Breaking News

Daily Archives: ಮೇ 21, 2026

ಎಲ್ ಕೆಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: 15 ಸಾವಿರ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: • ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. • ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 …

Read More »

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಗೆ ನಮ್ಮ ಸಹಮತ ಇದೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಯಾರದೇ ಅಪ್ಪಣೆಯ ಅವಶ್ಯಕತೆಯಿಲ್ಲ. ನಮ್ಮ ನಾಡಿನಲ್ಲಿ ” ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿ ಪಾಸು ಮಾಡಬೇಕೆಂಬ ಕನ್ನಡ ಸಂಘಟನೆಗಳ ಒತ್ತಾಯಕ್ಕೆ ಸಹಮತವಿದೆ. ಈ ಕುರಿತು ಚರ್ಚಿಸಲು ಶೀಘ್ರವೇ ಮಹಾಪೌರರು, ಉಪಮಾಹಾಪೌರರು ಮತ್ತು ಕನ್ನಡ ಸಂಘಟನೆಗಳ ಸಭೆ ಕರೆಯುವುದಾಗಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ. ಮಂಗಳವಾರ ಸಂಜೆ ಗೋಕಾಕ ನಗರದಲ್ಲಿ ಜಯಕರ್ನಾಟಕ …

Read More »

ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಮಾರಕ: ಡಾ.ಕರ್ನಲ್ ದಯಾನಂದ

ಬೆಳಗಾವಿ: ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆಯನ್ನುಂಟು ಮಾಡುವ ನಿಧಾನ ಕೊಲೆಗಾರನಾಗಿದ್ದು, ಹೃದಯ, ಮೆದುಳು, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿನ ಜನರು ಹೆಚ್ಚಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಜನರು ಚಿಕಿತ್ಸೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದವರು ತಮಗೆ ರಕ್ತದೊತ್ತಡ ಇದೆ ಎಂಬುದನ್ನೇ ಅರಿತುಕೊಂಡಿಲ್ಲ ಎಂದು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ …

Read More »

ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ …

Read More »

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಸಚಿವ ಮಧು ಬಂಗಾರಪ್ಪ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ

ಶಿವಮೊಗ್ಗ: ಮಧ್ಯ ಕರ್ನಾಟಕ ಭಾಗದ ಜನರ ಬಹುಕಾಲದ ಬೇಡಿಕೆಯಾದ ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗದ ಹಿರಿಯ ವಕೀಲರ ನಿಯೋಗವು ಸಿಎಂ ಸಿದ್ದರಾಮಯ್ಯ  ಅವರಿಗೆ ಮನವಿ ಸಲ್ಲಿಸಿದೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ `ಕೃಷ್ಣಾ’ದಲ್ಲಿ ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಂಚಾರಿ ಪೀಠದ ಅಗತ್ಯತೆಯ ಕುರಿತು ಸುದೀರ್ಘ …

Read More »

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ, ರಾಜ್ಯದಲ್ಲಿ ಎಸ್‌ಐಆರ್ ವಿಚಾರ – ಬೆಂಗಳೂರಿಗೆ ಕೇಂದ್ರದ ವೀಕ್ಷಕರ ಮೊದಲ ತಂಡ ಆಗಮನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ  ಆಯ್ಕೆ ಮತ್ತು ರಾಜ್ಯದಲ್ಲಿ ಎಸ್‌ಐಆರ್ ವಿಚಾರ ಸಂಬಂಧ ಬೆಂಗಳೂರಿಗೆ ಕೇಂದ್ರದ ವೀಕ್ಷಕರ ಮೊದಲ ತಂಡ ಆಗಮಿಸಿದೆ. ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್ ಬೆಂಗಳೂರಿಗ ಆಗಮಿಸಿದ್ದು, ಗುರುವಾರ ದಿನವಿಡೀ ರಾಜ್ಯ ಬಿಜೆಪಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹಾಗೆಯೇ ಎಸ್‌ಐಆರ್ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರ ಜೊತೆ ಸಭೆ …

Read More »

ತುಮಕೂರಿನ ಚರಿತ್ರೆ ಅಳಿಸಿ ಹಾಕಲು ಹೊರಟಿದ್ದಾರೆ, ಇದರ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾ ಇದೆ: ಸುರೇಶ್ ಗೌಡ

