Breaking News

Daily Archives: ಮೇ 31, 2026

ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌

ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಲೋಕಾಯುಕ್ತ ಎಸ್ಐಟಿ ದಾಖಲಿಸಿದ್ದ ಎರಡು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್, ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್, ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧದ ಪ್ರಕರಣವನ್ನು ಕೈಬಿಟ್ಟು ಕೋರ್ಟ್‌ ಆದೇಶಿಸಿದೆ. ಬಳ್ಳಾರಿ ಉಸ್ತುವಾರಿ ಸಚಿವರಾಗಿ ಅಕ್ರಮ ಗಣಿಗಾರಿಕೆ ಪಿತೂರಿ …

Read More »

ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್

ನವದೆಹಲಿ: ಕೇಂದ್ರದ ಮೋದಿ ಕ್ಯಾಬಿನೆಟ್ ಕೂಡ ಜೂನ್ 15 ರಿಂದ 18 ರ ನಡುವೆ ಪುನಾರಚನೆ ಆಗುವ ಸಾಧ್ಯತೆ ಇದೆ. ಮುಂಬರುವ ನಿರ್ಣಾಯಕ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿ ನಾಯಕತ್ವವು ರಾಜಕೀಯ ಮತ್ತು ಸಾಂಸ್ಥಿಕ ಪುನಾರಚನೆಗೆ ಸಿದ್ಧವಾಗ್ತಿದೆ. ಹೀಗಾಗಿ, ಹಲವಾರು ರಾಜ್ಯ ಸಚಿವರು ಸೇರಿದಂತೆ 1 ಡಜನ್‌ಗೂ ಹೆಚ್ಚು ಸಚಿವರನ್ನು ಕೈಬಿಡಬಹುದು ಅಥವಾ ಬದಲಾಯಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಪುನಾರಚನೆಯು 10-12 ಸಚಿವಾಲಯಗಳಲ್ಲಿ ನಾಯಕತ್ವ ಬದಲಾವಣೆಗಳನ್ನು ಒಳಗೊಂಡಿದ್ದು, ಹಲವಾರು …

Read More »

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ

ಚಿಕ್ಕಬಳ್ಳಾಪುರ: ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಆಕೆಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಯಾರೂ ಊಹೆ ಮಾಡದ ಸಿನಿಮೀಯ ಟ್ವಿಸ್ಟ್ ಸಿಕ್ಕಿದೆ. ನಾದಿನಿಯೇ ತನ್ನ ಸಹೋದರ ಸಂಬಂಧಿಯ ಜೊತೆ ಸೇರಿ ಅಣ್ಣನ ಹೆಂಡತಿಯನ್ನ ಕೊಂದಿರೋದು ಪೊಲೀಸರ  ತನಿಖೆಯಲ್ಲಿ ಬಯಲಾಗಿದೆ. ನಗರದ ಬಾಪೂಜಿ ನಗರದ ನರಸಿಂಹಮೂರ್ತಿಯವರ ಮನೆಯಲ್ಲಿ ಮೇ 28 ರಂದು ಆತನ ಸೊಸೆ ಪುಷ್ಪಲತಾಳನ್ನ (23) ಕತ್ತು ಕೊಯ್ದು ಕೊಲೆ ಮಾಡಿದಂತೆ ಶವ ಪತ್ತೆಯಾಗಿತ್ತು. ಪುಷ್ಪಲತಾಳ …

Read More »

ಕಾರವಾರ: ಜೂನ್ 1ರಿಂದ ಕರಾವಳಿಯಲ್ಲಿ 61 ದಿನಗಳ ಕಾಲ ಮೀನುಗಾರಿಕೆ ಸಂಪೂರ್ಣ ನಿಷೇಧ

ಕಾರವಾರ: ಮುಂಗಾರು ಮಳೆ ಹಾಗೂ ಮೀನುಗಳ ಸಂತಾನೋತ್ಪತ್ತಿಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮೀನುಗಾರಿಕೆ ಇಲಾಖೆ ಆದೇಶ ಹೊರಡಿಸಿದೆ. ದೇಶದ ಕರಾವಳಿ ಭಾಗದಲ್ಲಿ ಮಳೆಗಾಲದ ಅವಧಿಯನ್ನು ಮೀನುಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜಲಚರಗಳ ರಕ್ಷಣೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ನಿರ್ಬಂಧ ಹೇರಲಾಗಿದೆ. …

Read More »

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು

ರಾಯಚೂರು: ಮಂತ್ರಾಲಯದ  ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22)ನೀರುಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂಜೆಯ ಬಳಿಕ ನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೇ ಈಜಲು …

Read More »