ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಲೆ ಹಾಗೂ ಅಂಗನವಾಡಿಗಳ ಒಳ, ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿ ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥ ಗುಣಮಟ್ಟ …
Read More »Daily Archives: ಮೇ 28, 2026
ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ …
Read More »ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್ಗೆ ಒತ್ತಾಯ
ಬಾಗಲಕೋಟೆ: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್ಗೆ ಒತ್ತಾಯಿಸಿದ್ದಾರೆ. ನಾಳೆ ಎಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ. ಮುಸ್ಲಿಂ …
Read More »ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ ಅಧಿಕಾರ ರಾಜಕೀಯ ಈ ನಿರ್ಗಮನದೊಂದಿಗೆ ಕೊನೆಗೊಳ್ತಿದೆ. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಿರುಸಿನ ವಿದ್ಯಮಾನಗಳು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿವೆ. ಮೊದಲೇ ನಿರ್ಣಯಿಸಿದಂತೆ ಇಂದು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ …
Read More »ಪ್ರೇಯಸಿ ಮನೆಗೆ ಹೋಗಿ ಪತಿಗೆ ಸಿಕ್ಕಿಬಿದ್ದ ಯುವಕನ ಬರ್ಬರ ಹತ್ಯೆ
ಬೆಂಗಳೂರು: ಪ್ರೇಯಸಿ ಮನೆಗೆ ಹೋಗಿ ಪತಿಗೆ ಸಿಕ್ಕಿಬಿದ್ದು ಆಕೆಯ ಪತಿ ಹಾಗೂ ಕುಟುಂಬಸ್ಥರಿಂದ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿದ ಘಟನೆ ಬ್ಯಾಟರಾಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ಯಾಮಣ್ಣ ಗಾರ್ಡನ್‌ನಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ (27) ಕೊಲೆಯಾದ ಯುವಕ. ಮಾಜಿ ಪ್ರೇಯಸಿ ಮೇ 25 ರಂದು ಕರೆ ಮಾಡಿದ್ದ ಹಿನ್ನಲೆ ಯುವಕ ಮನೆಗೆ ಹೋಗಿದ್ದ. ಈ ವೇಳೆ ಪತಿ ಹಾಗೂ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಈ ವೇಳೆ …
Read More »ಅಪ್ಪಾಜಿ ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ – ಸಿಎಂ ಮುಂದೆ ಕಣ್ಣೀರಿಟ್ಟ ನೌಕರರು
ಬೆಂಗಳೂರು: ಸಿದ್ದರಾಮಯ್ಯ ಅವರು ಮೇ 28 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ವಿಧಾನಸೌಧದಲ್ಲಿದ್ದ ಆಡ್ಮಿನ್ ವಿಭಾಗದ ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ. ಅಪ್ಪಾಜಿ ಅಪ್ಪಾಜಿ.. ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ ಎಂದು ಕೆಲ ನೌಕರರು ಗೋಳಾಡಿದ್ದಾರೆ. ನಿಮ್ಮ ಹೆಸರು ಹೇಳಿಕೊಂಡು ಬದುಕುತ್ತಿದ್ದೇವು ಎಂದು ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಕಣ್ಣೀರಿಟ್ಟಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ವಿಷಲ್ ಹೊಡೆದುಕೊಂಡು ಅಲ್ಲಿಂದ ತೆರಳಿದ್ದಾರೆ. …
Read More »ದೆಹಲಿಯಿಂದ ಬೆಂಗ್ಳೂರಿಗೆ ಡಿಕೆಶಿ ವಾಪಸ್ – ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಲ್ಲಿ ಪ್ರಯಾಣ
