಗೆ ನಡೆದಿದೆ. ಬೆಂಗಳೂರಿನಿಂದ  ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕದ ಇಳಿಜಾರಿಗೆ ವಾಲಿಕೊಂಡಿದೆ. ತನಗೆ ಹೃದಯಘಾತವಾಗುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಹೃದಯಾಘಾತ ತೀವ್ರವಾಗುತ್ತಿದ್ದಂತೆ ಚಾಲಕ ಚರಂಡಿಯ ಬಳಿ ಬಸ್ ನಿಲ್ಲಿಸಿದ್ದಾನೆ, ಈ …

Read More »

2,000ಕ್ಕೂ ಹೆಚ್ಚು ಕಾಫಿ ಗಿಡ, 250 ಮೆಣಸಿನ ಬಳ್ಳಿ ಕಡಿದ ದುಷ್ಕರ್ಮಿಗಳು: ಬೆಳೆಗಾರ ಕಣ್ಣೀರು

ಮಡಿಕೇರಿ: ಫಸಲು ಬರುವ ಸಮಯದಲ್ಲಿ ಸುಮಾರು 2000ಕ್ಕೂ ಅಧಿಕ ಕಾಫಿಗಿಡ ಮತ್ತು 250ಕ್ಕೂ ಹೆಚ್ಚು ಕಾಳುಮೆಣಸು ಬಳ್ಳಿಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಕೊಡಗು  ಜಿಲ್ಲೆಯ ಪೊನ್ನಂಪೇಟೆ  ತಾಲೂಕಿನ ಬಿರುನಾಣಿ ಸಮೀಪದ ಕಳಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌತಮ್ ಅವರಿಗೆ ಸೇರಿದ ಸುಮಾರು 3.5 ಎಕರೆ ಜಾಗದಲ್ಲಿ ಏಳೆಂಟು ವರ್ಷದ ಕಾಫಿ ಗಿಡಗಳು ಹಾಗೂ ಕಾಳುಮೆಣಸು ಬಳ್ಳಿಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ತೋಟದಲ್ಲಿ ಅಳವಡಿಸಿದ್ದ ಎರಡು ಸಿಸಿ ಕ್ಯಾಮೆರಾಗಳನ್ನು ಕಿಡಿಗೇಡಿಗಳು …

Read More »

ಸಾಲ ಕೊಟ್ಟ ವೃದ್ಧೆಗೆ ಆಕ್ಸಿಡೆಂಟ್ – ಮಹಿಳೆ ಮೃತಪಟ್ಟ 2 ದಿನಕ್ಕೆ ಕೊಲೆ ಆರೋಪಿ ಅನಾರೋಗ್ಯದಿಂದ ಸಾವು!

ಬೆಂಗಳೂರು: ಹಣಕ್ಕಾಗಿ ಸಾಲ ಕೊಟ್ಟ ಮಹಿಳೆಯನ್ನ ಆಕ್ಸಿಡೆಂಟ್ ಮಾಡಿ ಆಸ್ಪತ್ರೆಗೆ ಸೇರಿಸೊ ನೆಪದಲ್ಲಿ ಮನೆ ಕೀ ಪಡೆದು ಹಣಕ್ಕಾಗಿ ಮನೆಯೆಲ್ಲಾ ತಲಾಶ್ ಮಾಡಿತ್ತು ಗ್ಯಾಂಗ್. ಇತ್ತ ಆಕ್ಸಿಡೆಂಟ್ ಆದ ಮಹಿಳೆ ಸಾವನ್ನಪ್ಪಿದ ಬಳಿಕ ಇದು ಆಕ್ಸಿಡೆಂಟ್ ಅಲ್ಲ ಕೊಲೆ ಅಂತಾ ಕನ್ಫರ್ಮ್ ಆಗಿ ಐವರ ಬಂಧನ ಮಾಡಲಾಗಿತ್ತು. ವಿಧಿಯಾಟ ಅಂದ್ರೆ ಆಕ್ಸಿಡೆಂಟ್ ಆಗಿ ಸಾವನ್ನಪ್ಪಿದ ವೃದ್ದೆಯ ಪೋಸ್ಟ್ ಮಾರ್ಟಂ ದಿನವೇ ಆರೋಪಿ ಪೊಲೀಸ್ ವಶದಲ್ಲಿದ್ದಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಹೌದು. ಕಷ್ಟ ಅಂತ …

Read More »

