Breaking News

Daily Archives: ಮೇ 21, 2026

ವಿವಿಧ ಅಭಿವೃದ್ದಿ ನಿಗಮ ನೇಮಕಾತಿಗೆ ಅರ್ಜಿ ಆಹ್ವಾನ – ಕೆಇಎ

ಬೆಂಗಳೂರು: ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ‌ ಬೆಂಗಳೂರು ಜಲಮಂಡಲಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೇ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ  ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು …

Read More »

ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ನವದೆಹಲಿ: 2019ರ ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ  ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ ಬುರಾನ್‌ನ ನಿಜವಾದ ಹೆಸರು …

Read More »

1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಮರುಪರಿಶೀಲಿಸಿ – ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಮರು ಪರಿಶೀಲಿಸುವಂತೆ ಹೈಕೋರ್ಟ್  ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. ಕಳೆದ ಮಾ.28ರಂದು ಶಿಕ್ಷಣ ಇಲಾಖೆಯು ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶ ಪ್ರಶ್ನಿಸಿ ಬೆಂಗಳೂರಿನ ಮಾಸ್ಟರ್ ಕೃಷ್ಣ, ಗಣೇಶ್ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ರಜಾಕಾಲೀನ ಏಕಸದಸ್ಯ ಪೀಠ ಇಂದು ವಿಚಾರಣೆ …

Read More »

ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ, ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ!

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿಅಭಿವೃದ್ಧಿ ಕೆಲಸಗಳ ಕ್ರೆಡಿಟ್ ಪಡೆಯುವ ವಿಚಾರವಾಗಿ ಕಾಂಗ್ರೆಸ್  ಹಾಗೂ ಬಿಜೆಪಿ  ಕಾರ್ಯಕರ್ತರ ನಡುವೆ ಭಾರಿ ಹೈಡ್ರಾಮಾ ನಡೆದಿದೆ. ಕೈ-ಕಮಲ ಪಾಳಯದ ನಡುವಿನ ‘ಕ್ರೆಡಿಟ್ ವಾರ್’ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ನೂರಾರು ಪೊಲೀಸರ ಸಮ್ಮುಖದಲ್ಲೇ ಉಭಯ ಪಕ್ಷಗಳ ಕಾರ್ಯಕರ್ತರು ಸರಿಸಮನಾಗಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ರಾಂಗುರ ಟು ಕೆ.ಆರ್.ಪೇಟೆ ಮಾರ್ಗದ ರಸ್ತೆ ಕಾಮಗಾರಿ ವೀಕ್ಷಣೆಗಾಗಿ ಮಾಜಿ ಶಾಸಕ ಸಿ.ಟಿ.ರವಿ ಅವರು ಭೇಟಿ ನೀಡಿದ್ದರು. ಈ ವೇಳೆ …

Read More »

ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ

ವಿಜಯಪುರ: ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಜನರು ನೀರಿಗಾಗಿ ಕೃಷ್ಣಾ ನದಿ ಮೇಲೆ ಅವಲಂಬಿತರಾಗಿದ್ದಾರೆ. ಪಕ್ಕದ ಬಾಗಲಕೋಟೆ  ಜಿಲ್ಲೆ ಕೂಡ ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದಲೇ ನೀರು ಸಪ್ಲೈ ಆಗುತ್ತದೆ. ಆದರೆ ಸದ್ಯ ಜಲಾಶಯದಲ್ಲಿ 9 ಟಿಎಂಸಿ ನೀರು …

Read More »

ಗೋವನ್ನು ರಾಷ್ಟ್ರೀಯ ಪ್ರಾಣಿ ಅಂತ ಘೋಷಿಸಿ – ಕೇಂದ್ರಕ್ಕೆ ಬಾಬರಿ ಪ್ರಕರಣದ ವಾದಿ ಇಕ್ಬಾಲ್ ಅನ್ಸಾರಿ ಮನವಿ