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದರು. ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ಕಾರಲ್ಲಿ ಮನೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಏನೂ ಮಾತಾಡದೇ, ಅಭಿಮಾನಿಗಳತ್ತ ಕೈಬೀಸಿ ಅಲ್ಲಿಂದ ತೆರಳಿದ್ದಾರೆ. ಮೇ 28 ರಂದು ಅವರು ಬೆಂಗಳೂರಿಗೆ ಬರುತ್ತಾರೆ ಎನ್ನಲಾಗಿತ್ತು. ಆದರೆ ಒಂದು ದಿನ ಮುಂಚೆಯೇ ಅವರು ಆಗಮಿಸಿದ್ದಾರೆ. ಅವರ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಸೇರುವ ನಿರೀಕ್ಷೆ ಇದ್ದಿದ್ದರಿಂದ ಏರ್ಪೋರ್ಟ್‌ನಲ್ಲಿ ಭಾರೀ …
Read More »ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ: ಆಸೀಫ್ ಸೇಠ್
ಬೆಳಗಾವಿ: ಉತ್ತರ ಕರ್ನಾಟಕದಿಂದ ಅಲ್ಪಸಂಖ್ಯಾತರು ಯಾರೂ ಸಚಿವರು ಆಗಿಲ್ಲ. ನನಗೆ ಸ್ಥಾನ ಕೊಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಅಲ್ಪಸಂಖ್ಯಾತ ಕೋಟಾದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಆಸೀಫ್ ಸೇಠ್ ಬೇಡಿಕೆ ಇಟ್ಟರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬರೀ ಅಲ್ಪಸಂಖ್ಯಾತ ಇಲ್ಲಾ. ಇಲ್ಲಿವರೆಗೆ ಬೆಳಗಾವಿಗೆ ಅಲ್ಪಸಂಖ್ಯಾತರ ನಾಯಕರಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ನನಗೆ ಸ್ಥಾನ ನೀಡಬೇಕು ಎಂದು ತಿಳಿಸಿದರು. …
Read More »ನಗರವಾಸಿಗಳೇ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಪಾಲ್ಗೊಳ್ಳಿ : ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಕರೆ
ಬೆಳಗಾವಿ : ಭಾರತ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ದಿಸೆಯಲ್ಲಿ ಹಮ್ಮಿಕೊಂಡಿರುವ “ಸ್ವಚ್ಛ ಸರ್ವೇಕ್ಷಣ ಅಭಿಯಾನ”ದಲ್ಲಿ ನಗರವಾಸಿಗಳೆಲ್ಲರೂ ಪಾಲ್ಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ.ಅವರು ಕರೆ ನೀಡಿದ್ದಾರೆ. ಬುಧವಾರ ಈ ಕುರಿತು ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಭಾರತ ಸರ್ಕಾರವು 2016 ರಿಂದ ” ಸ್ವಚ್ಛ ಭಾರತ್ ಮಿಷನ್ ” ಆರಂಭಿಸಿದ್ದು, ನಗರವಾಸಿಗಳ ಅಭಿಪ್ರಾಯಕ್ಕನುಗುಣವಾಗಿ ಉತ್ತಮ ಪರಿಸರಪೂರಿತ ವಾತಾವರಣ …
Read More »ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ: ಜಿಲ್ಲಾ ಸಲಹಾ ಸಮಿತಿ ಸಭೆ ನಡೆಸಿದ ಡಿಎಚ್‌ಓ
ಬೆಳಗಾವಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ 1994 (ಪಿ.ಸಿ.ಪಿ.ಎನ್.ಡಿ.ಟಿ 1994 ಕಾಯ್ದೆ) ನೂತನ ಜಿಲ್ಲಾ ಸಲಹಾ ಸಮಿತಿ ಸಭೆ ಇಂದು ಜರುಗಿತು. ಸಕಾರದ ಉಪ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಮುಂದಿನ 3 ವರ್ಷಗಳ ಅವಧಿಗೆ ಬೆಳಗಾವಿ ಜಿಲ್ಲಾ ಮಟ್ಟದ ನೂತನ ಸಲಹಾ ಸಮಿತಿಯ ಸಭೆಯನ್ನು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ …
Read More »
Laxmi News 24×7