ಆನೇಕಲ್: ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ನಡೆದಿದೆ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿದ್ದರು. ಆದರೆ, ಈಜು ಬರದೆ ಇಬ್ಬರು ಕೆರೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಶಾಹಪುರ ಮೂಲದ ಆನಂದ್ ಮತ್ತು ಅಂಬರೀಶ್ ಮೃತರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆನೇಕಲ್ ಮತ್ತು ಎಲೆಕ್ಟ್ರಾನ್ ಸಿಟಿ …
Read More »Daily Archives: ಮೇ 9, 2026
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು
ಮಂಗಳೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯಹೊಳೆಯಲ್ಲಿ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ಗೆ ಬೆಂಕಿ – ಓರ್ವ ಸಿಬ್ಬಂದಿ ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು: ಇಲ್ಲಿನ ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಖಾಸಗಿ ಹೋಟೆಲ್‌ಗೆ ಬೆಂಕಿ ತಗುಲಿ, ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ (ಮೇ 8) ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ರು. ಬೆಂಕಿಯ ಕೆನ್ನಾಲಿಗೆ ಮೇಲಿನ …
Read More »ಸವದತ್ತಿ ಜಾತ್ರಾ ಮಹೋತ್ಸವದಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರೊಂದಿಗೆ ಭಕ್ತಿಪೂರ್ವಕ ಭಾಗಿ
ನಮ್ಮ ಸವದತ್ತಿ ಪಟ್ಟಣದ ಐತಿಹಾಸಿಕ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಇಂದು ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ನಮ್ಮ ಜಿಲ್ಲೆಯ ಪ್ರಭಾವಿ ನಾಯಕರಾದ ಶ್ರೀ ಸತೀಶ್ ಜಾರಕಿಹೊಳಿ ಅವರೊಂದಿಗೆ ಪಾಲ್ಗೊಂಡು ತಾಯಿ ಗ್ರಾಮದೇವಿಯ ದರ್ಶನ ಪಡೆದೆವು. 45 ವರ್ಷಗಳ ಬಳಿಕ ಜರುಗುತ್ತಿರುವ ಈ ಮಹೋತ್ಸವದ ಸಂಭ್ರಮಕ್ಕೆ ಸಚಿವರ ಆಗಮನವು ಮತ್ತಷ್ಟು ಮೆರುಗು ನೀಡಿತು. ಸವದತ್ತಿಯ ಸಮಸ್ತ ಜನತೆಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ತಾಯಿಯ ಆಶೀರ್ವಾದ ಸದಾ ಇರಲಿ …
Read More »
Laxmi News 24×7