Breaking News

Monthly Archives: ಮೇ 2026

ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌

ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಲೋಕಾಯುಕ್ತ ಎಸ್ಐಟಿ ದಾಖಲಿಸಿದ್ದ ಎರಡು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್, ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್, ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧದ ಪ್ರಕರಣವನ್ನು ಕೈಬಿಟ್ಟು ಕೋರ್ಟ್‌ ಆದೇಶಿಸಿದೆ. ಬಳ್ಳಾರಿ ಉಸ್ತುವಾರಿ ಸಚಿವರಾಗಿ ಅಕ್ರಮ ಗಣಿಗಾರಿಕೆ ಪಿತೂರಿ …

Read More »

ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್

ನವದೆಹಲಿ: ಕೇಂದ್ರದ ಮೋದಿ ಕ್ಯಾಬಿನೆಟ್ ಕೂಡ ಜೂನ್ 15 ರಿಂದ 18 ರ ನಡುವೆ ಪುನಾರಚನೆ ಆಗುವ ಸಾಧ್ಯತೆ ಇದೆ. ಮುಂಬರುವ ನಿರ್ಣಾಯಕ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿ ನಾಯಕತ್ವವು ರಾಜಕೀಯ ಮತ್ತು ಸಾಂಸ್ಥಿಕ ಪುನಾರಚನೆಗೆ ಸಿದ್ಧವಾಗ್ತಿದೆ. ಹೀಗಾಗಿ, ಹಲವಾರು ರಾಜ್ಯ ಸಚಿವರು ಸೇರಿದಂತೆ 1 ಡಜನ್‌ಗೂ ಹೆಚ್ಚು ಸಚಿವರನ್ನು ಕೈಬಿಡಬಹುದು ಅಥವಾ ಬದಲಾಯಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಪುನಾರಚನೆಯು 10-12 ಸಚಿವಾಲಯಗಳಲ್ಲಿ ನಾಯಕತ್ವ ಬದಲಾವಣೆಗಳನ್ನು ಒಳಗೊಂಡಿದ್ದು, ಹಲವಾರು …

Read More »

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ

ಚಿಕ್ಕಬಳ್ಳಾಪುರ: ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಆಕೆಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಯಾರೂ ಊಹೆ ಮಾಡದ ಸಿನಿಮೀಯ ಟ್ವಿಸ್ಟ್ ಸಿಕ್ಕಿದೆ. ನಾದಿನಿಯೇ ತನ್ನ ಸಹೋದರ ಸಂಬಂಧಿಯ ಜೊತೆ ಸೇರಿ ಅಣ್ಣನ ಹೆಂಡತಿಯನ್ನ ಕೊಂದಿರೋದು ಪೊಲೀಸರ  ತನಿಖೆಯಲ್ಲಿ ಬಯಲಾಗಿದೆ. ನಗರದ ಬಾಪೂಜಿ ನಗರದ ನರಸಿಂಹಮೂರ್ತಿಯವರ ಮನೆಯಲ್ಲಿ ಮೇ 28 ರಂದು ಆತನ ಸೊಸೆ ಪುಷ್ಪಲತಾಳನ್ನ (23) ಕತ್ತು ಕೊಯ್ದು ಕೊಲೆ ಮಾಡಿದಂತೆ ಶವ ಪತ್ತೆಯಾಗಿತ್ತು. ಪುಷ್ಪಲತಾಳ …

Read More »

ಕಾರವಾರ: ಜೂನ್ 1ರಿಂದ ಕರಾವಳಿಯಲ್ಲಿ 61 ದಿನಗಳ ಕಾಲ ಮೀನುಗಾರಿಕೆ ಸಂಪೂರ್ಣ ನಿಷೇಧ

ಕಾರವಾರ: ಮುಂಗಾರು ಮಳೆ ಹಾಗೂ ಮೀನುಗಳ ಸಂತಾನೋತ್ಪತ್ತಿಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮೀನುಗಾರಿಕೆ ಇಲಾಖೆ ಆದೇಶ ಹೊರಡಿಸಿದೆ. ದೇಶದ ಕರಾವಳಿ ಭಾಗದಲ್ಲಿ ಮಳೆಗಾಲದ ಅವಧಿಯನ್ನು ಮೀನುಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜಲಚರಗಳ ರಕ್ಷಣೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ನಿರ್ಬಂಧ ಹೇರಲಾಗಿದೆ. …

Read More »

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು

ರಾಯಚೂರು: ಮಂತ್ರಾಲಯದ  ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22)ನೀರುಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂಜೆಯ ಬಳಿಕ ನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೇ ಈಜಲು …

Read More »

ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ: ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ  ಗ್ರಾಮದಲ್ಲಿ ನಡೆದಿದೆ. ಸುಭಾನಿ ಬಾಬೊಜಿಕೊಪ್ಪ (12), ಮೆಹಬೂಬ ಒಟ್ನಾಳ (16), ಅನ್ವರ್ ಒಟ್ನಾಳ (14) ಸಾವನ್ನಪ್ಪಿದ ಬಾಲಕರು. ಮಧ್ಯಾಹ್ನ ಗ್ರಾಮದ ಪಕ್ಕದಲ್ಲಿ ಇರುವ ಕೆರೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಈ ವೇಳೆ ಕೆರೆಯ ಮಧ್ಯಭಾಗದಲ್ಲಿ ಹೋಗಿದ್ದ ಬಾಲಕರು ಈಜಲು ಆಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ ಮೂವರು ಬಾಲಕರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. …

Read More »

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು: ಲೋಕಭವನದ  ಗ್ಲಾಸ್‌ಹೌಸ್‌ನಲ್ಲಿ ಬುಧವಾರ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌  ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೆ.ಸಿ ಚಂದ್ರಶೇಖರ್‌ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್‌ 3 ರಂದು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆಯಲಿದೆ ಎಂದರು. ಆರಂಭದಲ್ಲಿ ಬೇರೆ ಬೇರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನ …

Read More »

ಸಿಎಲ್‌ಪಿ ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳೇನು?

ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಮುಖ ಮೂರು ನಿರ್ಣಗಳನ್ನು ಅಂಗೀಕರಿಸಲಾಯಿತು. * ಮೊದಲ ನಿರ್ಣಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೊದಲ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಹೊಸ CLP ನಾಯಕರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಣಯ ಮಂಡಿಸಿದರು. ಡಾ. ಜಿ.ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಸಭೆಯಲ್ಲಿದ್ದ ಎಲ್ಲಾ ಶಾಸಕರು ಕೈ ಎತ್ತುವ ಮೂಲಕ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದರು. * …

Read More »

ವಿಧಾನಸೌಧದ ಮುಂದೆ ಡಿಕೆಶಿ ಬೆಂಬಲಿಗರಿಂದ ‘ಡಿಕೆ..ಡಿಕೆ’ ಜಯಘೋಷ

ಬೆಂಗಳೂರು: ಸಿಎಲ್‌ಪಿ ಸಭೆ ಬಳಿಕ ಸಿದ್ದರಾಮಯ್ಯ  ಹಾಗೂ ಡಿಕೆ ಶಿವಕುಮಾರ್  ಹೊರಬಂದ ವೇಳೆ ವಿಧಾನಸೌಧದ ಬಳಿ ಡಿಕೆ ಬೆಂಬಲಿಗರು ‘ಡಿಕೆ…ಡಿಕೆ’ ಜಯಘೋಷ ಕೂಗುವ ಮೂಲಕ ಅಬ್ಬರಿಸಿದ್ದಾರೆ. ಸಿಎಲ್‌ಪಿ ಸಭೆ  ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದೇ ಕಾರಿನಲ್ಲಿ ಲೋಕಭವನಕ್ಕೆ ತೆರಳಿದ್ದಾರೆ. ಲೋಕಭವನಕ್ಕೆ ತೆರಳುವಾಗ ವಿಧಾನಸೌಧದ ಉತ್ತರ ಗೇಟ್‌ನಲ್ಲಿ ಡಿಕೆ ಬೆಂಬಲಿಗರು ಭರ್ಜರಿ ಜಯಘೋಷ ಕೂಗಿದ್ದಾರೆ. ಮುಂದಿನ ಮುಖ್ಯಮಂತ್ರಿ ಡಿಕೆ ಎಂದು ಜೈಕಾರ ಹಾಕಿದ್ದಾರೆ. ಸಿದ್ದರಾಮಯ್ಯರ ಮುಂದೆಯೇ ಡಿಕೆ ಬೆಂಗಲಿಗರು …

Read More »

ಸಿದ್ದರಾಮಯ್ಯನವರೇ ರಾಷ್ಟ್ರ ರಾಜಕಾರಣಕ್ಕೆ ಬನ್ನಿ: ಕೆ.ಸಿ.ವೇಣುಗೋಪಾಲ್ ಮತ್ತೆ ಆಹ್ವಾನ

ಬೆಂಗಳೂರು: ಸಿದ್ದರಾಮಯ್ಯನವರೇ ನೀವು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್  ಮತ್ತೆ ಆಹ್ವಾನ ನೀಡಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ  ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕೆ.ಸಿ.ವೇಣುಗೋಪಾಲ್ ಆಹ್ವಾನಿಸಿದರು. ನಿಮ್ಮ ಸೇವೆ ರಾಷ್ಟ್ರಕ್ಕೂ ಬೇಕು. ರಾಷ್ಟ್ರ ಮಟ್ಟಕ್ಕೂ ನೀವು ಬೇಕು ಎಂದು ಸಿಎಲ್‌ಪಿ ಸಭೆಯಲ್ಲಿ ಶಾಸಕರ ಎದುರೇ ವೇಣುಗೋಪಾಲ್ ಪ್ರಸ್ತಾಪ ಇಟ್ಟರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರು ಸಭೆಯಲ್ಲಿ …

Read More »