Breaking News

Daily Archives: ಮೇ 10, 2026

ಭವಿಷ್ಯದಲ್ಲಿ INDIA ಒಕ್ಕೂಟವನ್ನು ವಿಜಯ್‌ ಸೇರಬಹುದು: ಚಿದಂಬರಂ

ನವದೆಹಲಿ: ವಿಜಯ್‌ ಅವರ ತಮಿಳಗ ವೆಟ್ರಿ ಕಳಗಂ ಭವಿಷ್ಯದಲ್ಲಿ INDIA ಒಕ್ಕೂಟವನ್ನು ಸೇರಬಹುದು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಆಶಾವಾದ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ವಿಜಯ್ ಅವರ ಟಿವಿಕೆ ಪಕ್ಷವನ್ನು ಕೂಡ ‘ಇಂಡಿಯಾ’ ಕೂಟಕ್ಕೆ ಸೇರಲು ಮನವೊಲಿಸಬೇಕು ಎಂಬುದು ನನ್ನ ಆಸೆ ಎಂದು ಹೇಳಿದ್ದಾರೆ. ಸ್ಟಾಲಿನ್  ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಇಲ್ಲಿಯವರೆಗೆ ಇಂಡಿಯಾ ಕೂಟದ ಬಗ್ಗೆ ನಕಾರಾತ್ಮಕವಾಗಿ …

Read More »

ರಾಜ್ಯದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಮೋದಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಕೆಶಿ

ರಾಯಚೂರು: ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿ ಮೋದಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಹೇಳಿದರು‌. ಲಿಂಗಸಗೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್‌ನಲ್ಲೂ ಇದೇ ರೀತಿ ಆಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ ಎಂದರು. …

Read More »

ಚುನಾವಣೆ ಸೋಲಿನ ಬೆನ್ನಲ್ಲೇ ಟಿಎಂಸಿ ಮೂವರು ವಕ್ತಾರರ ಅಮಾನತು

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ವಿರೋಧಿ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್‌ನ ಮೂವರು ವಕ್ತಾರರನ್ನು ಅಮಾನತು ಮಾಡಲಾಗಿದೆ. ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ವಕ್ತಾರರಾದ ಕೊಹಿನೂರ್ ಮಜುಂದಾರ್, ರಿಜು ದತ್ತ ಮತ್ತು ಕಾರ್ತಿಕ್ ಘೋಷ್ ಅವರನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ, ನಾಯಕತ್ವ ಮತ್ತು ಪಕ್ಷದ ಚುನಾವಣಾ ಕಾರ್ಯತಂತ್ರವನ್ನು ಟೀಕಿಸಿದ ಐವರು ವಕ್ತಾರರಿಗೆ ಪಕ್ಷವು ಶೋಕಾಸ್ ನೋಟಿಸ್ ನೀಡಿತ್ತು. …

Read More »

ಕೇವಲ 13 ಎಸೆತಕ್ಕೆ ವೇಗದ ಅರ್ಧಶತಕ; ಜೈಸ್ವಾಲ್‌ ದಾಖಲೆ ಸರಿಗಟ್ಟಿದ ಉರ್ವಿಲ್‌

ಚೆನ್ನೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್  ಬ್ಯಾಟ್ಸ್‌ಮನ್ ಉರ್ವಿಲ್ ಪಟೇಲ್  ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಇತಿಹಾಸ ಬರೆದರು. ಎಲ್‌ಎಸ್‌ಜಿ ಬೌಲರ್‌ಗಳ ವಿರುದ್ಧ ಈ ಬ್ಯಾಟ್ಸ್‌ಮನ್ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದರಿಂದ ಇದು ಐಪಿಎಲ್ ಇತಿಹಾಸದಲ್ಲಿ ವೇಗದ ಅರ್ಧಶತಕವಾಗಿದೆ. ಐಪಿಎಲ್ 2023 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 13 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರಾಜಸ್ಥಾನ್ ರಾಯಲ್ಸ್ …

Read More »

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್ ಪತ್ನಿ ಗೈರು

ಚೆನ್ನೈ: ವಿಜಯ್ ದಳಪತಿ ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು. ಆದರೆ ವಿಜಯ್ ಅವರ ಪತ್ನಿ ಸಂಗೀತಾ ಮತ್ತು ಮಕ್ಕಳು ಸಮಾರಂಭಕ್ಕೆ ಗೈರಾಗಿದ್ದರು. ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಿಜಯ್ ಪೋಷಕರು, ಆಪ್ತರು ಹಾಗೂ ನಟಿ ತ್ರಿಷಾ ಕೃಷ್ಣನ್ ಕೂಡ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಿಗೆ ಕಾರಣವಾಗಿದೆ. ವಿಜಯ್ ಮತ್ತು ತ್ರಿಷಾ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ …

Read More »

