Breaking News

Monthly Archives: ಮೇ 2026

ಬೆಳಗಾವಿ: ಹೋಟೆಲ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಗ್ರಾಮೀಣ ಪೊಲೀಸರ ಭರ್ಜರಿ ದಾಳಿ; ಪ್ರಕರಣ ದಾಖಲು!

ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾವಗಾಂವ್ ರಸ್ತೆಯ ಹೊಟೇಲ್ ಒಂದರ ಮೇಲೆ ಪಿಎಸ್‌ಐ ನೇತೃತ್ವದ ತಂಡ ಸಿನೆಮಾ ಶೈಲಿಯಲ್ಲಿ ದಾಳಿ ನಡೆಸಿ, ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಬೆಳಗಾವಿಯ ಸಾವಗಾಂವ್ ಅಂಗಡಿ ಕಾಲೇಜ್ ಹತ್ತಿರವಿರುವ ಸನ್‌ಫ್ಲಾವರ್ ಹೋಟೆಲ್‌ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮದ್ಯ ಸೇವನೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆಯ ಪಿಎಸ್‌ಐ …

Read More »

4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಕೆ

ಬೆಳಗಾವಿ: 4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಅವರ ಪರ ವಕೀಲ ಆರ್.ಪಿ. ಪಾಟೀಲ್ ತಿಳಿಸಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನು ಅರ್ಜಿ ವಿಚಾರಣೆ ಜೂನ್ 1ರಂದು ನಡೆಯಲಿದ್ದು, ನ್ಯಾಯಾಲಯವು ನೀಲಣ್ಣವರ್ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹೇಳಿದರು. ಇಲ್ಲಿಯವರೆಗೆ ನೀಲಣ್ಣವರ್ ವಿರುದ್ಧ ಯಾರೂ ನೇರವಾಗಿ ದೂರು ನೀಡಿಲ್ಲ. ಕಾಗವಾಡದಲ್ಲಿ ಒಬ್ಬರು …

Read More »

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ಗೋಕಾಕ :- ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ ಇಲಾಖೆಯಿಂದ ಗೋಕಾಕ ತಾಲ್ಲೂಕಿನ ರೈತರಿಗೆ ಸಹಾಯ ಧನದಡಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮಕ್ಕೆ ಮಾನ್ಯ ಶ್ರೀ ರಮೇಶ.ಲ.ಜಾರಕಿಹೊಳಿ ಶಾಸಕರು- ಗೋಕಾಕ ಇವರು ಚಾಲನೆ ನೀಡಿದರು. ಮಂಗಳವಾರದಂದು ತಮ್ಮ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ವಿತರಣೆ ಮಾಡಲಾಗುವ ಬಿತ್ತನೆ ಬೀಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರೈತರು ಬೀಜೋಪಚಾರ …

Read More »

ಅನ್ಯಾಯ ಮಾಡಲು ಬಂದರೆ ಮೆಟ್ಟಿನಿಂದ ಹೊಡೆಯುವೆ: ಶಾಸಕ ಲಕ್ಷ್ಮಣ್ ಸವದಿ

ಚಿಕ್ಕೋಡಿ: “ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ” ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ ಗ್ರಾಮದಲ್ಲಿ ಶನಿವಾರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ವೈಯಕ್ತಿಕ ಟೀಕೆಗಳಿಗೆ ತಿರುಗೇಟು ನೀಡಿ ಮಾತನಾಡುತ್ತಾ, “ಲಕ್ಷ್ಮಣ್ ಸವದಿಯನ್ನು ಟ್ರ್ಯಾಕ್ಟರ್ ಹೊಡೆಯಲು ಕಳಿಸುತ್ತೇವೆ ಎಂದು ಕೆಲವರು …

Read More »

ಕೊಯಮತ್ತೂರು ಬಾಲಕಿಯ ಹತ್ಯೆ ಪ್ರಕರಣ ಪ್ರಕರಣದ ವರದಿಯ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶಕ್ಕೆ ಕಾರಣವಾದ ಪೊಲೀಸರ ನಗೆ

ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಹಲ್ಲೆ* ನಡೆಸಿ ಕೊ* ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಪ್ರಕರಣ ದೇಶಾದ್ಯಂತ ಜನರನ್ನು ಬೆಚ್ಚಿಬೀಳಿಸಿದೆ. ಆದರೆ ದುಃಖ ಮತ್ತು ನ್ಯಾಯಕ್ಕಾಗಿ ಬೇಡಿಕೆಗಳ ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಪತ್ರಿಕಾಗೋಷ್ಠಿಯು ಮಾಧ್ಯಮಗೋಷ್ಠಿಯ ಸಮಯದಲ್ಲಿ ಅಧಿಕಾರಿಗಳು ನಗುತ್ತಿರುವುದನ್ನು ನೋಡಿ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಬಲಿಪಶುವಾದ ಮಗುವನ್ನು ಒಳಗೊಂಡ ಅಪರಾಧದ ಬಗ್ಗೆ ಚರ್ಚಿಸುವಾಗ ಪ್ರದರ್ಶಿಸಲಾದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಪ್ರಶ್ನಿಸಿದ್ದಾರೆ.