ಲಕ್ನೋ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಪ್ರಮುಖ ಹಾಗೂ ಹಿರಿಯ ಮುಸ್ಲಿಂ ಅರ್ಜಿದಾರರಾದ ಇಕ್ಬಾಲ್‌ ಅನ್ಸಾರಿ  ಮನವಿ ಮಾಡಿದರು. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಸರ್ಕಾರವು  ಗೋವಿಗೆ ರಾಷ್ಟ್ರೀಯ ಸ್ಥಾನಮಾನ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಮುಸ್ಲಿಮರು ಗೋವುಗಳನ್ನು ಗೌರವಿಸಬೇಕು, ಅವುಗಳ ಗೋಹತ್ಯೆಯನ್ನು ನಿಲ್ಲಿಸಬೇಕು. ಏಕೆಂದ್ರೆ, ಗೋಹತ್ಯೆಯ ವಿಚಾರವನ್ನೇ ಮುಂದಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸುವ ಹಾಗೂ ಸಮುದಾಯವನ್ನು …

Read More »

ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಿದೆ. ಈ ಬೆನ್ನಲ್ಲೇ ಆರೆಂಜ್‌ ಅಲರ್ಟ್‌  ಘೋಷಿಸಿರುವ ರಾಜ್ಯ ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ನಗರದ ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್ ಸುತ್ತಮುತ್ತ ಹಾಗೂ ಬೆಂಗಳೂರು ಗ್ರಾಮಾಂತರಕ್ಕೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟಿನಲ್ಲಿ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. …

Read More »

ವಾಹನ ಪ್ರಿಯರಿಗೆ ಶಾಕ್| ಜೂನ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!

ನವದೆಹಲಿ: ಭಾರತದ ಪ್ರಮುಖ ಮತ್ತು ಅತ್ಯಂತ ಜನಪ್ರಿಯ ವಾಹನ ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿತನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ಜೂನ್ ತಿಂಗಳಿನಿಂದ ಅನ್ವಯವಾಗುವಂತೆ ತನ್ನೆಲ್ಲಾ ಕಾರುಗಳ ಮಾದರಿಗಳ ಬೆಲೆಯನ್ನು 30 ಸಾವಿರ ರೂ. ವರೆಗೆ ಹೆಚ್ಚಿಸುವುದಾಗಿ ಸಂಸ್ಥೆಯು ಅಧಿಕೃತವಾಗಿ ಪ್ರಕಟಿಸಿದೆ. ವಾಹನ ತಯಾರಿಕೆಗೆ ಬಳಸಲಾಗುವ ಕಚ್ಚಾ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾರುತಿ ಸುಜುಕಿ ಸಂಸ್ಥೆಯು ಮುಂಬೈನ ರಾಷ್ಟ್ರೀಯ ಷೇರು …

Read More »

ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ಬೆಳಗಾವಿ: ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲಿಗೆ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ ಅವರು, ಈ ಹೊಸ ರೈಲು ಸೇವೆಯಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಲಿದ್ದು, ಪರಸ್ಪರ ಆರ್ಥಿಕ ಬಲವರ್ಧನೆಗೂ ಸಹಕಾರಿಯಾಗುವುದರೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು …

Read More »

ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ಪಿರೀಟ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ

ಬೆಳಗಾವಿ:  ಟ್ಯಾಂಕರ್ ನಲ್ಲಿ ಅಕ್ರಮವಾಗಿ ಸ್ವೀರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ವಶಕ್ಕೆ ಪಡೆಯಲಾಗಿದೆ. ಟ್ಯಾಂಕರ್ ನಲ್ಲಿ 14,000.ಲೀ ಸ್ವೀರಿಟ್ ಅಕ್ರಮವಾಗಿ ಮಾರಾಟಕ್ಕಾಗಿ ಸಾಗಾಣಿಕೆ ಮಾಡಲಾಗುತಿತ್ತು. ಟ್ಯಾಂಕರ್ ಚಾಲಕ ಸಿದ್ದರಾಜು ಪುಟ್ಟಸ್ವಾಮಿ ಶೆಟ್ಟಿ (47) ವಿರುದ್ಧ ಬಿಎನ್ಎಸ್‌ಎಸ್ ಕಾಯ್ದೆ 2023ರ ಕಲಂ 35(3)ರನ್ವಯ ಮುಂದಿನ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ …

Read More »