ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಕೆಲ ಸಲಹೆ ಮತ್ತು ತ್ಯಾಗಗಳಿಗೆ ಕರೆ ನೀಡಿದ್ದಾರೆ. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿ ಸಹ ಒಂದಾಗಿದೆ. ಈ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕುಸಿತವಾಗಿದ್ದರೇ, ಅಕ್ಕಿ (Rice) ದರ ಗಗನಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ …
Read More »Daily Archives: ಮೇ 12, 2026
ಪ್ರಿಯಕರನ ನಂಬಿ ಹೋದವಳಿಗೆ ಮೋಸ: ಮಕ್ಕಳನ್ನು ಬಿಟ್ಟು ಹೋಗಿದ್ದ ತಾಯಿ ಈಗ ಮತ್ತೆ ಗಂಡನ ಮನೆಗೆ..!
ಪ್ರೀತಿಯ ಅಮಲಿನಲ್ಲಿ ಸಂಸಾರವನ್ನೇ ಮರೆತು ಪರಾರಿಯಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇಂತಹದ್ದೇ ಒಂದು ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಬ್ಬರು ಮಕ್ಕಳ ತಾಯಿ ತನ್ನ ಪ್ರಿಯಕರನಿಗಾಗಿ ಗಂಡ-ಮಕ್ಕಳನ್ನು ಬಿಟ್ಟು ಹೋಗಿ, ಈಗ ಅಲ್ಲಿ ಕೈಕೊಟ್ಟ ಮೇಲೆ ಮತ್ತೆ ಗಂಡನ ಬಳಿ ಬಂದಿರುವ ಘಟನೆ ವರದಿಯಾಗಿದೆ. ನಡೆದಿದ್ದೇನು? ಸುಮಾರು 4 ತಿಂಗಳ ಹಿಂದೆ ಇಬ್ಬರು ಮಕ್ಕಳ ತಾಯಿಯಾಗಿದ್ದ ಈ ಮಹಿಳೆ, ಪ್ರಿಯಕರನೊಂದಿಗೆ ಮನೆಯಿಂದ ಪರಾರಿಯಾಗಿದ್ದಳು. ಈ ವಿಷಯ …
Read More »ಕಾನ್ಸ್‌ಟೇಬಲ್ ಜೊತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ನೇಣಿಗೆ ಶರಣು.!! – ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ
ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು …
Read More »ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ
ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್ ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರು. ಇವರಿಬ್ಬರೂ ಹೊರ ವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಭರತ್ ಕಾಂತ್ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. …
Read More »ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಾವು
ಬೆಂಗಳೂರು: ಕೊತ್ತನೂರು ಬಳಿಯ ನಾರಾಯಣಪುರ ಎಂಬಲ್ಲಿ ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರ್ಜುನ್ (5), ಆಶಾ (3) ಮೃತ ಮಕ್ಕಳು. ಇಂದು ಮಧ್ಯಾಹ್ನ 1:30 ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳು ಮೂಲತಃ ರಾಯಚೂರು ಮೂಲದವರು. ಇವರ ತಂದೆ-ತಾಯಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದರು. ಅಜ್ಜಿ ಶೆಡ್‌ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. …
Read More »ತಮಿಳುನಾಡಿನ ಸಿಎಂ ವಿಜಯ್ ಭೇಟಿಯಾಗಲು 650 ಕಿಮೀ ಪಾದಯಾತ್ರೆ ಹೊರಟ ಕೇರಳ ದಂಪತಿ
