ಬೆಳಗಾವಿ : ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್ ಇನ್ನು ಮುಂದೆ ಅಧಃಪತನಕ್ಕೆ ಹೋಗುತ್ತದೆ. ಸಿದ್ದರಾಮಯ್ಯನವರ ಈಗಿನ ಕಣ್ಣೀರು 2028ಕ್ಕೆ ಜ್ವಾಲಾಮುಖಿಯಾಗಿ ಸ್ಪೋಟಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ವರ್ಷ ಸಿದ್ದರಾಮಯ್ಯ ಆರ್ಥಿಕ ಪರಿಸ್ಥಿತಿಯನ್ನು ಯಾರಿಗೂ ಸಮಸ್ಯೆಯಾಗದಂತೆ ನಿಭಾಯಿಸಿದ್ದಾರೆ. ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಸಿದ್ದರಾಮಯ್ಯ ಇದ್ದಿದ್ದರಿಂದ ಯಾವುದೇ ಸಮಸ್ಯೆ ಇಲ್ಲದಂತೆ ಜಾರಿಯಾಗಿದ್ದವು. …
Read More »Daily Archives: ಮೇ 29, 2026
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ.
Read More »ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಐವರು ದುರ್ಮರಣ
ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ. ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ ಮೃತಪಟ್ಟವರು.ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸ್ತಿದ್ದು, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗದಿಂದಾಗಿ ಕಾರಿನ ಟೈಯರ್ ಸ್ಫೋಟಗೊಂಡ …
Read More »ಟ್ರೇಡಿಂಗ್ ಹೆಸರಿನಲ್ಲಿ ರೈತನಿಗೆ 9.91 ಲಕ್ಷ ರೂ. ವಂಚನೆ – ಕೇಸ್ ದಾಖಲು
ಶಿವಮೊಗ್ಗ: ಷೇರು ಮಾರುಕಟ್ಟೆ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ, ಕೃಷಿಕರೊಬ್ಬರಿಂದ 9.91 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಕಳೆದ ಮಾರ್ಚ್‌ನಲ್ಲಿ ವಾಟ್ಸಪ್ ನೋಡುತ್ತಿದ್ದಾಗ, ಅಪರಿಚಿತರು ಇವರ ಮೊಬೈಲ್ ಸಂಖ್ಯೆಯನ್ನು ವಿಐಪಿ ಹೆಸರಿನ ವಾಟ್ಸಪ್ ಗ್ರೂಪ್‌ವೊಂದಕ್ಕೆ ಸೇರಿಸಿದ್ದರು. ಆ ಗ್ರೂಪ್‌ನಲ್ಲಿ ಟ್ರೇಡಿಂಗ್ ಕಂಪನಿಯೊಂದರ ಹೆಸರಿನಲ್ಲಿ ಮೆಸೇಜ್‌ಗಳನ್ನು ಕಳುಹಿಸಲಾಗಿತ್ತು. ಕಂಪನಿಯ ಪ್ರತಿನಿಧಿಗಳಂತೆ ನಟಿಸಿದ ವಂಚಕರು, ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಅತಿಹೆಚ್ಚು …
Read More »ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ
ಹಾಸನ: ಜಿಲ್ಲೆಯ ವಿವಿಧೆಡೆ ಇಂದು ಕೂಡ ಬಾರಿ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ತಾಲ್ಲೂಕಿನ ವಿವಿಧೆಡೆ ವರುಣ ಅಬ್ಬರಿಸಿದ್ದು, ಗುಡುಗು, ಸಿಡಿಲು ಸಹಿತ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಮಳೆಗೆ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಪರದಾಡುವಂತಾಗಿತ್ತು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಕೃಷಿ …
Read More »ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?
ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಿದ್ದಂತೆ, ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶುಕ್ರವಾರ (ಮೇ 29) ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯಪಾಲರು ಕಾರ್ಯದ ಒತ್ತಡದಲ್ಲಿದ್ದಾರೆ. ಶುಕ್ರವಾರ ಸಂಜೆಯೊಳಗೆ ರಾಜೀನಾಮೆ ಅಂಗೀಕಾರವಾಗಬೇಕಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಗಳಿದೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ …
Read More »ನಮ್ಮ ಆಸೆ, ಅಭಿಲಾಷೆಯನ್ನ ಭಗವಂತ ಈಡೇರಿಸುತ್ತಿದ್ದಾನೆ: ಇಕ್ಬಾಲ್ ಹುಸೇನ್
ರಾಮನಗರ: ನಮ್ಮ ಆಸೆ, ಅಭಿಲಾಷೆಯನ್ನ ಭಗವಂತ ಈಡೇರಿಸುತ್ತಿದ್ದಾನೆ, ಪ್ರಾರ್ಥನೆ ನೆರವೇರುವ ಕಾಲ ಬಂದಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ) ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ವಿಚಾರ ಕುರಿತು ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರಿಗೂ ಆಸೆ ಇರುತ್ತದೆ, ನನಗೂ ಆಸೆ, ಅಭಿಲಾಷೆ ಇದೆ. ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಮುಖಂಡರುಗಳಿಗೂ ಒಂದು ಆಸೆ ಇತ್ತು. ಆ ಆಸೆಯನ್ನ ಭಗವಂತ ಈಡೇರಿಸುತ್ತಿದ್ದಾನೆ. ನಾನು ಮೌನ …
Read More »ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ಲ್ಯಾಂಡಿಂಗ್
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಲ್ಯಾಂಡ್ ಆಗಿದೆ. ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಸುದ್ದಿಗೋಷ್ಠಿ ನಡೆಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟಿದ್ದರು. ಆದರೆ ದೆಹಲಿಯಲ್ಲಿ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಜೈಪುರಕ್ಕೆ ಮಾರ್ಗ ಬದಲಿಸಲಾಯಿತು. ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು …
Read More »ತೆರಿಗೆ ವಂಚನೆ ಪ್ರಕರಣ – 2 ವರ್ಷ ವಿದೇಶಿ ಪ್ರವಾಸಕ್ಕೆ ತೆರಳಲು ಡಿಕೆಶಿಗೆ ಕೋರ್ಟ್ ಅನುಮತಿ
ಬೆಂಗಳೂರು: ತೆರಿಗೆ ವಂಚನೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ವಿಧಿಸಿದ್ದ ಜಾಮೀನು ಷರತ್ತಿನಲ್ಲಿ ಸಡಿಲಿಕೆ ಮಾಡಿರುವ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್ ಕೋರ್ಟ್ 2 ವರ್ಷ ವಿದೇಶ ಪ್ರವಾಸ ಕೈಗೊಳ್ಳಲು ಇತ್ತೀಚೆಗೆ ಅನುಮತಿ ನೀಡಿದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೆ.ಎನ್ ಶಿವಕುಮಾರ್ ಅವರು ವಿವಿಧ ದೇಶಗಳಿಗೆ ಅಧಿಕೃತ ಉದ್ಯಮ ಪ್ರವಾಸ ಕೈಗೊಳ್ಳಲು ಕೆಲವು ಷರತ್ತು ವಿಧಿಸಿ, ಶಿವಕುಮಾರ್ ಅವರಿಗೆ ಅನುಮತಿಸಿದ್ದಾರೆ. ಪ್ರತಿ ಬಾರಿಯೂ ವಿದೇಶಕ್ಕೆ ತೆರಳುವಾಗ ಶಿವಕುಮಾರ್ ಅವರು ತಮ್ಮ …
Read More »ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಮುಂದಿನ ಚುನಾವಣೆಯಲ್ಲಿ ಪೆಟ್ಟು: ಯತ್ನಾಳ್
ವಿಜಯಪುರ: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ 2028ಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಅವರನ್ನ ಯಾವುದೆ ಕಾರಣ ಇಲ್ಲದೆ ಇಳಿಸಿದ್ದಾರೆ. ಇದರಿಂದ ಕುರುಬ ಸಮಾಜ ಕೋಪಗೊಂಡಿದೆ. ಹಾಲುಮತ ಕುರುಬ ಸಮಾಜಕ್ಕೆ ಮಾಡಿದ ಅನ್ಯಾಯ ಇದಾಗಿದೆ. ಇದರ ಎಫೆಕ್ಟ್ ಮುಂದಿನ ವಿಧಾನಸಭೆ ಚುನಾವಣೆಯ ವೇಳೆ ವಿರೋಧ ಪಕ್ಷಗಳಿಗೆ ಲಾಭ …
Read More »
Laxmi News 24×7