Read More »

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರೈತರ ಸಾಲ ಮನ್ನಾ ಘೋಷಿಸಿದ ತ.ನಾಡು CM ವಿಜಯ್

ಚನ್ನೈ: ತಮಿಳುನಾಡಿನ ಸಣ್ಣ ಮತ್ತು ಅತಿ ಸಣ್ಣ ರೈತರು ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿದ್ದ ₹50,000ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಸೋಮವಾರ ಘೋಷಿಸಿದೆ. ಈ ಮೂಲಕ ವಿಧಾನಸಭಾ ಚುನಾವಣೆ ವೇಳೆ ಟಿವಿಕೆ ಪಕ್ಷ ನೀಡಿದ್ದ ಪ್ರಮುಖ ಭರವಸೆಗಳಲ್ಲೊಂದನ್ನು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಈಡೇರಿಸಿದ್ದಾರೆ. ಜತೆಗೆ ಇತರೆ ರೈತರಿಗೆ ತಲಾ ₹5,000ವರೆಗಿನ ಸಾಲ ಮನ್ನಾ ಸೌಲಭ್ಯವನ್ನು ಪ್ರಕಟಿಸಲಾಗಿದೆ. ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ರಾಜ್ಯದ ಸುಮಾರು …

Read More »

ಮಂತ್ರಾಲಯಕ್ಕೆ ಹೋಗೋ ಭಕ್ತರ ಗಮನಕ್ಕೆ, ಕರ್ನಾಟಕದ ಛತ್ರದಲ್ಲಿ ಬತ್ತಿದ ಬೋರ್‌ವೆಲ್, ನೀರಿನ ಅಭಾವಕ್ಕೆ ವಸತಿಗೃಹ ಬಂದ್!

ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರಿಗೆ ವಸತಿ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಸುಸಜ್ಜಿತ ಕರ್ನಾಟಕ ಛತ್ರವನ್ನು (ವಸತಿ ಗೃಹ) ನಿರ್ಮಿಸಲಾಗಿದೆ. ರಾಯರ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಒಟ್ಟು 50 ಕೋಣೆಗಳ (ರೂಂ) ವ್ಯವಸ್ಥೆ ಇದೆ. ಆದರೆ, ಪ್ರಸ್ತುತ ಈ ವಸತಿ ಗೃಹದಲ್ಲಿ ತೀವ್ರ ಸ್ವರೂಪದ ನೀರಿನ ಅಭಾವ ತಲೆದೋರಿದೆ. ಛತ್ರದ ಆವರಣದಲ್ಲಿರುವ 50 ರೂಂಗಳಿಗೆ ನೀರು ಸರಬರಾಜು ಮಾಡಲು ಎರಡು …

Read More »

ಕೂಲಿ ಕಾರ್ಮಿಕರಿಗೆ ಇ ಕೆವೈಸಿ ಕಡ್ಡಾಯ ; ಸಂಗೂರ ಗ್ರಾಮದಲ್ಲಿ ತಾಪಂ ಇಒ ಡಾ.ಪರಮೇಶ ಹುಬ್ಬಳ್ಳಿ

ಹಾವೇರಿ: ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿಗಳ ಸೃಜನೆ ಮಾಡಲಾಗುತ್ತಿದೆ. ಎಲ್ಲ ಕೂಲಿಕಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ ಎಂದು ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪರಮೇಶ ಹುಬ್ಬಳ್ಳಿ ಕರೆ ನೀಡಿದರು ತಾಲೂಕಿನ ಸಂಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಪನಕಟ್ಟಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ, ರೋಜ್‌ಗಾರ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನರೇಗಾ ಯೋಜನೆಯಿಂದ …

Read More »

ರಾಮದುರ್ಗದಲ್ಲಿ ₹15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮ ಪಂಚಾಯತಿ ಅಧಿಕಾರಿ..!

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ತಾಂಡವ ಮಿತಿಮೀರಿ ನಡೆಯುತ್ತಿದೆ ಅದಕ್ಕೆ ಸಾಕ್ಷಿ ಎಂಬಂತೆ ಬೆಳಗಾವಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗ್ರಾಮ ಪಂಚಾಯತಿ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪೂರ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ. ಆಸ್ತಿ ರಜಿಸ್ಟರ್‌ನಲ್ಲಿ ಮನೆ, ಅಂಗಡಿ ಹಾಗೂ ಪಕ್ಕದ ಖಾಲಿ ಜಾಗವನ್ನು ನಮೂದಿಸಲು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ …

Read More »

ಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಾಳಗದ ನಡುವೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದ್ದಾರೆ. ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದು, ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆ ಗೊಂದಲ, ನಾಯಕರ ಹೇಳಿಕೆಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬೆಳವಣಿಗೆ …

Read More »