ತುಮಕೂರು: ತುಂಬೆ ಊರನ್ನು, ತುಮಕೂರಿನ ಚರಿತ್ರೆ ಅಳಿಸಿ ಹಾಕಲು ಹೊರಟಿದ್ದಾರೆ. ಇದರ ಹಿಂದೆ ರಿಯಲ್ ಎಸ್ಟೇಟ್  ಮಾಫಿಯಾ ಇದೆ ಎಂದು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ  ಕಿಡಿಕಾರಿದ್ದಾರೆ. ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ  ಎಂದು ಘೋಷಣೆ ಮಾಡುವ ವಿಚಾರದ ಕುರಿತು ಹೆಸರು ಬದಲಾವಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಮಕೂರನ್ನು ಬೆಂಗಳೂರು ಉತ್ತರ ಎಂದು ಘೋಷಣೆ ಮಾಡಲು ಜಿ.ಪರಮೇಶ್ವರ್ ಕೇಳಿಕೊಂಡಿದ್ದಾರೆ. ಕಾಂಗ್ರೆಸ್ …

Read More »

ದೇಶಾದ್ಯಂತ ಇ-ಬಸ್‌, ಇ-ಟ್ರಕ್‌ ಬಳಕೆಗೆ ವೇಗ – ಬ್ಯಾಂಕ್‌, ಖಾಸಗಿ ಪಾಲುದಾರರ ಜೊತೆ ಹೆಚ್‌ಡಿಕೆ ಸಭೆ

ನವದೆಹಲಿ: ಭಾರತದ ಸರಕು ಸಾಗಣೆ ಕ್ಷೇತ್ರದಲ್ಲಿ ಮಾಲಿನ್ಯಮುಕ್ತ ಸ್ವಚ್ಚ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ  ಅವರು ಬ್ಯಾಂಕರುಗಳು ಹಾಗೂ ಖಾಸಗಿ ವಲಯದ ವಾಣಿಜ್ಯ ವಾಹನಗಳ ಆಪರೇಟರ್‌ʼಗಳ ಜತೆ ಉನ್ನತ ಮಟ್ಟದ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ  ಅವರ ಮಹತ್ವಾಕಾಂಕ್ಷೆಯ ಪಿಎಂ ಇ ಡ್ರೈವ್‌  ಯೋಜನೆಯ ಮೂಲಕ ಎಲೆಕ್ಟ್ರಿಕ್ ಸರಕು ಸಾಗಣೆ ಹಾಗೂ ಪ್ರಯಾಣಿಕರ …

Read More »

ಮಾಯಾವತಿ ಭೇಟಿಗೆ ಹೋದ ಕೈ ನಾಯಕರಿಗೆ ಮುಖಭಂಗ – ಮನೆಯ ಗೇಟ್‌ನಿಂದಲೇ ವಾಪಸ್

ನವದೆಹಲಿ: ಉತ್ತರ ಪ್ರದೇಶ ರಾಜಕೀಯದಲ್ಲಿ ಇಂದು ಅತ್ಯಂತ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಬಹುಜನ ಸಮಾಜ ಪಕ್ಷದ  ನಾಯಕಿ ಮಾಯಾವತಿ  ಅವರನ್ನು ಭೇಟಿಯಾಗಲು ಲಕ್ನೋದ ಅವರ ನಿವಾಸಕ್ಕೆ ತೆರಳಿದ್ದ ಕಾಂಗ್ರೆಸ್‌ನ ಪ್ರಭಾವಿ ದಲಿತ  ನಾಯಕರ ನಿಯೋಗಕ್ಕೆ ಭಾರಿ ಮುಖಭಂಗವಾಗಿದ್ದು ಭೇಟಿ ಸಿಗದೇ ಮನೆಯ ಗೇಟ್‌ನಿಂದಲೇ ವಾಪಸ್ ಬಂದಿದ್ದಾರೆ. 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ  ಇನ್ನು ಕೇವಲ ಒಂದು ವರ್ಷ ಬಾಕಿ ಇರುವಾಗ ನಡೆದಿರುವ ಈ ‘ದಿಢೀರ್’ ಭೇಟಿಯ ರಾಜಕೀಯ ವಲಯದಲ್ಲಿ …

Read More »

ಮಾಜಿ ಪ್ರಧಾನಿ ಹೆಚ್‌ಡಿಡಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್

ಬೆಂಗಳೂರು: ಗೋವಾ ಸಿಎಂ ಪ್ರಮೋದ್ ಸಾವಂತ್  ಅವರಿಂದು (ಮೇ 20) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ, ಹುಟ್ಟುಹಬ್ಬದ ಶುಭ ಕೋರಿದ್ದಾರೆ.

Read More »