ಚೆನ್ನೈ: ತಮಿಳುನಾಡು ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರನ್ನು ಭೇಟಿಯಾಗಲು ಕೇರಳದ ದಂಪತಿ 650 ಕಿಮೀ ಕಾಲ್ನಡಿಗೆ ಪ್ರಯಾಣ ಬೆಳೆಸಿದ್ದಾರೆ. ಕೇರಳದ ದಂಪತಿ ಮಲಪ್ಪುರಂನಿಂದ ಚೆನ್ನೈಗೆ 650 ಕಿ.ಮೀ ಕಾಲ್ನಡಿಗೆಯಲ್ಲಿ ಪ್ರಯಾಣ ಬೆಳೆಸಿರುವುದು ವೈರಲ್ ಆಗಿದೆ. ಮೊಹಮ್ಮದ್ ರಫಿ ಮತ್ತು ಅವರ ಪತ್ನಿ ಸಿ.ಪಿ. ಉಮ್ಮು ಶಹನಮೋಲ್ ಕೇರಳದ ಮಲಪ್ಪುರಂ ಜಿಲ್ಲೆಯ ತನೂರಿನ ನಿವಾಸಿಗಳು. ರಫಿ ವೃತ್ತಿಪರ ಚಾಲಕರಾಗಿ ಕೆಲಸ ಮಾಡುತ್ತಾರೆ. ಮೇ 10 ರಂದು …
Read More »ಬಂಗಾಳದ ಮುಖ್ಯ ಚುನಾವಣಾಧಿಕಾರಿ ಈಗ ಬಿಜೆಪಿ ಸರ್ಕಾರದ ಸಿಎಸ್- ಇದು ನಾಚಿಕೆಗೇಡು ಎಂದ ಟಿಎಂಸಿ
ಕೋಲ್ಕತ್ತಾ: ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ಅವರನ್ನು ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಹೊಸ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಮುಖ್ಯಮಂತ್ರಿಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯ ನ್ಯಾಯಸಮ್ಮತತೆಯ ಬಗ್ಗೆ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್‌ನಿಂದ ಪ್ರಶ್ನೆಗಳನ್ನು ಎತ್ತಿದೆ. ಬಿಜೆಪಿ ಎರಡೂ ನೇಮಕಾತಿಗಳನ್ನು ಸಮರ್ಥಿಸಿಕೊಂಡಿದ್ದು, ಅವು ಅರ್ಹತೆ ಆಧಾರಿತ ಮತ್ತು ಈ ನೆಲದ ಕಾನೂನುಗಳ …
Read More »ಮೋದಿ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ, ದ್ವೇಷ, ಅಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ( ಅವರು ಭಾನುವಾರ (ಮೇ 10) ಬೆಂಗಳೂರಿನಲ್ಲಿ ಭಾಷಣ ಮಾಡಿ, ಕರ್ನಾಟಕದ ಸಿಎಂ ಇನ್ನೆಷ್ಟು ದಿನ ಅಧಿಕಾರದಲ್ಲಿ ಇರ್ತಾರೋ ಎಂದಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ಕೊಟ್ಟಿದ್ದಾರೆ. …
Read More »ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು
ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ ಕುಸಿದು ಅಕ್ಷತಾ (8) ಮೃತಪಟ್ಟಿದ್ದಾಳೆ. ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆ ಗೋಡೆ ಕುಸಿದಿದೆ. ಈ ವೇಳೆ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ …
Read More »ಜಮಖಂಡಿ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಭೀಕರ ಹಲ್ಲೆ!
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಉಪಕಾರಾಗೃಹದಲ್ಲಿ ಕೈದಿಗಳು ರೌಡಿಸಂ ಪ್ರದರ್ಶಿಸಿದ್ದಾರೆ. ವಿಚಾರಣಾಧೀನ ಕೈದಿಗಳ ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಪಡಿತರ ಅಕ್ಕಿ ಮಾಫಿಯಾ ಗ್ಯಾಂಗ್ ಭೀಕರವಾಗಿ ಹಲ್ಲೆ ನಡೆಸಿದ್ದು, ಜೈಲರ್ ಅವರ ಕೈ ಮುರಿದಿರುವ ಘಟನೆ ಸಂಭವಿಸಿದೆ. ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಿನ್ನೆ ಸಂಜೆ ವಿಚಾರಣಾಧೀನ ಕೈದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಕೈದಿಗಳನ್ನು ಸಮಾಧಾನಪಡಿಸಲು ಹೋದ ಜೈಲರ್ ವಿ.ಡಿ. ಕುಂಬಾರ ಅವರ ಮೇಲೆ …
Read More »
Laxmi News 24×7