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ – ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ) ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಕಗ್ಗಲೀಪುರ ಬಳಿಯ ರವಿಶಂಕರ್ ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು …

Read More »

ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ – ಕುರ್ಚಿ ಕಿತ್ತಾಟಕ್ಕೆ ಮೋದಿ ಲೇವಡಿ

ಬೆಂಗಳೂರು: ಪಶ್ಚಿಮ ಬಂಗಾಳ  ಮತ್ತು ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ಮತ್ತು ಅಧಿಕಾರ ಹಂಚಿಕೆ ಕಿತ್ತಾಟವನ್ನು ಟೀಕಿಸಿ ವ್ಯಂಗ್ಯವಾಡಿದ್ದಾರೆ. ಹೆಚ್‌ಎಎಲ್ ಆವರಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ರಾಜ್ಯ ಸರ್ಕಾರದ ನಾಯಕರ ನಡುವಿನ ಶೀತಲ ಸಮರವನ್ನು ಲೇವಡಿ ಮಾಡಿದರು. “ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯಲ್ಲಿ ಎಷ್ಟು ದಿನ ಇರುತ್ತಾರೋ ಯಾರಿಗೂ …

Read More »

ಯುದ್ಧ ಮುಗಿಯುತ್ತಿದೆ – ವರ್ಷಗಳ ರಕ್ತಪಾತಕ್ಕೆ ತೆರೆ ಎಳೆಯುವ ಸುಳಿವು ನೀಡಿದ ಪುಟಿನ್

ಮಾಸ್ಕೋ: ನಾಲ್ಕು ವರ್ಷಗಳಿಂದ ಜಗತ್ತಿನ ಗಮನ ಸೆಳೆದಿರುವ ರಷ್ಯಾ-ಉಕ್ರೇನ್ ಯುದ್ಧ  ಕೊನೆಗೂ ಅಂತ್ಯವಾಗಲಿದ್ಯಾ ಎಂಬ ಪ್ರಶ್ನೆ ಮೂಡಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೀಡಿದ ಹೊಸ ಹೇಳಿಕೆ ಇದೀಗ ಶಾಂತಿ ಮಾತುಕತೆಗಳ ಬಗ್ಗೆ ಹೊಸ ನಿರೀಕ್ಷೆ ಹುಟ್ಟಿಸಿದೆ. ಮಾಸ್ಕೋದಲ್ಲಿ ನಡೆದ ವಿಜಯ ದಿನಾಚರಣೆಯ ವೇಳೆ ಮಾತನಾಡಿದ ಪುಟಿನ್, ಯುದ್ಧ ಮುಗಿಯುವ ಹಂತಕ್ಕೆ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳುವ ಮೂಲಕ ಅವರು ಪರೋಕ್ಷವಾಗಿ ಯುದ್ಧ ನಿಲ್ಲಿಸುವ ಬಗ್ಗೆ ಸೂಚನೆ …

Read More »

ಕೇರಳದಲ್ಲಿ 3 ಸ್ಥಾನ ಗೆದ್ದಿದ್ದೇವೆ, ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ: ಮೋದಿ

ಬೆಂಗಳೂರು: ಕೇರಳದಲ್ಲಿ ಈ ಬಾರಿ 3 ಸ್ಥಾನ ಗೆದ್ದಿದ್ದೇವೆ. ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿಜೆಪಿಯಿಂದ  ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ವಿಮಾನ ನಿಲ್ದಾಣದಲ್ಲಿ ಇಂತಹ ಕಾರ್ಯಕ್ರಮ ಇದೇ ಮೊದಲು. ಬೆಂಗಳೂರಿನ  ನೆಲದಲ್ಲಿ ಕೇಸರಿ ರಾರಾಜಿಸುತ್ತಿದೆ. ಬಂಗಾಳದ ಗೆಲುವು ನಿಮ್ಮ ಗೆಲುವು. …

Read More »

200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಪಟ್ಟಕ್ಕೇರುತ್ತಿದ್ದಂತೆ ವಿಜಯ್ ಗ್ಯಾರಂಟಿ

ಚೆನ್ನೈ: 200 ಯೂನಿಟ್ ಉಚಿತ ವಿದ್ಯುತ್  ಹಾಗೂ ಮಹಿಳೆಯರಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ತಮಿಳುನಾಡಿನ ನೂತನ ಸಿಎಂ ವಿಜಯ್ ಗ್ಯಾರಂಟಿ  ಘೋಷಣೆ ಮಾಡಿದ್ದಾರೆ. ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಈ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಕಡತಕ್ಕೆ ವಿಜಯ್ ಸಹಿ ಹಾಕಿದ್ದಾರೆ. ಈ ಸಂದರ್ಭ ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಡೆ ರಚಿಸುವುದಾಗಿ ಭರವಸೆ ನೀಡಿದ್ದಾರೆ. …

Read More »