ರಾಜಾಹುಲಿ ರಾಜಕೀಯ ಪಯಣಕ್ಕೆ 50 ವರ್ಷ – ಚಿತ್ರದುರ್ಗದಲ್ಲಿಂದು ಬಿಎಸ್‌ವೈ ಅಭಿಮಾನೋತ್ಸವ

ಚಿತ್ರದುರ್ಗ: ರಾಜ್ಯ ರಾಜಕಾರಣದ ಧ್ರುವತಾರೆ, ರೈತನಾಯಕ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು ಸಾಕ್ಷಿಯಾಗುತ್ತಿದೆ. ಇಂದು (ಮೇ 9) ನಡೆಯಲಿರುವ ಐತಿಹಾಸಿಕ ಅಭಿಮಾನೋತ್ಸವಕ್ಕಾಗಿ ಚಿತ್ರದುರ್ಗ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ರಾಜ್ಯ ರಾಜಕಾರಣದ ಧ್ರುವತಾರೆ, ರೈತನಾಯಕ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಪಯಣಕ್ಕೆ ಸುದೀರ್ಘ 50 ವರ್ಷಗಳು. ಕೋಟೆನಾಡು ಚಿತ್ರದುರ್ಗದಲ್ಲಿಂದು ಯಡಿಯೂರಪ್ಪ ಅಭಿಮಾನೋತ್ಸವ ನಡೆಯಲಿದೆ. ಇಂದು ನಡೆಯಲಿರುವ ಬಿಎಸ್‌ವೈ  ಅಭಿಮಾನೋತ್ಸವ ಕೇವಲ ಒಂದು ಸಮಾರಂಭವಾಗದೇ ಅದೊಂದು ಕೇಸರಿ ಪಡೆಯ …

Read More »

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ರಾಯಚೂರು: ಮಹೀಂದ್ರಾ ಥಾರ್  ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನ ಕ್ಯಾಮೆರಾದಲ್ಲಿ ನಡೆದಿದೆ. ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ  ಭೂಮಿಕಾ (17) ಮೃತ ದುರ್ದೈವಿ. ಮೇಘನಾ, ಮಹೇಶ್ವರಿ, ಜಹೀದಾ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರು. ಕಾಲೇಜು ಮುಗಿದು ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದರು, ಈ ವೇಳೆ ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ. ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೂ ಮೂವರು ಗಾಯಗೊಂಡು …

Read More »

ಕೋಟೆ ನಾಡಲ್ಲಿ ಬಿಎಸ್‌ವೈ ಅಭಿಮಾನೋತ್ಸವ – ಅದ್ಧೂರಿ ಪುರಪ್ರವೇಶ, ಬೃಹತ್‌ ಮೆರವಣಿಗೆ

ಚಿತ್ರದುರ್ಗ: ರಾಜ್ಯ ರಾಜಕಾರಣದ ಧ್ರುವತಾರೆ, ರೈತನಾಯಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಾಕ್ಷಿಯಾಗುತ್ತಿದೆ. ಮೇ 9 ರಂದು ನಡೆಯಲಿರುವ ಐತಿಹಾಸಿಕ ಅಭಿಮಾನೋತ್ಸವಕ್ಕಾಗಿ  ಚಿತ್ರದುರ್ಗ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಕೇಸರಿ ಪಡೆ ಹಬ್ಬದ ವಾತಾವರಣ ನಿರ್ಮಿಸಿದೆ. ಬಿಎಸ್‌ವೈ ಅವರ ಐದು ದಶಕಗಳ ರಾಜಕೀಯ ಹಾದಿಯ ಸಾಧನೆಗಾಗಿ ಬೃಹತ್ ‘ಅಭಿಮಾನೋತ್ಸವ’ ಆಯೋಜಿಸಲಾಗಿದೆ. ನಗರದ ಹೊರವಲಯದಲ್ಲಿ ಜರ್ಮನ್ ಮಾದರಿಯ ಬೃಹತ್ ಪೆಂಡಾಲ್ ಹಾಕಲಾಗಿದ್ದು, …

Read More »

ಡಿಎಂಕೆ ‘ಬೆನ್ನಿಗೆ ಚೂರಿ’ ಆರೋಪಕ್ಕೆ ತಿರುಗೇಟು – ‘ಇತಿಹಾಸ ಮರೆಯಬೇಡಿ’ ಎಂದು ಕನ್ನಡಿ ತೋರಿಸಿದ ಕಾಂಗ್ರೆಸ್‌

ನವದೆಹಲಿ: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ  ಪಕ್ಷಕ್ಕೆ ಬೆಂಬಲ ನೀಡಿದ ವಿಚಾರವಾಗಿ ಕಾಂಗ್ರೆಸ್  ಮತ್ತು ಡಿಎಂಕೆ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. “ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿದೆ” ಎಂಬ ಡಿಎಂಕೆಯ ಗಂಭೀರ ಆರೋಪಕ್ಕೆ, ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಶ್ರೀವತ್ಸ(Srivatsa) ಅವರು ಅಂಕಿ-ಅಂಶ ಹಾಗೂ ಇತಿಹಾಸದ ದಾಖಲೆಗಳೊಂದಿಗೆ ತಿರುಗೇಟು ನೀಡಿದ್ದಾರೆ. ಈ ಹಿಂದೆ ಕರ್ನಾಟಕ ಕಾಂಗ್ರೆಸ್‌ ಜಾಲತಾಣ ಮುಖ್ಯಸ್ಥರಾಗಿದ್ದ ಶ್ರೀವತ್ಸ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ …

Read More »